• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, May 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಾಲಕ್ಕಾಗಿ ಆಸ್ತಿ ಜಪ್ತಿ ಮಾಡಲು ಅವಕಾಶ ಇಲ್ಲ: ಹೈಕೋರ್ಟ್​ ಆದೇಶ

ಪ್ರತಿಧ್ವನಿ by ಪ್ರತಿಧ್ವನಿ
August 3, 2024
in Top Story, ಇತರೆ / Others, ಕರ್ನಾಟಕ
0
Share on WhatsAppShare on FacebookShare on Telegram

ಬೆಂಗಳೂರು:ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪಂಗಡಗಳ (ಕೆಲವು ಜಮೀನುಗಳ ಹಸ್ತಾಂತರ ನಿಷೇಧ) ಕಾಯ್ದೆ (ಪಿಟಿಸಿಎಲ್)ಯಡಿ ಮಂಜೂರಾದ ಜಮೀನನ್ನು ಜನರಲ್ ಪವರ್ ಆಫ್ ಅಟಾರ್ನಿ(ಜಿಪಿಎ) ಮಾಡಿಕೊಂಡ ಗೃಹ ನಿರ್ಮಾಣ ಸಂಘವು ಬ್ಯಾಂಕ್​ವೊಂದರಿಂದ ಪಡೆದ ಸಾಲಕ್ಕೆ ಬದಲಾಗಿ ಆಸ್ತಿ ಜಪ್ತಿ ಮಾಡಲು ಅವಕಾಶವಿಲ್ಲ ಎಂದು ಹೈಕೋರ್ಟ್ ಆದೇಶ ಹೊರಡಿಸಿದೆ.

ADVERTISEMENT

ಕಾಯ್ದೆಯಡಿ ಮಂಜೂರಾದ ಜಮೀನನ್ನು ಭೂ ಮಾಲೀಕರಿಗೆ ಮರುಸ್ಥಾಪಿಸಿ ಆದೇಶಿಸಿದ್ದ ಜಿಲ್ಲಾಧಿಕಾರಿ ಕ್ರಮ ಪ್ರಶ್ನಿಸಿ ಜಮೀನು ಅಡವಿಟ್ಟುಕೊಂಡು ಸಾಲ ಪಾವತಿಸಿದ್ದ ಬೆಂಗಳೂರು ಗ್ರಾಮಾಂತರ ಮತ್ತು ರಾಮನಗರ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜು ಅವರ ಏಕಸದಸ್ಯ ಪೀಠ ಈ ಆದೇಶ ನೀಡಿದೆ.

ವಾದ-ಪ್ರತಿವಾದ ಆಲಿಸಿದ ನ್ಯಾಯಪೀಠ, ಜಮೀನು ಮಾಲೀಕರಿಗೆ ಬ್ಯಾಂಕ್​ನಿಂದ ಪಡೆದ ಸಾಲದಿಂದ ಯಾವುದೇ ಲಾಭವಿಲ್ಲ. ಅಲ್ಲದೆ, ಬ್ಯಾಂಕ್ ಮತ್ತು ಜಮೀನು ಮಾಲೀಕರ ನಡುವೆ ಒಪ್ಪಂದವೂ ಆಗಿಲ್ಲ. ಆದರೆ, ಜಮೀನಿನ ಹಕ್ಕು ಹೊಂದಿರದ ಗೃಹ ನಿರ್ಮಾಣ ಸೊಸೈಟಿಯು ಆಸ್ತಿಯನ್ನು ಮತ್ತೊಂದು ಬ್ಯಾಂಕಿಗೆ ಅಡಮಾನವಿಟ್ಟು ಸಾಲ ಪಡೆದಿದೆ. ಹೀಗಾಗಿ ಜಮೀನನ್ನು ಹರಾಜು ನಡೆಸುವುದಕ್ಕೆ ಕಾನೂನಿನಲ್ಲಿ ಅವಕಾಶವಿರುವುದಿಲ್ಲ ಎಂದು ತಿಳಿಸಿದೆ.ಪ್ರಕರಣದಲ್ಲಿ ಭೂ ಮಾಲೀಕರಿಗೂ ಸಾಲ ನೀಡಿದ ಬ್ಯಾಂಕ್​ಗೂ ಸಂಬಂಧವಿಲ್ಲ.

ಕಾಯ್ದೆಯಡಿ ಜಮೀನು ಪರಭಾರೆ ಮಾಡುವುದು ಅಥವಾ ಹಸ್ತಾಂತರಿಸುವುದು ನಿಷೇಧವಿರಲಿದೆ. ಆದರೂ, ಅಂತಹ ಜಮೀನಿನ ಮೇಲೆ ಬ್ಯಾಂಕ್ ಸೇರಿ ಇತರ ಸಂಸ್ಥೆಗಳಿಂದ ಸಾಲ ಪಡೆದುಕೊಳ್ಳುವುದನ್ನು ನಿಷೇಧಿಸಲಾಗಿಲ್ಲ. ಅಂತಹ ಸಾಲ ಮರು ಪಾವತಿ ಮಾಡದಿದ್ದಲ್ಲಿ ಆ ರೀತಿಯ ಆದೇಶಗಳ ಮೂಲಕ ಜಮೀನಿನ ಮಾರಾಟ ಅಥವಾ ವರ್ಗಾವಣೆ ಮಾಡುವುದಕ್ಕೆ ಕಾಯ್ದೆಯಡಿ ಅವಕಾಶ ಇಲ್ಲ.

ಆದರೆ, ಪ್ರಕರಣದಲ್ಲಿ ಜಮೀನು ಮಾಲೀಕರು ಗೃಹನಿರ್ವಣ ಸೊಸೈಟಿಯಿಂದ ಮಾರಾಟದ ಒಪ್ಪಂದವನ್ನು ಮಾತ್ರ ಮಾಡಿಕೊಂಡಿದ್ದಾರೆ. ಆದರೆ, ಸೊಸೈಟಿ ಬ್ಯಾಂಕ್​ನಿಂದ ಸಾಲ ಪಡೆಯುವ ಸಂದರ್ಭದಲ್ಲಿ ಆಸ್ತಿಯ ಹೆಸರಿನಲ್ಲಿ ಅಡಮಾನ ಇಡಲಾಗಿದೆ. ಹೀಗಾಗಿ ಜಮೀನು ಮಾಲೀಕರು ಬ್ಯಾಂಕ್ ಮತ್ತು ಸೊಸೈಟಿ ಒಪ್ಪಂದಕ್ಕೆ ಜವಾಬ್ದಾರರಾಗುವುದಿಲ್ಲ ಎಂದು ಪೀಠ ತಿಳಿಸಿದೆ.

ಜಮೀನು ಮಾಲೀಕರು ಯಾವುದೇ ಸಾಲ ಪಡೆಯದ ಹಿನ್ನೆಲೆಯಲ್ಲಿ ಪಿಟಿಸಿಎಲ್ ಕಾಯ್ದೆಯ ಸೆಕ್ಷನ್ 5 ಮತ್ತು 5ಎ ಅಡಿಯಲ್ಲಿ ಉಪವಿಭಾಗಾಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳುನೀಡಿರುವ ತೀರ್ಪಿನಲ್ಲಿ ಯಾವುದೇ ಕಾನೂನು ಉಲ್ಲಂಘನೆಯಾಗಿಲ್ಲ ಎಂದು ನ್ಯಾಯಪೀಠ ಆದೇಶಿಸಿದೆ.

Tags: #[pratidhvanidigitalGovernment of IndiaHigh Court of Karnataka
Previous Post

ಆ.23ರಂದು ದೇಶದ ಮೊದಲ ಕೆಎಚ್‌ಐಆರ್ ಸಿಟಿ ಯೋಜನೆಗೆ ಚಾಲನೆ: ಸಚಿವ ಎಂ.ಬಿ ಪಾಟೀಲ್

Next Post

ತರುಣ್‌ ನನಗೆ ಸಿಕ್ಕಿದ್ದು ನನ್ನ ಅದೃಷ್ಟ ಸೋನಲ್..!

Related Posts

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !
Top Story

ದೇವೇಗೌಡರ ಭೇಟಿಯಿಂದ ಜಿಟಿ ದೇವೇಗೌಡ ರಾಜಕೀಯಕ್ಕೆ ಟ್ವಿಸ್ಟ್ !

by ಪ್ರತಿಧ್ವನಿ
May 15, 2026
0

ಬೆಂಗಳೂರು : ಜೆಡಿಎಸ್‌ನಿಂದ ಅಂತರ ಕಾಯ್ದುಕೊಂಡಿದ್ದಾರೆ ಎನ್ನಲಾಗುತ್ತಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ ಟಿ ದೇವೇಗೌಡ ಅವರು ದಿಢೀರ್ ಬೆಳವಣಿಗೆಯಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ...

Read moreDetails
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

May 15, 2026
ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

ಪಶ್ಚಿಮ ಏಷ್ಯಾ ಕಗ್ಗಂಟು ಗಂಭೀರ : ಭಾರತದಲ್ಲೇ ಇರಾನ್ ವಿದೇಶಾಂಗ ಸಚಿವರ ಸ್ಪೋಟಕ ಮಾತು

May 15, 2026
ಸುಪ್ರೀಂ ತೀರ್ಪು ದರ್ಶನ್‌ಗೆ ಲಾಭವೇ? : ವಕೀಲ ಬಾಲನ್ ಪ್ರತಿಧ್ವನಿಗೆ  ಹೇಳಿದ್ದೇನು

ಪಶ್ಚಿಮ ಏಷ್ಯಾ ಶಾಂತಿಗೆ ಭಾರತದ ಬೆಂಬಲ : ಮೋದಿ ಹೇಳಿಕೆಯಿಂದ ಹೊಸ ರಾಜತಾಂತ್ರಿಕ ಸಂದೇಶ

May 15, 2026
ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

ಇಸ್ರೇಲ್ – ಕರ್ನಾಟಕದ ನಡುವೆ ಆರಂಭವಾಗಲಿದೆಯಾ ಕೌಶಲ್ಯಯುತ ಶ್ರಮಶಕ್ತಿ ಒಪ್ಪಂದ? : ಸಚಿವ ಲಾಡ್‌ ಪ್ಲ್ಯಾನ್‌ ಏನು..?

May 15, 2026
Next Post

ತರುಣ್‌ ನನಗೆ ಸಿಕ್ಕಿದ್ದು ನನ್ನ ಅದೃಷ್ಟ ಸೋನಲ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada