• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, May 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಾಸರಗೋಡು ಗ್ರಾಮಗಳ ಹೆಸರು ಬದಲಾವಣೆ ಇಲ್ಲ: ಮಂಜೇಶ್ವರ ಶಾಸಕ ಸ್ಪಷ್ಟನೆ – ಹೆಚ್ಡಿಕೆ ಮೆಚ್ಚುಗೆ

ಅಲ್ಮೆಡಾ ಗ್ಲಾಡ್ಸನ್ by ಅಲ್ಮೆಡಾ ಗ್ಲಾಡ್ಸನ್
June 29, 2021
in ಕರ್ನಾಟಕ
0
ಕಾಸರಗೋಡು ಗ್ರಾಮಗಳ ಹೆಸರು ಬದಲಾವಣೆ ಇಲ್ಲ: ಮಂಜೇಶ್ವರ ಶಾಸಕ ಸ್ಪಷ್ಟನೆ – ಹೆಚ್ಡಿಕೆ ಮೆಚ್ಚುಗೆ
Share on WhatsAppShare on FacebookShare on Telegram

ಭಾರೀ ಚರ್ಚೆಗೊಳಗಾಗಿದ್ದ ಕೇರಳ ಸರ್ಕಾರ ಕಾಸರಗೋಡು ಜಿಲ್ಲೆಯ ಕೆಲವು ಹಳ್ಳಿಗಳ ಕನ್ನಡದ ಹೆಸರನ್ನು ಬದಲಾಯಿಸಲು ಮುಂದಾದ ಸುದ್ದಿ ಸತ್ಯಕ್ಕೆ ದೂರವಾದದ್ದು, ಕನ್ನಡದ ಹೆಸರು ಬದಲಾವಣೆ ಪ್ರಸ್ತಾಪ ಈಗ ಇಲ್ಲವೆಂದು ಕೇರಳದ ಮಂಜೇಶ್ವರ ಶಾಸಕ ಎ.ಕೆ.ಎಂ. ಅಶ್ರಫ್ ಸ್ಪಷ್ಟಪಡಿಸಿದ್ದಾರೆ.

ADVERTISEMENT

ಈ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ರಾಜ್ಯದ ಹಲವು ನಾಯಕರು ವಿರೋಧ ವ್ಯಕ್ತಪಡಿಸಿ ಕೇರಳ ಮುಖ್ಯಮಂತ್ರಿಗೆ ಪತ್ರವೂ ಬರೆದಿದ್ದರು.

“ಕೇರಳ ವಿಧಾನ ಸಭೆಯಲ್ಲಿ ಮಂಜೇಶ್ವರದ ಶಾಸಕನೆಂಬ ನೆಲೆಯಲ್ಲಿ ಕೆಲವು ವಿಚಾರಗಳನ್ನು ನಿಮ್ಮ ಮುಂದಿಡುತ್ತೇನೆ. ಕಳೆದ ಕೆಲವು ದಿನಗಳಿಂದ ಕಾಸರಗೋಡು ಜಿಲ್ಲೆಯ ವಿವಿಧ ಪ್ರದೇಶಗಳ ಹೆಸರುಗಳನ್ನು ಬದಲಾಯಿಸಲಾಗಿದೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕೇಂದ್ರ ಸಚಿವರುಗಳು ಈ ವಿಚಾರದಲ್ಲಿ ಟ್ಟೀಟ್ ಮಾಡುವ ಮೂಲಕ ಚರ್ಚೆ ಮಹತ್ವ ಪಡೆದುಕೊಂಡಿದೆ. ಕರ್ನಾಟಕದ ಗಡಿ ಅಭಿವೃದ್ಧಿ ಪ್ರಾಧಿಕಾರವು ಈ ವಿಚಾರದಲ್ಲಿ ಮನವಿಯನ್ನು ನೀಡಿರುವುದು ಈ ಎಲ್ಲಾ ಚರ್ಚೆಗೆ ಕಾರಣವಾಯಿತು.

ಕಾಸರಗೋಡಿನ ಗ್ರಾಮಗಳ ಕನ್ನಡ ಹೆಸರಿನ ಮಲಯಾಳೀಕರಣ ವಿಚಾರ ಮುನ್ನೆಲೆಗೆ ಬರುವುದರ ಹಿಂದೆ ಯಾವ ತಂತ್ರವಿತ್ತೋ ತಿಳಿಯದು. ಆದರೆ, ‘ಕನ್ನಡ, ಕನ್ನಡಿಗ, ಕರ್ನಾಟಕ‘ಕ್ಕೆ ಏನೋ ಅಪಚಾರವಾಗುತ್ತಿದೆ ಎಂದು ಭಾವಿಸಿ ಕೇರಳ ಸಿಎಂ @vijayanpinarayi ರಿಗೆ ಪತ್ರ ಬರೆಯಲಾಯಿತು. ಆದರೆ, ಅಂಥ ಪ್ರಸ್ತಾವ ಇಲ್ಲ ಎಂಬ ಕೇರಳದ ಸ್ಪಷ್ಟನೆಯು ಸಮಾಧಾನ ಮೂಡಿಸಿದೆ.
1/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 29, 2021

ಈ ಬಗ್ಗೆ ಕೇರಳ ಮುಖ್ಯ ಮಂತ್ರಿ ಅವರ ಕಛೇರಿಯನ್ನು ಮತ್ತು ಅವರ ಪಿ ಎ ಅವರನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆಯಲಾಯಿತು. ಕಾಸರಗೋಡು ಜಿಲ್ಲಾಧಿಕಾರಿಯವರನ್ನು ಪೋನ್ ಮೂಲಕ ಸಂಪರ್ಕಿಸಿ ಮಾಹಿತಿ ಪಡೆಯಲಾಗಿದೆ. ಈ ಎಲ್ಲಾ ಮಾಹಿತಿ ಪ್ರಕಾರ ಸ್ಥಳ ನಾಮ ಬದಲಾವಣೆ ಬಗ್ಗೆ ಹೊರ ಬರುವ ವಿಚಾರಗಳು ವಾಸ್ತವಕ್ಕೆ ವಿರುದ್ಧ. ಇಂತಹ ಯಾವುದೇ ಸುತ್ತೋಲೆ ಕೇರಳ ಸರಕಾರ ಹೊರಡಿಸಲಿಲ್ಲ. ಆದರೆ ರೇಶನ್ ಕಾರ್ಡ್ ನಲ್ಲಿ ಸಾಪ್ಟ್ ವೇರ್ ಕಾರಣದಿಂದ ಕೆಲವು ಹೆಸರುಗಳಲ್ಲಿ ಬದಲಾವಣೆ ಆಗಿರುವುದು ಸತ್ಯ. ಆದರೆ ಇದು ತಾಂತ್ರಿಕ ಕಾರಣದಿಂದ ಉಂಟಾದ ಲೋಪ.ಇದನ್ನು ಸರಿಪಡಿಸಲು ತುರ್ತು ಕ್ರಮ ಕೈಗೊಳ್ಳುವುದಾಗಿ ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ” ಎಂದು ಮಂಜೇಶ್ವರಂ ಶಾಸಕ ಎಕೆ ಎಮ್ ಅಶ್ರಫ್ ಸ್ಪಷ್ಟನೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮೂಲಕ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ʼಕಾಸರಗೋಡಿನ ಗ್ರಾಮಗಳ ಕನ್ನಡ ಹೆಸರಿನ ಮಲಯಾಳೀಕರಣ ವಿಚಾರ ಮುನ್ನೆಲೆಗೆ ಬರುವುದರ ಹಿಂದೆ ಯಾವ ತಂತ್ರವಿತ್ತೋ ತಿಳಿಯದು. ಆದರೆ, ‘ಕನ್ನಡ, ಕನ್ನಡಿಗ, ಕರ್ನಾಟಕಕ್ಕೆ ಏನೋ ಅಪಚಾರವಾಗುತ್ತಿದೆ ಎಂದು ಭಾವಿಸಿ ಕೇರಳ ಸಿಎಂ ರಿಗೆ ಪತ್ರ ಬರೆಯಲಾಯಿತು. ಆದರೆ, ಅಂಥ ಪ್ರಸ್ತಾವ ಇಲ್ಲ ಎಂಬ ಕೇರಳದ ಸ್ಪಷ್ಟನೆಯು ಸಮಾಧಾನ ಮೂಡಿಸಿದೆ. ಕಾಸರಗೋಡಿನಲ್ಲಿ ಕನ್ನಡಕ್ಕೆ ಧಕ್ಕೆಯಾದರೆ ಹೋರಾಟ ನಡೆಸುವುದಾಗಿಯೂ, ಅದರ ನೇತೃತ್ವ ತಾವೇ ವಹಿಸುವುದಾಗಿಯೂ ಮಂಜೇಶ್ವರದ ಶಾಸಕ ಅಶ್ರಫ್ ಎ ಕೆ ಎಮ್ ಹೇಳಿದ್ದಾರೆ. ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಅಭಿಮಾನ ಮೆರೆದಿದ್ದ ಅಶ್ರಫ್ ಹೇಳಿಕೆಯು ಮತ್ತಷ್ಟು ಸಮಾಧಾನ ತಂದಿದೆ. ಕನ್ನಡಪರವಾದ ನಿಲುವು ಪ್ರಕಟಿಸಿರುವ ಅಶ್ರಫ್ ಅವರನ್ನು ಅಭಿನಂದಿಸುತ್ತೇನೆʼ ಎಂದು ಹೇಳಿದ್ದಾರೆ.

ಕಾಸರಗೋಡಿನಲ್ಲಿ ಕನ್ನಡಕ್ಕೆ ದಕ್ಕೆಯಾದರೆ ಹೋರಾಟ ನಡೆಸುವುದಾಗಿಯೂ, ಅದರ ನೇತೃತ್ವ ತಾವೇ ವಹಿಸುವುದಾಗಿಯೂ ಮಂಜೇಶ್ವರ ಶಾಸಕ @ashru_akm ಹೇಳಿದ್ದಾರೆ. ಕನ್ನಡದಲ್ಲಿ ಪ್ರಮಾಣ ವಚನ ಸ್ವೀಕರಿಸಿ ಅಭಿಮಾನ ಮೆರೆದಿದ್ದ ಅಶ್ರಫ್‌ ಹೇಳಿಕೆಯು ಮತ್ತಷ್ಟು ಸಮಾಧಾನ ತಂದಿದೆ. ಕನ್ನಡಪರವಾದ ನಿಲುವು ಪ್ರಕಟಿಸಿರುವ ಅಶ್ರಫ್‌ ಅವರನ್ನು ಅಭಿನಂದಿಸುತ್ತೇನೆ.
2/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 29, 2021

ಸರಣಿ ಟ್ವೀಟ್ ಮಾಡಿದ ಅವರು ʼಭಾಷಾ ಸಾಮರಸ್ಯದ ವಿಚಾರದಲ್ಲಿ ಕರ್ನಾಟಕ–ಕೇರಳ ರಾಜ್ಯಗಳು ಪರಸ್ಪರ ಪೂರಕವಾಗಿ ನಡೆದುಕೊಂಡು ಬಂದಿವೆ. ಆದರೂ ಹೆಸರು ಬದಲಾವಣೆಯ ಚರ್ಚೆ ಮುನ್ನೆಲೆಗೆ ಬಂದಿದ್ದು ಹೇಗೆ, ಇದಕ್ಕೆ ಕಾರಣಗಳೇನು ಎಂಬುದನ್ನು ಪತ್ತೆ ಹಚ್ಚಬೇಕು. ಈ ಪ್ರಯತ್ನವು ಸಾಮರಸ್ಯವನ್ನು ಕೆಡಿಸುವ ಉದ್ದೇಶವನ್ನೇ ಹೊಂದಿದ್ದರೆ ಎರಡೂ ರಾಜ್ಯಗಳು ಜಾಗೃತರಾಗಬೇಕಾದ ಅಗತ್ಯವಿದೆʼ ಎಂದು ಹೇಳಿದ್ದಾರೆ.

ಭಾಷಾ ಸಾಮರಸ್ಯದ ವಿಚಾರದಲ್ಲಿ ಕರ್ನಾಟಕ–ಕೇರಳ ರಾಜ್ಯಗಳು ಪರಸ್ಪರ ಪೂರಕವಾಗಿ ನಡೆದುಕೊಂಡು ಬಂದಿವೆ. ಆದರೂ ಹೆಸರು ಬದಲಾವಣೆಯ ಚರ್ಚೆ ಮುನ್ನೆಲೆಗೆ ಬಂದಿದ್ದು ಹೇಗೆ, ಇದಕ್ಕೆ ಕಾರಣಗಳೇನು ಎಂಬುದನ್ನು ಪತ್ತೆ ಹಚ್ಚಬೇಕು. ಈ ಪ್ರಯತ್ನವು ಸಾಮರಸ್ಯವನ್ನು ಕೆಡಿಸುವ ಉದ್ದೇಶವನ್ನೇ ಹೊಂದಿದ್ದರೆ ಎರಡೂ ರಾಜ್ಯಗಳು ಜಾಗೃತರಾಗಬೇಕಾದ ಅಗತ್ಯವಿದೆ.
3/4

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) June 29, 2021

ʼಕಾಸರಗೋಡು ಗ್ರಾಮಗಳ ಹೆಸರುಗಳ ಮಲಯಾಳೀಕರಣವನ್ನು ವಿರೋಧಿಸುವ ಮೂಲಕ ಕನ್ನಡಿಗರು ಕನ್ನಡದ ವಿಚಾರದಲ್ಲಿ ಮತ್ತೊಮ್ಮೆ ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಈ ಬಗ್ಗೆ ಅತಿ ಶೀಘ್ರದಲ್ಲೇ ಕೇರಳ ಸರ್ಕಾರದಿಂದ ಸ್ಪಷ್ಟನೆ ಬರುವಂತೆ ಮಾಡಿದ್ದಾರೆ. ಈ ಸಾತ್ವಿಕ ಹೋರಾಟದಲ್ಲಿ ಭಾಗಿಯಾದ ಕನ್ನಡ ಮನಸ್ಸುಗಳನ್ನೂ ನಾನು ಈ ಸಂದರ್ಭದಲ್ಲಿ ಅಭಿನಂದಿಸುತ್ತೇನೆʼ ಎಂದು ಶ್ಲಾಘನೆ ವ್ಯಕ್ತಪಡಿಸಿದ್ದಾರೆ.

Previous Post

ಸ್ಥಾವರ ಜಂಗಮದ ಸಂಘರ್ಷದಲ್ಲಿ ವಿವೇಕ

Next Post

ದಲಿತ ಸಿಎಂ ಚರ್ಚೆಗೆ ಪ್ರತಿಯಾಗಿ ಅಹಿಂದ ದಾಳ ಉರುಳಿಸಿದರೆ ಸಿದ್ದರಾಮಯ್ಯ?

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
Next Post
ದಲಿತ ಸಿಎಂ ಚರ್ಚೆಗೆ ಪ್ರತಿಯಾಗಿ ಅಹಿಂದ ದಾಳ ಉರುಳಿಸಿದರೆ ಸಿದ್ದರಾಮಯ್ಯ?

ದಲಿತ ಸಿಎಂ ಚರ್ಚೆಗೆ ಪ್ರತಿಯಾಗಿ ಅಹಿಂದ ದಾಳ ಉರುಳಿಸಿದರೆ ಸಿದ್ದರಾಮಯ್ಯ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada