• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, April 19, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ: ಬಸವರಾಜ ಬೊಮ್ಮಾಯಿ

ಪ್ರತಿಧ್ವನಿ by ಪ್ರತಿಧ್ವನಿ
September 10, 2023
in Top Story, ಇದೀಗ, ಕರ್ನಾಟಕ, ರಾಜಕೀಯ
0
ಬಸವರಾಜ ಬೊಮ್ಮಾಯಿ

ಬಸವರಾಜ ಬೊಮ್ಮಾಯಿ

Share on WhatsAppShare on FacebookShare on Telegram

ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ. ನಾನು ಹಾವೇರಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಗುತ್ತೇನೆ ಅನ್ನುವುದು ಮಾದ್ಯಮದ ಸೃಷ್ಟಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದ್ದಾರೆ.

ADVERTISEMENT

ಶನಿವಾರ (ಸೆಪ್ಟೆಂಬರ್ 9) ನಡೆದ ಹಾವೇರಿ ಜಿಲ್ಲಾ ಕೋರ್ ಕಮಿಟಿ ಸಭೆಯ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇಂದು ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಿತು. ಹಾವೇರಿ ಗದಗ ಲೋಕಸಭಾ ಕ್ಷೇತ್ರವನ್ನು ಗೆಲ್ಲುವ ಬಗ್ಗೆ ಚರ್ಚೆ ನಡೆಯಿತು ಸಭೆಯಲ್ಲಿ ಕೆಲವು ನಿರ್ಣಯ ಕೈಗೊಂಡಿದ್ದೆವೆ. ಪಕ್ಷದ ಅಧ್ಯಕ್ಷರು ಪದಾದಿಕಾರಿಗಳು ಸೇರಿ ತಂಡ ಮಾಡಿ ಕೋರ್ ಸಮಿತಿ ಮಾಡಬೇಕು ಎಂಬ ನಿರ್ಣಯ ಆಗಿತ್ತು. ಹೀಗಾಗಿ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ ಅಭ್ಯರ್ಥಿಗಳ ಜೊತೆ ಚರ್ಚೆ ಮಾಡಿದ್ದೇನೆ ಎಂದರು.

ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ನೀತಿಗಳ ವಿರುದ್ದ ಜನಾಂದೋಲನ ರೂಪಿಸುವ ಬಗ್ಗೆ ಚರ್ಚೆ ಆಯಿತು. ಸಭೆಯಲ್ಲಿ ಕೆಲವು ತೀರ್ಮಾನ ಮಾಡಿದ್ದೇವೆ. ಬೂತ್ ಮಟ್ಟದಿಂದ ಮತ್ತೆ ಸಂಘಟನೆ ಮಾಡುವುದು. ಯುವಕರಿಗೆ, ಮಹಿಳೆಯರಿಗೆ, ಒಬಿಸಿಯವರಿಗೆ ಹೆಚ್ಚಿನ ಪ್ರಧಾನ್ಯತೆ ಕೊಡುವುದು. ಹಾವೇರಿ ಜಿಲ್ಲಾ ಕೇಂದ್ರದಲ್ಲಿ ಹೋರಾಟ ಮಾಡುವ ಬಗ್ಗೆ ಚರ್ಚೆ ಆಯಿತು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಸ್ಪರ್ಧೆ ಇಲ್ಲ:

ನಾನು ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತೇನೆ ಎಂದು ಎಲ್ಲಿಯೂ ಹೇಳಿಲ್ಲ. ರಾಷ್ಟ್ರ ರಾಜಕಾರಣಕ್ಕೆ ಹೋಗುತ್ತೇನೆ ಅಂತ ನಾನು ಎಲ್ಲಾದರೂ ಹೇಳಿದಿನಾ ಎಂದು ಪ್ರಶ್ನಿಸಿದರು.

ಹಾವೇರಿ ಕ್ಷೇತ್ರದ ಈಶ್ವರಪ್ಪ ಪುತ್ರ ಕಾಂತೇಶ್ ಸ್ಪರ್ಧೆ ಮಾಡುತ್ತಾರೆ ಎನ್ನುವ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಈ ವಿಚಾರರಕ್ಕೆ ನನ್ನ ಉತ್ತರ ಇಷ್ಟೆ ಪಕ್ಷ ತೀರ್ಮಾನ ಮಾಡುತ್ತದೆ ಎಂದರು.

ಜೆಡಿಎಸ್- ಬಿಜೆಪಿ ಮೈತ್ರಿ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ದೆಹಲಿಯಲ್ಲಿ ಏನು ನಡೆದಿದೆ ಎನ್ನುವ ಸ್ಪಷ್ಟ ಮಾಹಿತಿ ಇಲ್ಲ. ಈ ಅನಿಷ್ಟ ಸರ್ಕಾರದ ವಿರುದ್ಧ ಜಂಟಿ ಹೋರಾಟ ಮಾಡುವ ಭಾವನೆ ಎಲ್ಲರಿಗೂ ಇದೆ. ಅಮಿತ್ ಶಾ- ದೇವೆಗೌಡರ ಭೇಟಿ ಸ್ವಾಗತಾರ್ಹ. ಜೆಡಿಎಸ್ ನವರೂ ಸ್ಪಷ್ಟವಾಗಿ ಏನೂ ಹೇಳುತ್ತಿಲ್ಲ. ಕೆಲವೇ ವಾರಗಳಲ್ಲಿ ಯಾರಿಗೆ ಎಷ್ಟು ಕ್ಷೇತ್ರ ಎನ್ನುವ ಅಂಕಿ ಸಂಖ್ಯೆ ಸ್ಪಷ್ಟ ಆಗಲಿದೆ ಎಂದರು.

ವಿಪಕ್ಷ ನಾಯಕನ ಆಯ್ಕೆ ವಿಳಂಬ ಆಗುತ್ತಿರುವ ಬಗ್ಗೆ ಯಾರಿಗೂ ಗೊತ್ತಿಲ್ಲ. ರಾಜ್ಯಾದ್ಯಕ್ಷ ಹಾಗೂ ವಿಪಕ್ಷ ನಾಯಕ ಎರಡೂ ಒಟ್ಟಿಗೆ ಮಾಡಲು ಸಮಯ ಹಿಡಿದಿರಬಹುದು ಅಂತ ನನ್ನ ವಯಕ್ತಿಕ ಅಭಿಪ್ರಾಯ ಎಂದರು.

ಸರ್ಕಾರ ವಿಫಲ

ಅಧಿಕಾರಕ್ಕೆ ಬಂದಾಗಿನಿಂದ ಹಲವು ವಿಚಾರಗಳಲ್ಲಿ ಈ ಸರ್ಕಾರ ವಿಫಲ ಆಗಿದೆ. ಸಂಪೂರ್ಣ ಅಭಿವೃದ್ಧಿ ನಿಂತು ಹೋಗಿದೆ.ಹಿಡಿ ಮಣ್ಣು ಹಾಕುವ ಕಾರ್ಯಕ್ರಮ ಮಾಡಿಲ್ಲ ಎಂದು ಆಡಳಿತ ಪಕ್ಷದ ಶಾಸಕರೇ ಹೇಳಿದ್ದಾರೆ, ಅನೇಕರು ಸಿಎಂಗೆ ಪತ್ರ ಬರೆದಿದ್ದಾರೆ. ಆದರೂ ಈ ಸಮಸ್ಯೆಗಳಿಗೆ ಪರಿಹಾರ ಸಿಕ್ಕಿಲ್ಲ ಎಂದರು.

ಸಿದ್ದರಾಮಯ್ಯ ಒನ್ ಟು ವ್ಯತ್ಯಾಸ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಆಡಳಿತದ ಬಗ್ಗೆ ವಿಶೇಷ ವ್ಯಾಖ್ಯಾನ ಮಾಡಿದ ಬಸವರಾಜ ಬೊಮ್ಮಾಯಿ, ಸಿದ್ದರಾಮಯ್ಯ ಒನ್ ಹಾಗೂ ಸಿದ್ದರಾಮಯ್ಯ ಟೂ ನಡುವೆ ಬಹಳಷ್ಟು ವ್ಯತ್ಯಾಸ ಇದೆ. 2013-18 ವರೆಗಿನ ಸಿದ್ದರಾಮಯ್ಯ ಒನ್ ಮತ್ತು 2023 ರ ಸಿದ್ದರಾಮಯ್ಯ 2 ಗೂ ಬಹಳಷ್ಟು ವ್ಯತ್ಯಾಸ ಇದೆ. ಈಗ ಭ್ರಷ್ಟಾಚಾರ ಅವರ ಮೂಗಿನ ನೇರಕ್ಕೆ ನಡೆದರೂ ಏನು ಮಾಡದ ಸ್ಥಿತಿಯಲ್ಲಿದ್ದಾರೆ. ಅದಕ್ಕಾಗಿ ಬರಗಾಲ ಘೋಷಣೆ ಆಗಿಲ್ಲ. ಡಿಸಾಸ್ಟರ್ ಮ್ಯಾನೇಜ್ಮೆಂಟ್ ಗೆ ಕೇಂದ್ರ ಹಣ ಬಿಡುಗಡೆ ಮಾಡಿದರೂ ಬಳಸಿಲ್ಲ. ಇವರಿಗೆ ರೈತ ವಿರೋಧಿ ಅನ್ನದೇ ಇನ್ನೇನು ಅನ್ನಲು ಸಾಧ್ಯ. ರೈತರ ಆತ್ಮಹತ್ಯೆಯ ಬಗ್ಗೆ ಗಂಭೀರತೆ ಇಲ್ಲ. ಹಣಕ್ಕಾಗಿ ಆತ್ಮಹತ್ಯೆ ಆಗುತ್ತವೆ ಅಂತ ನೀವು ಹೇಳಿಬಿಡಿ ಇದು ನಿಮ್ಮ ನೀತಿನಾ ಎಂದು ಮುಖ್ಯಮಂತ್ರಿ ಯನ್ನು ಪ್ರಶ್ನಿಸಿದರು.

ಇನ್ನು ಮಹಾದಾಯಿ ವಿಚಾರದಲ್ಲಿ ಕೇಂದ್ರಕ್ಕೆ ಆಸಕ್ತಿ ಇಲ್ಲ ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಮಹಾದಾಯಿ ವಿಚಾರದಲ್ಲಿ ಕಾಂಗ್ರೆಸ್ ಸರ್ಕಾರ ಇದ್ದಾಗ ಟ್ರಿಬುನಲ್ ಮಾಡಿ ಅಂತ ಅಫಿಡವಿಟ್ ಕೊಟ್ಟರು. ಅದರ ಬಗ್ಗೆ ಸಿದ್ದರಾಮಯ್ಯ ಯಾಕೆ ಮಾತನಾಡುವುದಿಲ್ಲ.

ಮಹದಾಯಿ ಯೋಜನೆ ಆಗಬಾರದು ಅಂತ ಗೋವಾದವರು ಗೋಡೆ ಕಟ್ಟಿದರು. ನೀರು ಹೇಗೆ ಬರುತ್ತದೆ. ಆಗ ಸಿದ್ದರಾಮಯ್ಯ ಯಾಕೆ ಮಾತನಾಡಲಿಲ್ಲ? ಪರಿಸರ ಅನುಮತಿ ನೀಡುವ ಪ್ರಾದೇಶಿಕ ಕಚೇರಿ ಬೆಂಗಳೂರಿನಲ್ಲಿ ಇದೆ. ಇವರು ಕ್ಲಿಯರನ್ಸ್ ಪಡೆಯಲಿ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

Tags: Basavaraj Bommailokasabha electionLokSabhaಬಸವರಾಜ ಬೊಮ್ಮಾಯಿಲೋಕಸಭಾ ಚುನಾವಣೆಲೋಕಸಭೆ
Previous Post

ಸಹಕಾರಿ ಸಂಸ್ಥೆಗಳಿಗೆ ಹೆಚ್ಚಿನ ಸ್ವಾಯತ್ತತೆ ನೀಡಿದಾಗ ಆರ್ಥಿಕ ಪ್ರಗತಿ ಸಾಧ್ಯ: ಬಸವರಾಜ ಬೊಮ್ಮಾಯಿ

Next Post

ಅಮೇರಿಕದಲ್ಲಿ ʼಮೈ ಹೀರೋʼ ಚಿತ್ರದ ಮೂರನೇ ಹಂತದ ಚಿತ್ರೀಕರಣ ಮುಕ್ತಾಯ

Related Posts

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್
Top Story

ಇಂಧನ ಪರಿವರ್ತನೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ: ಇಂಧನ ಸಚಿವ ಕೆ.ಜೆ. ಜಾರ್ಜ್

by ಪ್ರತಿಧ್ವನಿ
April 19, 2026
0

ಬೆಂಗಳೂರು : ಇಂಧನ ಪರಿವರ್ತನೆಗೆ ನೀತಿ, ನಿಯಂತ್ರಣದ ಜತೆಗೆ ಸಂಘಟಿತ ಪ್ರಯತ್ನಗಳು ಅನಿವಾರ್ಯ. ನ್ಯಾಯಾಂಗ, ನೀತಿ ನಿರೂಪಕರು, ನಿಯಂತ್ರಕರು ಮತ್ತು ಉದ್ಯಮದ ನಡುವಿನ ಅರ್ಥಪೂರ್ಣ ಚರ್ಚೆಗಳಿಗೆ ಈ...

Read moreDetails
ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

ಮೇ5ರ ಉಪಚುನಾವಣೆ ಫಲಿತಾಂಶದ ಬಳಿಕ ಏನೇನು ಆಗುತ್ತೆ ನೋಡ್ತಾಯಿರಿ : ಕುಮಾರಸ್ವಾಮಿ ಸ್ಫೋಟಕ ಹೇಳಿಕೆ..

April 19, 2026
ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

ಪೋಪ್ ಫ್ರಾನ್ಸಿಸ್ ಪಾತ್ರ ಕೇವಲ ಧಾರ್ಮಿಕ ನಾಯಕರಲ್ಲ, ನೈತಿಕ ಶಕ್ತಿಯ ಪ್ರತಿನಿಧಿ, ಅಧಿಕಾರದ ವಿರುದ್ಧ ಸತ್ಯವನ್ನು ನಿಲ್ಲಿಸುವ ಧೈರ್ಯವಂತ ವ್ಯಕ್ತಿತ್ವ..

April 19, 2026
ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

ನಾವು ಮಹಿಳಾ ಮೀಸಲಾತಿಯ ವಿರೋಧಿಗಳಲ್ಲಾ : ಬಿಜೆಪಿಗೆ ಸಿದ್ದರಾಮಯ್ಯ ತಿರುಗೇಟು..!

April 19, 2026
ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

ಗುಡ್‌ ನ್ಯೂಸ್‌ ಕೊಟ್ಟ ದೀಪಿಕಾ ಪಡುಕೋಣೆ : ಬಾಲಿವುಡ್‌ ಬೆಡಗಿಯ ಸಿಹಿ ಸುದ್ದಿ ಏನು..?

April 19, 2026
Next Post
ಮೈ ಹಿರೋ

ಅಮೇರಿಕದಲ್ಲಿ ʼಮೈ ಹೀರೋʼ ಚಿತ್ರದ ಮೂರನೇ ಹಂತದ ಚಿತ್ರೀಕರಣ ಮುಕ್ತಾಯ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada