• Home
  • About Us
  • ಕರ್ನಾಟಕ
Friday, August 22, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇತರೆ / Others

ಪ್ರಿಯಾಂಕ್ ರಾಜೀನಾಮೆ ಪಡೆಯುವ ಪ್ರಶ್ನೆಯೇ ಇಲ್ಲ:ರಮೇಶ್ ಬಾಬು,

ಪ್ರತಿಧ್ವನಿ by ಪ್ರತಿಧ್ವನಿ
January 2, 2025
in ಇತರೆ / Others, ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಬೆಂಗಳೂರು :ಭಾರತೀಯ ಜನತಾ ಪಕ್ಷದ ನಾಯಕರು ಬೌದ್ಧಿಕವಾಗಿ ದಿವಾಳಿಯಾಗಿದ್ದು, ಕರ್ನಾಟಕ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ರವರು, ಪ್ರಿಯಾಂಕ ಖರ್ಗೆ ರವರ ರಾಜೀನಾಮೆ ಕೇಳುತ್ತಿರುವುದು ಅವರ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಭದ್ರ ಪಡಿಸಿಕೊಳ್ಳುವ ಪ್ರಯತ್ನವಾಗಿರುತ್ತದೆ.ಬೀದರ್‌ ಜಿಲ್ಲೆಯ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣದಲ್ಲಿ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್‌ ಸಚಿವ ಪ್ರಿಯಾಂಕ್‌ ಖರ್ಗೆ ಪಾತ್ರವಿಲ್ಲದಿರುವುದರಿಂದ ಅವರ ರಾಜೀನಾಮೆ ಪಡೆಯುವ ಪ್ರಶ್ನೆಯೇ ಇಲ್ಲ’ ಎಂದುಮಾಜಿ ವಿಧಾನ ಪರಿಷತ್ ರಮೇಶ್ ಬಾಬು ಹೇಳಿದರು.

ADVERTISEMENT

ಕರ್ನಾಟಕದ ರಾಜಕಾರಣದಲ್ಲಿ , ಸಿಎಂ ಸಿದ್ದರಾಮಯ್ಯ ಮಲ್ಲಿಕಾರ್ಜುನ ಖರ್ಗೆರವರನ್ನು, ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ತೇಜೋವದೆ ಮಾಡುವ ಕಾರಣಕ್ಕಾಗಿ ಭಾರತೀಯ ಜನತಾ ಪಕ್ಷದ ಹಲವಾರು ನಾಯಕರಿಗೆ ಹಲವಾರು ಬಹುಮಾನಗಳನ್ನ ಬಿಜೆಪಿ ಬಳುವಳಿಯಾಗಿ ನೀಡಿರುತ್ತದೆ.ಅಂತಹ ಬಳುವಳಿಗಳಲ್ಲಿ ಕರ್ನಾಟಕ ವಿಧಾನ ಪರಿಷತ್ತಿನ ಸ್ಥಾನ ಗಳಿಸಿದ ಛಲವಾದಿ ನಾರಾಯಣಸ್ವಾಮಿ ರವರು, ಮತ್ತೊಮ್ಮೆ ಬಿಜೆಪಿ ಲಾಟರಿ ಯೋಜನೆಯಲ್ಲಿ ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಪಡೆದಿರುತ್ತಾರೆ.

ಸಂಘಪರಿವಾರದ ಅಣತಿಯ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಮನೆಯ ಮುಂದೆ ಸ್ವಾಭಿಮಾನವನ್ನು ಬಿಟ್ಟು ಅಂಬೇಡ್ಕರ್ ಅವರ ಆಶಯಗಳಿಗೆ ವಿರುದ್ಧವಾಗಿ ಚಡ್ಡಿಯನ್ನು ತಲೆಯ ಮೇಲೆ ಹೊತ್ತು ಹೋರಾಟ ಮಾಡಿದ ನಾರಾಯಣಸ್ವಾಮಿ ರವರಿಗೆ ವಿಧಾನ ಪರಿಷತ್ತಿನ ಸ್ಥಾನವನ್ನು ಕರುಣಿಸಿದ ಭಾರತೀಯ ಜನತಾ ಪಕ್ಷ, ಖರ್ಗೆರವರ ಕುಟುಂಬವನ್ನು ವ್ಯಕ್ತಿಗತ ನಿಂದನೆ ಮತ್ತು ಟೀಕೆಯ ಮಾಡುವ ಕಾರಣಕ್ಕಾಗಿ ಚಲವಾದಿ ನಾರಾಯಣಸ್ವಾಮಿ ರವರಿಗೆ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಕರುಣಿಸಿದೆ.

ಕರ್ನಾಟಕ ರಾಜ್ಯದ ಇತಿಹಾಸದಲ್ಲಿ ವಿಧಾನಸಭೆ ಮತ್ತು ವಿಧಾನಪರಿಷತ್ತಿನ ವೈಫಲ್ಯದ ನಾಯಕರಲ್ಲಿ ಛಲವಾದಿ ನಾರಾಯಣಸ್ವಾಮಿ ಅವರು ಒಬ್ಬರು.ತಮ್ಮ ವೈಫಲ್ಯವನ್ನು ಮುಚ್ಚಿಕೊಳ್ಳುವ ಕಾರಣಕ್ಕಾಗಿ ಪದೇಪದೇ ಖರ್ಗೆ ರವರ ಕುಟುಂಬದ ಮೇಲೆ ವ್ಯಕ್ತಿಗತ ಟೀಕೆ ನಿಂದನೆ ಮಾಡುವ ಪರಿಪಾಠವನ್ನು ಬೆಳೆಸಿಕೊಂಡಿರುವ ಛಲವಾದಿ ನಾರಾಯಣಸ್ವಾಮಿ ರವರು, ಅವರ ರಾಜಕೀಯ ಹಾದಿಯನ್ನು ಒಂದೊಮ್ಮೆ ಹಿಂತಿರುಗಿ ನೋಡಬೇಕಾಗುತ್ತದೆ.

ಜನತಾ ಪರಿವಾರದ ಅಂದಿನ ನಾಯಕರಾದ ಜೀವರಾಜ್ ಅಳ್ವರ ಮುಖಾಂತರ ರಾಜಕೀಯ ಹೋರಾಟವನ್ನು ಕಂಡುಕೊಂಡಂತಹ ಚಲವಾದಿ ನಾರಾಯಣಸ್ವಾಮಿ, ತದನಂತರ ರಾಜಕೀಯವಾಗಿ ಬಂಗಾರಪ್ಪನವರ ಆಶ್ರಯದಲ್ಲಿ ಬೆಳೆದು ಬಂದರು. ನಂತರ ಖರ್ಗೆ ರವರ ರಾಜಕೀಯ ಆಶ್ರಯದಲ್ಲಿ ಕಾಂಗ್ರೆಸ್ ಪಕ್ಷದಲ್ಲಿ ಹಲವಾರು ಸ್ಥಾನಗಳನ್ನು ಗಳಿಸಿ ಮತ್ತೆ ಪದವಿ ಆಸೆಗಾಗಿ ಭಾರತೀಯ ಜನತಾ ಪಕ್ಷದ ಕದತಟ್ಟಿದ ಛಲವಾದಿ ನಾರಾಯಣಸ್ವಾಮಿ, ಕೇವಲ ವ್ಯಕ್ತಿಗತ ಟೀಕೆಯ ನಿಂದನೆ ಹಿನ್ನೆಲೆಯಲ್ಲಿ ಹಲವಾರು ನಾಯಕರನ್ನು ಹಿಂದಕ್ಕೆ ತಳ್ಳಿ ಬಿಜೆಪಿಯಲ್ಲಿ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಹೊಂದಿರುತ್ತಾರೆ.

ಬಹುತೇಕ ರಾಜ್ಯದ ಇತಿಹಾಸದಲ್ಲಿ ಅತ್ಯಂತ ವೈಫಲ್ಯದ ವಿರೋಧ ಪಕ್ಷದ ನಾಯಕ ಎನ್ನುವ ಕೀರ್ತಿಗೆ ಇವರು ಭಾಜನರಾಗಿದ್ದಾರೆ.ರಾಜ್ಯದ ವಿಷಯಗಳನ್ನು ವಿಧಾನಪರಿಷತ್ತಿನಲ್ಲಿ ಚರ್ಚಿಸಲು ಅಥವಾ ಗಮನಸೆಳೆಯಲು ವಿಫಲರಾಗಿರುವ ಇವರು ವೈಯಕ್ತಿಕ ಟೀಕೆಯ ನೆಲೆಗಟ್ಟಿನಲ್ಲಿ ರಾಜ್ಯನಾಯಕರಾಗಲು ಹಪಾಹಪಿತನವನ್ನು ಹೊಂದಿರುತ್ತಾರೆ.

ಪ್ರಿಯಾಂಕ ಖರ್ಗೆ ರವರ ರಾಜೀನಾಮೆ ಕೇಳಲು ಮಲ್ಲಿಕಾರ್ಜುನ ಖರ್ಗೆರವರಿಗೆ ಮತ್ತು ರಾಹುಲ್ ಗಾಂಧಿ ರವರಿಗೆ ಮನವಿ ಮಾಡುವ ನಾಟಕವನ್ನು ತೇಲಿ ಬಿಟ್ಟಿರುವ ಛಲವಾದಿ ನಾರಾಯಣಸ್ವಾಮಿ, ಕಾಂಗ್ರೆಸ್ ಪಕ್ಷದಲ್ಲಿ ಹೊಟ್ಟೆ ತುಂಬ ಉಂಡು ಪಕ್ಷ ಬಿಟ್ಟವರು. ಕಾಂಗ್ರೆಸ್ ಪಕ್ಷಕ್ಕೆ ನೈತಿಕ ಪಾಠ ಮಾಡುವ ಮೊದಲು ಇವರು ಯಾವ ಸಿದ್ಧಾಂತ ಅಥವಾ ಯಾವ ಹೋರಾಟದ ಮುಖಾಂತರ ಭಾರತೀಯ ಜನತಾ ಪಕ್ಷದಲ್ಲಿ ಅಧಿಕಾರಗಳನ್ನು ಪಡೆದರು ಎಂಬುದನ್ನು ಮೊದಲು ತಿಳಿಸಲಿ.

ಛಲವಾದಿ ನಾರಾಯಣಸ್ವಾಮಿ ಕರ್ನಾಟಕದ ಮುಖ್ಯಮಂತ್ರಿಗಳಿಗೆ ಪಾಠ ಹೇಳುವ ಮೂಲಕ ನಗೆ ಪಾಟಲಿಗೆ ಒಳಗಾಗಿದ್ದಾರೆ. ಕರ್ನಾಟಕದ ಬಿಜೆಪಿ ಮಾಜಿ ಮುಖ್ಯಮಂತ್ರಿಗಳು ಪೋಸ್ಕೋ ಪ್ರಕರಣವನ್ನು ಎದುರಿಸುತ್ತಿದ್ದಾರೆ. ಅವರದೇ ಪಕ್ಷದ ನಾಯಕರು ಅನೇಕ ಸೆಕ್ಸ್ ಪ್ರಕರಣಗಳಲ್ಲಿ ನ್ಯಾಯಾಲಯದ ತಡೆಯಾಜ್ಞೆಗಳನ್ನು ಪಡೆದುಕೊಂಡು ತಲೆ ತಗ್ಗಿಸಿಕೊಂಡು ಓಡಾಡುತ್ತಿದ್ದಾರೆ. ಅವರದೇ ಪಕ್ಷದ ಶಾಸಕರು ಪರಿಶಿಷ್ಟ ಜಾತಿಗಳ ಜಾತಿನಿಂದನೆಯ ಗಂಭೀರ ಆರೋಪದ ಮೇಲೆ ಜಾಮೀನು ಪಡೆದುಕೊಂಡು ಆಚೆ ಇರುತ್ತಾರೆ. ಇಂತಹ ಬಿಜೆಪಿ ನಾಯಕರ ರಾಜೀನಾಮೆ ಕೇಳಲು ನೈತಿಕ ಶಕ್ತಿಯನ್ನು ಇಟ್ಟುಕೊಳ್ಳದ ಚಲವಾದಿ ರವರು, ಕಾಂಗ್ರೆಸ್ ಪಕ್ಷಕ್ಕೆ ಪಾಠ ಹೇಳಲು ಬಂದಿರುವುದು ಅವರ ದಿವಾಳಿತನದ ಪರಮಾವಧಿಯಾಗಿರುತ್ತದೆ.

ಆತ್ಮಹತ್ಯೆಗೆ ಒಳಗಾಗಿರುವ ಸಚಿನ್ ಪಂಚಾಳ ರವರ ಪ್ರಕರಣದಲ್ಲಿ ಪ್ರಿಯಾಂಕ ಖರ್ಗೆರವರ ಮನವಿಯ ಮೇರೆಗೆ ರಾಜ್ಯ ಸರ್ಕಾರ ಸದರಿ ಪ್ರಕರಣವನ್ನು ಸಿಐಡಿ ತನಿಖೆಗೆ ಒಳಪಡಿಸಿರುತ್ತದೆ.ಈ ಪ್ರಕರಣದಲ್ಲಿ ಆರೋಪಿತರನ್ನು ಶಿಕ್ಷೆಗೆ ಒಳಪಡಿಸುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ಪ್ರವೃತ್ತವಾಗಿರುತ್ತದೆ . ಆದರೆ ರಾಜಕೀಯ ಲಾಭಕ್ಕಾಗಿ ಮತ್ತು ವೈಯಕ್ತಿಕ ಲಾಭಕ್ಕಾಗಿ ಖರ್ಗೆ ಕುಟುಂಬವನ್ನು ತೇಜೋವದೆ ಮಾಡಲು ಪ್ರಯತ್ನಿಸುತ್ತಿರುವ ಬಿಜೆಪಿ ನಾಯಕರು ಯಾವ ಸಾಕ್ಷ್ಯವನ್ನು ಇಟ್ಟು ಈ ಪ್ರಕರಣದಲ್ಲಿ ರಾಜೀನಾಮೆ ಕೇಳುತ್ತಿದ್ದಾರೆ? ಇಂಥದೇ ಪ್ರಕರಣದಲ್ಲಿ ಬಿಜೆಪಿ ನಾಯಕರು ರಾಜೀನಾಮೆ ನೀಡುವುದಾದರೆ ಕೇಂದ್ರ ಸರ್ಕಾರದಿಂದ ರಾಜ್ಯ ಬಿಜೆಪಿಯವರಿಗೆ ಬಹುತೇಕ ನಾಯಕರು ಸಾಲಿನಲ್ಲಿ ನಿಂತು ರಾಜೀನಾಮೆಯನ್ನು ನೀಡಬೇಕಾಗುತ್ತದೆ.

ಬಿಜೆಪಿ ರಾಜ್ಯ ಘಟಕದಲ್ಲಿರುವ ಗುಂಪುಗಾರಿಕೆಯನ್ನು ಮುಚ್ಚಿಕೊಳ್ಳಲು ಮತ್ತು ವಿಧಾನಪರಿಷತ್ತಿನಲ್ಲಿ ತಮ್ಮ ವಿರೋಧ ಪಕ್ಷದ ನಾಯಕ ಸ್ಥಾನವನ್ನು ಉಳಿಸಿಕೊಳ್ಳಲು ಛಲವಾದಿ ನಾರಾಯಣಸ್ವಾಮಿ ರವರು ಇಂತಹ ಎಳಸುತನದ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದರು.

ಕಾಂಗ್ರೆಸ್ ಪಕ್ಷಕ್ಕೆ ನೈತಿಕ ಪಾಠವನ್ನು ಹೇಳುವ ಮೊದಲು ಅವರು ತಮ್ಮ ಹಿನ್ನೆಲೆಯನ್ನು ಮತ್ತು ಭಾರತೀಯ ಜನತಾ ಪಕ್ಷದ ನಾಯಕರ ಮೇಲಿರುವ ಆರೋಪಗಳನ್ನು ಒಮ್ಮೆ ಗಮನಿಸಲಿ.ಕರ್ನಾಟಕದ ಕಾಂಗ್ರೆಸ್ ಪಕ್ಷವು ಸೈದ್ಧಾಂತಿಕವಾಗಿ ಭಾರತೀಯ ಜನತಾ ಪಕ್ಷದ ವೈಫಲ್ಯಗಳನ್ನು ರಾಜ್ಯದ ಜನರ ಮುಂದೆ ಇಡುತ್ತಿದ್ದು.ಪ್ರಿಯಾಂಕ ಖರ್ಗೆರವರು ಸಮರ್ಥವಾಗಿ ಬಿಜೆಪಿ ಮತ್ತು ಸಂಘ ಪರಿವಾರದ ವೈಫಲ್ಯಗಳನ್ನು ಜನರಿಗೆ ತಿಳಿಸುತ್ತಿದ್ದಾರೆ.

ಇವರನ್ನು ಸೈದ್ಧಾಂತಿಕವಾಗಿ ಎದುರಿಸಲು ಸಾಧ್ಯವಾಗದ ಬಿಜೆಪಿ ಮತ್ತು ಸಂಘ ಪರಿವಾರದ ನಾಯಕರು ಛಲವಾದಿ ನಾರಾಯಣಸ್ವಾಮಿ ಅಂತಹ ನಾಯಕರನ್ನು ಮುಂದೆ ಇಟ್ಟುಕೊಂಡು ಪ್ರತಿಭಟನೆಯ ನಾಟಕವಾಡುತ್ತಿದ್ದಾರೆ. ಜನ ಹೋರಾಟ ತಿಳಿಯದ ಬಿಜೆಪಿ ಬೀದಿಯಲ್ಲಿ ನಿಂತು ಅಂಗಿ ಹರಿದುಕೊಳ್ಳುವ ಬದಲು ರಾಜ್ಯದ ಜನರ ಸಮಸ್ಯೆಗಳ ಮೇಲೆ ಭಾರತೀಯ ಜನತಾ ಪಕ್ಷದ ಹೋರಾಟ ಮಾಡಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷವು ಒತ್ತಾಯಿಸುತ್ತದೆ .

Tags: Bharatiya Janata Party leaderscase of Mr.Sachin Panchal.intellectually bankruptNo question of Priyank resigning:resignation of Priyanka Khargesecure their position
Previous Post

‘ಬಾಲಿ’ ಎಂದೇ ಪ್ರಸಿದ್ದರಾಗಿದ್ದ ರಿದಂ ಕಿಂಗ್ ಬಾಲಸುಬ್ರಹ್ಮಣ್ಯಂ ನಿಧನ .

Next Post

ಸಂಪುಟ ಪುನರ್‌ರಚನೆ.. ಸಿಎಂ ಮಹತ್ವದ ಹೇಳಿಕೆ

Related Posts

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
0

ಅಂದು ಮೈಸೂರಿನ ಮೂಡಾ ( MUDA ) ಭೂ ಹಗರಣಕ್ಕೆ ಸಿದ್ದರಾಮಯ್ಯ ಗೆ ಸಂಕಷ್ಟ ತಂದಿದ್ದ ಸ್ನೇಹಮಹಿ ಕೃಷ್ಣ ಇದೀಗ ಧರ್ಮಸ್ಥಳ ಗ್ರಾಮದ ಪ್ರಕರಣಕ್ಕೆ ಮತ್ತೆ ಎಂಟ್ರಿ...

Read moreDetails

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

August 21, 2025

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

August 21, 2025
Next Post

ಸಂಪುಟ ಪುನರ್‌ರಚನೆ.. ಸಿಎಂ ಮಹತ್ವದ ಹೇಳಿಕೆ

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!
Top Story

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

by ಪ್ರತಿಧ್ವನಿ
August 21, 2025
Top Story

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

by ಪ್ರತಿಧ್ವನಿ
August 21, 2025
Top Story

ದರ್ಶನ್‌ ಮತ್ತೆ ಜೈಲ್‌ಗೆ ಹೋಗಲು ಆ ಪ್ರಭಾವಿ ಮಂತ್ರಿಗಳು ಕಾರಣ..?

by ಪ್ರತಿಧ್ವನಿ
August 21, 2025
Top Story

ಮಾತ್ನಾಡಲು ಅವಕಾಶ ಕೊಡದಿದ್ದಕ್ಕೆ ಸ್ಪೀಕರ್ ಮೇಲೆನೇ ಸಿಡಿದ ಶಿವಲಿಂಗೇಗೌಡ

by ಪ್ರತಿಧ್ವನಿ
August 21, 2025
ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ
Top Story

ಪ್ರತಿಭಾವಂತ ವಿದ್ಯಾರ್ಥಿಗಳೊಂದಿಗೆ ಶಾಲಾ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ ಸಂವಾದ

by ಪ್ರತಿಧ್ವನಿ
August 21, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

ಅಂದು ಸಿಎಂ ಸಿದ್ದರಾಮಯ್ಯ ಇಂದು ಮಹೇಶ್ ಶೆಟ್ಟಿ ತಿಮರೋಡಿ. ತನಿಕೆಗೆ ಸ್ನೇಹಮಹಿ ಕೃಷ್ಣ ಆಗ್ರಹ..!

August 21, 2025

ಸದನದಲ್ಲಿ ಶರಣಗೌಡ ಕಂದಕುರ್ ಗಂಭೀರ ಆರೋಪ..!

August 21, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada