ರಾಜ್ಯದಲ್ಲಿ ಸದ್ಯಕ್ಕೆ ಹಾಲಿನ ದರ ಹಾಗೂ ವಿದ್ಯುತ್ ದರ ಏರಿಕೆ,ಇಳಿಕೆಯ ಬಗ್ಗೆ ಸದಾ ಚರ್ಚೆಗಳಾಗುತ್ತಲೇ ಇರುತ್ತದೆ. ಇದೀಗ ಮುಖ್ಯಮಂತ್ರಿ ಬಸವರಾಜಬೊಮ್ಮಾಯಿ ವಿದ್ಯುತ್ ದರ ಹಾಗೂ ಹಾಲಿನ ಬೆಲೆಯಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಚರ್ಚೆಗಳಿಗೆ ತೆರೆ ಎಳೆದಿದ್ದಾರೆ, ಆಡಳಿತದಲ್ಲಿ ದರ ಏರಿಕೆಯ ಪ್ರಸ್ತಾಪಗಳು ಇದ್ದೇ ಇರುತ್ತವೆ. ಎಲ್ಲ ಆಯಾಮಗಳಿಂದಲೂ ಚರ್ಚಿಸಿ ತೀರ್ಮಾನ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಇತ್ತೀಚೆಗಷ್ಟೇ ಹಾಲಿನ ದರವನ್ನು ಪ್ರತಿ ಲೀಟರ್‌ಗೆ 3ರೂ., ವಿದ್ಯುತ್ ದರವನ್ನು ಯೂನಿಟ್ಗೆ 2 ರೂ. ಹಾಗೂ ನೀರಿನ ದರವನ್ನು ಹೆಚ್ಚಳ ಮಾಡಬೇಕೆಂದು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.
ವಿದ್ಯುತ್ ದರ ಹೆಚ್ಚಳಕ್ಕಾಗಿ ಸದ್ಯ ಎಲ್ಲ ಎಸ್ಕಾಂಗಳು, ನೀರಿನ ದರ ಹೆಚ್ಚಳಕ್ಕಾಗಿ ಬೆಂಗಳೂರು ಜಲಮಂಡಳಿ, ಹಾಲಿನ ದರ ಹೆಚ್ಚಳಕ್ಕಾಗಿ ಕರ್ನಾಟಕ ಹಾಲು ಮಹಾಮಂಡಳಿ ದರ ಹೆಚ್ಚಳ ಪ್ರಸ್ತಾವನೆಯನ್ನು ಸರ್ಕಾರದ ಮುಂದೆ ಇಟ್ಟಿವೆ. ಮುಂದಿನ ದಿನಗಳಲ್ಲಿಆಗುವ ಬೆಲೆಗಳ ಏರಿಳಿತಗಳ ಬಗ್ಗೆ ಕಾದುನೋಡಬೇಕಿದೆ.