• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 18, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ; ಅಧ್ಯಯನ ಸಮಿತಿಯಲ್ಲಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಪ್ರತಿನಿಧಿಗಳಿಲ್ಲ

ಫಾತಿಮಾ by ಫಾತಿಮಾ
July 3, 2022
in ಕರ್ನಾಟಕ, ದೇಶ
0
ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ; ಅಧ್ಯಯನ ಸಮಿತಿಯಲ್ಲಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ ಪ್ರತಿನಿಧಿಗಳಿಲ್ಲ
Share on WhatsAppShare on FacebookShare on Telegram

ಪಶ್ಚಿಮ ಘಟ್ಟಗಳ ಮೇಲೆ ಹಾದು ಹೋಗಲಿರುವ ಹುಬ್ಬಳ್ಳಿ-ಅಂಕೋಲಾ ರೈಲು ಮಾರ್ಗ ಯೋಜನೆಯ ಪರಿಣಾಮದ ಅಧ್ಯಯನಕ್ಕಾಗಿ ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವಾಲಯವು ಈಗಾಗಲೇ ಸಮಿತಿ ರಚಿಸಿದ್ದು, ಆ ಸಮಿತಿಯಲ್ಲಿ ರಾಷ್ಟ್ರೀಯ ಹುಲಿ ಸಂರಕ್ಷಣಾ ಪ್ರಾಧಿಕಾರದ (ಎನ್‌ಟಿಸಿಎ) ಪ್ರತಿನಿಧಿಯನ್ನು ಸೇರಿಸದೆ ಇರುವುದರ ಬಗ್ಗೆ ಕಳವಳ ವ್ಯಕ್ತವಾಗಿದೆ.

ADVERTISEMENT

ಕರ್ನಾಟಕ ಹೈಕೋರ್ಟ್‌‌ ಸಮಿತಿ ರಚಿಸಲು ಆದೇಶ ನೀಡಿದ ನಂತರ ಜೂನ್ 3 ರಂದು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯದ (MOEF ಮತ್ತು CC) ವನ್ಯಜೀವಿ ವಿಭಾಗವು ಯೋಜನೆಯನ್ನು ಪರಿಶೀಲಿಸಲು ಏಳು ಸದಸ್ಯರ ಸಮಿತಿಯನ್ನು ರಚಿಸಿದೆ. ಈ ಸಮಿತಿಗೆ MOEF ನ ಅರಣ್ಯ ಸಂರಕ್ಷಣಾ ವಿಭಾಗದ ಅರಣ್ಯಗಳ ಹೆಚ್ಚುವರಿ ಮಹಾನಿರ್ದೇಶಕರು ನೇತೃತ್ವ ನೀಡಲಿದ್ದ ಮತ್ತು ಇತರ ಆರು ಜನರನ್ನು ಸದಸ್ಯರಾಗಿ ಹೊಂದಿದೆ.

ಲಿವಿಂಗ್ ಅರ್ಥ್ ಫೌಂಡೇಶನ್ (LEAF) ನ ಸದಸ್ಯರು ಈ ಯೋಜನೆಯನ್ನು ಅಂಶಿ-ದಾಂಡೇಲಿ ಹುಲಿ ಸಂರಕ್ಷಿತ ಪ್ರದೇಶದ ಬಫರ್ ವಲಯದಲ್ಲಿ ಪ್ರಸ್ತಾಪಿಸಲಾಗಿದೆ ಮತ್ತು ಇದು ಪಶ್ಚಿಮ ಘಟ್ಟಗಳ ಜೀವವೈವಿಧ್ಯದ ಹಾಟ್‌ಸ್ಪಾಟ್ ಆಗಿರುವ ಕಾಳಿ ಮತ್ತು ಭದ್ರಾ ಹುಲಿ ಸಂರಕ್ಷಿತ ಪ್ರದೇಶದ ನಡುವಿನ ಪ್ರದೇಶದ ಮೂಲಕ ಹಾದುಹೋಗುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. “ಹುಬ್ಬಳ್ಳಿ-ಅಂಕೋಲಾ ರೈಲ್ವೆ ಮಾರ್ಗಕ್ಕಾಗಿ ಕಾರವಾರ, ಯಲ್ಲಾಪುರ ಮತ್ತು ಧಾರವಾಡ ವಿಭಾಗದಲ್ಲಿ 595.64 ಹೆಕ್ಟೇರ್ ಅರಣ್ಯ ಭೂಮಿಯನ್ನು ಬಳಸುವ ಕುರಿತು NTCA ಡಿಸೆಂಬರ್ 2017 ರಲ್ಲಿ ಸೈಟ್ ಮೌಲ್ಯಮಾಪನ ವರದಿಯನ್ನು ಸಲ್ಲಿಸಿದೆ” ಎಂದು ಫೌಂಡೇಶನ್ ಹೇಳಿದೆ.

MoEFCCಗೆ ನೀಡಿದ ನಿಯಮಗಳು ‘ಯೋಜನೆಯ ಮೌಲ್ಯಮಾಪನವನ್ನು ಮಾಡಲು ಯಾವುದೇ ತಜ್ಞರನ್ನು ಕೋ-ಆಪ್ಟ್ ಮಾಡಲು’ ಅನುಮತಿಸುತ್ತದೆ ಎಂದು ಹೇಳಿರುವ ಪ್ರತಿಷ್ಠಾನವು NTCA ಯ ತಜ್ಞರು ಈ ಸಮಿತಿಯಲ್ಲಿ ಇರಬೇಕಾಗಿದ್ದು ಅಗತ್ಯವಾಗಿದ್ದು ಅವರನ್ನು ಹೊರಗಿಡಬಾರದು ಎಂದು ಹೇಳಿದೆ.

ಪಾರದರ್ಶಕತೆಯ ಕೊರತೆ

LEAF ನ ಶ್ರೀಜಾ ಚಕ್ರವರ್ತಿ, ರಜನಿ ಸಂತೋಷ್ ಮತ್ತು ಸಂಧ್ಯಾ ಬಾಲಸುಬ್ರಮಣಿಯನ್ ಅವರು ರಾಷ್ಟ್ರೀಯ ವನ್ಯಜೀವಿ ಮಂಡಳಿ (NBWL) ಅಳವಡಿಸಿಕೊಂಡ ಕಾರ್ಯವಿಧಾನದಲ್ಲಿ ಪಾರದರ್ಶಕತೆಯ ಕೊರತೆ ಇದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ.

NBWL ನ 68 ನೇ ಸಭೆಯು ಮೇ 30 ರಂದು ನಡೆದಿದ್ದು, ಸಭೆಯ ನಡಾವಳಿಗಳನ್ನು ಜೂನ್ 26 ರವರೆಗೂ MoeF ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿಲ್ಲ ಮತ್ತು ಸಮಿತಿಯನ್ನು ರಚಿಸುವ ಆದೇಶವನ್ನು ಸಹ ಸಾರ್ವಜನಿಕಗೊಳಿಸಲಾಗಿಲ್ಲ.

ಸಮಿತಿ ಮಾಡಲು ಆದೇಶ‌ ನೀಡಿದ ಹೈಕೋರ್ಟ್ ಯೋಜನೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಲು ಬಯಸುವ ಸಾರ್ವಜನಿಕ ಪ್ರತಿನಿಧಿಗಳು, ಸರ್ಕಾರೇತರ ಸಂಸ್ಥೆಗಳು ಮತ್ತು ಇತರ ಮಧ್ಯಸ್ಥಗಾರರಿಗೆ ಅವಕಾಶ ನೀಡಬೇಕು ಎಂದಿದೆ. ಸಮಿತಿಯು ತನ್ನ ವರದಿಯನ್ನು ಸಚಿವಾಲಯಕ್ಕೆ ಸಲ್ಲಿಸಲು ಎರಡೂವರೆ ತಿಂಗಳ ಕಾಲಾವಕಾಶವನ್ನು ನೀಡಿದ್ದು, ಆ ನಂತರ ಅದನ್ನು ಹೈಕೋರ್ಟ್‌ಗೂ ಸಲ್ಲಿಸಬೇಕಿದೆ. ಎನ್‌ಜಿಒ ಸಮಿತಿಗೆ ಪತ್ರ ಬರೆದಿದ್ದು ಸಾರ್ವಜನಿಕರಿಗೆ ತಮ್ಮ ಅಭಿಪ್ರಾಯವನ್ನು ಹೇಳಲು ಅವಕಾಶ ಒದಗಿಸಲು ಕನಿಷ್ಠ ಒಂದು ವಾರ ಮುಂಚಿತವಾಗಿ ವೆಬ್‌ಸೈಟ್‌ಗೆ ಭೇಟಿ ನೀಡಬೇಕಾದ ದಿನಾಂಕವನ್ನು ಸಾರ್ವಜನಿಕರಿಗೆ ತಿಳಿಸಬೇಕೆಂದು ವಿನಂತಿಸಿದೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಉಲ್ಬಣಿಸಿದ ಬಿಕ್ಕಟ್ಟು ಪಲಾಯನದ ಮಹಾಪೂರ

Next Post

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 16,103 ಕರೋನಾ ಪಾಸಿಟಿವ್, 31 ಮಂದಿ ಸಾವು

Related Posts

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..
Top Story

ಸಿಜೆಐ ನ್ಯಾ.ಸೂರ್ಯಕಾಂತ್‌ರಿಂದ ಬೆಂಗಳೂರಿನಲ್ಲಿ ಜಾಗತಿಕ ಸುಸ್ಥಿರ ಇಂಧನ ಸಮ್ಮೇಳನ ಉದ್ಘಾಟನೆ : ಸಿಎಂ ಸಿದ್ದರಾಮಯ್ಯ ಭಾಗಿ..

by ಪ್ರತಿಧ್ವನಿ
April 17, 2026
0

ಬೆಂಗಳೂರು :  ಸುಸ್ಥಿರ ಇಂಧನ, ಭಾರತದ ಕಾರ್ಯಸೂಚಿ 2047-ಇಂಧನ ಭದ್ರತೆಗಾಗಿ ಕಾನೂನು, ನೀತಿ ಹಾಗೂ ಆವಿಷ್ಕಾರಗಳ ಹೊಸ ಚಿಂತನೆ ಕುರಿತ ಎರಡು ದಿನಗಳ ಅಂತಾರಾಷ್ಟ್ರೀಯ ಸಮ್ಮೇಳನ ಏಪ್ರಿಲ್...

Read moreDetails
BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

BIG BREAKING : ಕಾಂಗ್ರೆಸ್‌ ಪಾಳಯಕ್ಕೆ ಶಾಕ್‌ : ಶಾಸಕ ವಿನಯ್‌ ಕುಲಕರ್ಣಿಗೆ ಜೀವಾವಧಿ ಶಿಕ್ಷೆ..

April 17, 2026
ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

ನಮ್ಮೊಡನಿದ್ದು ನಮ್ಮೊಳಗಿಲ್ಲದ ಅಂಬೇಡ್ಕರ್

April 17, 2026
ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

ಉದಯನಿಧಿಗೆ ವಿಜಯ್‌ ಖಡಕ್‌ ಕೌಂಟರ್‌ : ತಾನು ಸ್ಪರ್ಧಿಸಿರುವ ಕ್ಷೇತ್ರದ ಮತದಾರರಿಗೆ ಥಳಪತಿ ಮನವಿ ಏನು..?

April 17, 2026
114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

114 ನ್ಯಾಯಾಧೀಶರ ವರ್ಗಾವಣೆ: ವಿನಯ್ ಕುಲಕರ್ಣಿ ಪ್ರಕರಣದ ತೀರ್ಪು ನೀಡಿದ ನ್ಯಾಯಾಧೀಶರೂ ವರ್ಗಾವಣೆ

April 16, 2026
Next Post
ಕೋವಿಡ್-19: ತಮಿಳುನಾಡಿನ 1,800 ವೈದ್ಯರಿಗೆ ಕೆಲಸ ಕಳೆದುಕೊಳ್ಳುವ ಆತಂಕ

ದೇಶದಲ್ಲಿ ಕಳೆದ 24 ಗಂಟೆಯಲ್ಲಿ 16,103 ಕರೋನಾ ಪಾಸಿಟಿವ್, 31 ಮಂದಿ ಸಾವು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada