• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ವಿಶ್ವದಲ್ಲಿ ಕರೋನಾ ಸೋಂಕಿನ ಹರಡುವಿಕೆ ಕ್ಷೀಣಿಸುವ ಲಕ್ಷಣಗಳು ಗೋಚರಿಸುತ್ತಿಲ್ಲ- WHO ಮುಖ್ಯ ವಿಜ್ಞಾನಿ

Shivakumar A by Shivakumar A
July 11, 2021
in ದೇಶ
0
ವಿಶ್ವದಲ್ಲಿ ಕರೋನಾ ಸೋಂಕಿನ ಹರಡುವಿಕೆ ಕ್ಷೀಣಿಸುವ ಲಕ್ಷಣಗಳು ಗೋಚರಿಸುತ್ತಿಲ್ಲ- WHO ಮುಖ್ಯ ವಿಜ್ಞಾನಿ
Share on WhatsAppShare on FacebookShare on Telegram

ಈಗಾಗಲೇ ವಿಶ್ವದಾದ್ಯಂತ ಲಕ್ಷಾಂತರ ಜನರ ಪ್ರಾಣಕ್ಕೆ ಕುತ್ತು ತಂದಿರುವ ಕರೋನಾ ಸೋಂಕು, ಇನ್ನೂ ನಿಯಂತ್ರಣಕ್ಕೆ ಬರುವ ಲಕ್ಷಣಗಳು ಕಾಣಿಸುತ್ತಿಲ್ಲ. ಸೋಂಕಿನ ರೂಪಾಂತರ ಮಾದರಿಗಳು, ವಿಜ್ಞಾನಿಗಳನ್ನು ಮತ್ತಷ್ಟು ಚಿಂತೆಗೀಡು ಮಾಡಿದೆ. ಅತ್ಯಂತ ವೇಗವಾಗಿ ಹರಡಬಲ್ಲ ಡೆಲ್ಟಾ ರೂಪಾಂತರಿ ಮತ್ತಷ್ಟು ಸಂಚಕಾರವನ್ನು ತಂದೊಡ್ಡುವ ಎಲ್ಲಾ ಸೂಚನೆಗಳು ಕಾಣುತ್ತಿವೆ.

ADVERTISEMENT

ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿಯಾದ ಸೌಮ್ಯ ಸ್ವಾಮಿನಾಥನ್ ಅವರು ನೀಡಿರುವ ಸಂದರ್ಶನದಲ್ಲಿ ಡೆಲ್ಟಾ ರೂಪಾಂತರಿಯ ಕುರಿತು ಆತಂಕವನ್ನು ವ್ಯಕ್ತಪಡಿಸುತ್ತಿದ್ದಾರೆ. ವಿಶ್ವದಲ್ಲಿ ಕರೋನಾ ಸೋಂಕಿನ ಹಬ್ಬುವಿಕೆ ಇನ್ನೂ ಕ್ಷೀಣಿಸಿಲ್ಲ ಎಂದು ಹೇಳಿದ್ದಾರೆ.

ಕೆಲವು ದೇಶಗಳಲ್ಲಿ ಲಸಿಕಾ ಅಭಿಯಾನಕ್ಕೆ ಹಿನ್ನಡೆ ಉಂಟಾಗಿದೆ. ಹಲವು ದೇಶಗಳಲ್ಲಿ ಜನರು ತೀವ್ರವಾದ ಉಸಿರಾಟದ ತೊಂದರೆಗೆ ಒಳಗಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ವಿಶ್ವದ ಬಹುತೇಕ ಭಾಗಗಳಲ್ಲಿ ಬೆಡ್ ಹಾಗೂ ಆಕ್ಸಿಜನ್ ಕೊರತೆ ಕಾಡುತ್ತಿದೆ. ಇದರಿಂದಾಗಿ ಕೋವಿಡ್ ಸಾವಿನ ಪ್ರಮಾಣವೂ ಹೆಚ್ಚಾಗುತ್ತಿದೆ, ಎಂದು ಅವರು ಹೇಳಿದ್ದಾರೆ.

ಸೌಮ್ಯ ಸ್ವಾಮಿನಾಥನ್,ವಿಶ್ವ ಆರೋಗ್ಯ ಸಂಸ್ಥೆಯ ಮುಖ್ಯ ವಿಜ್ಞಾನಿ

“ಕಳೆದ 24 ಗಂಟೆಯಲ್ಲಿ 5 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. 9,300ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಇದು ಸೋಂಕು ಕ್ಷೀಣಿಸುತ್ತಿಲ್ಲ ಎಂಬುದಕ್ಕೆ ಸಾಕ್ಷಿ,” ಎಂದು ಅಭಿಪ್ರಾಯಪಟ್ಟಿದ್ದಾರೆ.

ವಿಶ್ವ ಆರೋಗ್ಯ ಸಂಸ್ಥೆಯ ಆರು ವಲಯಗಳಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ಆಫ್ರಿಕಾದಲ್ಲಿ ಕೇವಲ ಎರಡು ವಾರಗಳಲ್ಲಿ ಸಾವಿನ ಪ್ರಮಾಣ 30%ದಿಂದ 40%ಕ್ಕೆ ಏರಿಕೆಯಾಗಿದೆ. ಲಸಿಕಾಕರಣದ ವೇಗ ಕುಂಠಿತಗೊಂಡಿದ್ದು, ಹಾಗೂ ಬಹಳಷ್ಟು ರಾಷ್ಟ್ರಗಳಲ್ಲಿ ಕೋವಿಡ್ ಮುಂಜಾಗ್ರತಾ ಕ್ರಮವಾದ ಮಾಸ್ಕ್ ಮತ್ತು ಸಾಮಾಜಿಕ ಅಂತರವನ್ನು ಪಾಲಿಸದೇ ಇರುವುದು ಇದಕ್ಕೆ ಕಾರಣ, ಎಂದಿದ್ದಾರೆ.

“ಪ್ರಪಂಚದಲ್ಲಿ ಎಲ್ಲವೂ ಸರಿಯಾಗಿದೆ ಎಂದು ಹಿಂದಿನ ಸಾಮಾನ್ಯ ಜೀವನಕ್ಕೆ ಮರಳುವುದು ಅತ್ಯಂತ ಅಪಾಯಕಾರಿಯಾದ ಆಲೋಚನೆಯಾಗಲಿದೆ,” ಎಂದು ವಿಶ್ವ ಆರೋಗ್ಯ ಸಂಸ್ಥೆಯ ಆರೋಗ್ಯ ತುರ್ತು ಪರಿಸ್ಥಿತಿ ಯೋಜನೆಯ ಮುಖ್ಯಸ್ಥ ಮೈಕ್ ರಾಯನ್ ಹೇಳಿದ್ದಾರೆ.

ಅಮೇರಿಕಾ ಮತ್ತು ಯೂರೋಪ್ ನ ಬಹುತೇಕ ರಾಷ್ಟ್ರಗಳಲ್ಲಿ ಈ ತಿಂಗಳ ಅಂತ್ಯದ ವೇಳೆ ಮಾಸ್ಕ್ ಧರಿಸುವುದು ವೈಯಕ್ತಿಕ ನಿರ್ಧಾರವಾಗಲಿದೆ. ಹಲವು ನಿರ್ಬಂಧಗಳನ್ನು ಸಡಿಲಿಸಲಾಗುತ್ತಿದೆ. ಇದು ಮುಂಬರುವ ದಿನಗಳಲ್ಲಿ ಮಾರಕವಾಗಿ ಪರಿಣಮಿಸಲಿದೆ ಎಂದು ವಿಜ್ಞಾನಿಗಳು ಅಭಿಪ್ರಾಯಪಟ್ಟಿದ್ದಾರೆ.

Previous Post

ಎರಡನೇ ಅಲೆಯ ಮುಂದುವರಿಕೆ ನಿರೀಕ್ಷಿತ- ಕೇರಳ ಆರೋಗ್ಯ ಮಂತ್ರಿ ವೀಣಾ ಜಾರ್ಜ್

Next Post

ಉತ್ತರ ಪ್ರದೇಶ: ಪೊಲೀಸರ ಮೇಲಿನ ದೌರ್ಜನ್ಯಕ್ಕೆ ಸಾಕ್ಷಿಯಾದ ಸ್ಥಳೀಯ ಸಂಸ್ಥೆಗಳ ಚುನಾವಣೆ

Related Posts

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!
Top Story

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

by ಪ್ರತಿಧ್ವನಿ
April 29, 2026
0

ಬೆಳಗಾವಿ : ಜನ ಸಮುದಾಯ ಎಷ್ಟೇ ಮುಂದುವರೆದರೂ, ತಂತ್ರಜ್ಷಾನ ದಿನದಿಂದ ದಿನಕ್ಕೆ ಬೆಳವಣಿಗೆ ಕಂಡರೂ ಅಲ್ಲದೆ ಕಾನೂನುಗಳು ಅದೆಷ್ಟೇ ಬಿಗಿಯಾದರೂ ಸಹ ಜನರ ಮನಸ್ಸುಗಳು, ಯೋಚನೆಗಳು ಮಾತ್ರ...

Read moreDetails
ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

ತೀವ್ರ ಜಿದ್ದಾ ಜಿದ್ದಿನ ಬಂಗಾಳದ ಫೈಟ್‌ : ಎರಡನೇ ಹಂತದ ಮತದಾನಕ್ಕೆ ಏನೆಲ್ಲ ವ್ಯವಸ್ಥೆ, ಹೇಗಿದೆ ಭದ್ರತೆ..?

April 29, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
ಬೆಸ್ಕಾಂನ ‘ಹೆಚ್‌ಟಿ ಮಿತ್ರ’  ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

ಬೆಸ್ಕಾಂನ ‘ಹೆಚ್‌ಟಿ ಮಿತ್ರ’ ಪೋರ್ಟಲ್‌ಗೆ ಚಾಲನೆ ನೀಡಿದ ಇಂಧನ ಸಚಿವ ಕೆ.ಜೆ. ಜಾರ್ಜ್

April 23, 2026
ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

ಇನ್ನು ಮುಂದೆ ಬೆಂಗಳೂರು ಒನ್ ಕೇಂದ್ರಗಳಲ್ಲೂ ಇ-ಸ್ವತ್ತು ಅರ್ಜಿ ಸಲ್ಲಿಸಬಹುದು. ಸಚಿವ ಪ್ರಿಯಾಂಕ ಖರ್ಗೆ

April 23, 2026
Next Post
ಉತ್ತರ ಪ್ರದೇಶ: ಪೊಲೀಸರ ಮೇಲಿನ ದೌರ್ಜನ್ಯಕ್ಕೆ ಸಾಕ್ಷಿಯಾದ ಸ್ಥಳೀಯ ಸಂಸ್ಥೆಗಳ ಚುನಾವಣೆ

ಉತ್ತರ ಪ್ರದೇಶ: ಪೊಲೀಸರ ಮೇಲಿನ ದೌರ್ಜನ್ಯಕ್ಕೆ ಸಾಕ್ಷಿಯಾದ ಸ್ಥಳೀಯ ಸಂಸ್ಥೆಗಳ ಚುನಾವಣೆ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!