ಪಹಲ್ಗಾಮ್ ಉಗ್ರರ ದಾಳಿಯ (Pahalgam terror attack) ನಂತರ ಭಾರತ ಆಪರೇಷನ್ ಸಿಂಧೂರ (Operation sindhoor) ಆರಂಭಿಸಿ ಪಾಕಿಸ್ತಾನಕ್ಕೆ (Pakistan) ತಕ್ಕ ಪಾಠ ಕಲಿಸಿತ್ತು, ಆ ನಂತರ ಭಾರತ ಹಾಗೂ ಪಾಕಿಸ್ತಾನ ನಡುವಿನ ಕದನ ವಿರಾಮದ ವಿಚಾರವಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Donald trump) ತಾವೇ ಕದನ ವಿರಾಮ ಘೋಷಣೆಗೆ ಕಾರಣ ಎಂದು ಮಾತಾಡಿದ್ದು,ಈ ಬಗ್ಗೆ ವಿಪಕ್ಷಗಳ ಆರೋಪಕ್ಕೆ ಪ್ರಧಾನಿ ಮೋದಿ ತಿರುಗೇಟು ಕೊಟ್ಟಿದ್ದಾರೆ.

ಈ ಬಗ್ಗೆ ಸಂಸತ್ತಿನಲ್ಲಿ ಮಾತನಾಡಿದ ಮೋದಿ, ವಿಶ್ವದ ಯಾವ ನಾಯಕನೂ ಆಪರೇಷನ್ ಸಿಂಧೂರ ನಿಲ್ಲಿಸಲು ಹೇಳಲಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಆಪರೇಷನ್ ಸಿಂಧೂರ ಚರ್ಚೆಗೆ ಲೋಕಸಭೆಯಲ್ಲಿ ಉತ್ತರಿಸಿದ ಅವರು, ವಿಶ್ವದ ಯಾವ ನಾಯಕನೂ ಆಪರೇಷನ್ ನಿಲ್ಲಿಸಲು ಹೇಳಲಿಲ್ಲ ಎಂದಿದ್ದಾರೆ.

ಅಮೆರಿಕ ಉಪಾಧ್ಯಕ್ಷ, ಪಾಕಿಸ್ತಾನ ನಿಮ್ಮ ಮೇಲೆ ದೊಡ್ಡ ದಾಳಿ ಮಾಡಲಿದೆ ಎಂದಿದ್ದರು. ಪಾಕ್ ದಾಳಿ ಮಾಡಿದರೆ ನಾವು ತಕ್ಕ ಉತ್ತರ ನೀಡುತ್ತೇವೆ ಎಂದು ಹೇಳಿದ್ದೆ. ನಾವು ಅದಕ್ಕಿಂತ ದೊಡ್ಡ ದಾಳಿ ನಡೆಸಿ ಉತ್ತರ ಕೊಡುತ್ತೇವೆ. ಗುಂಡಿನ ಉತ್ತರ ಗುಂಡಿನಿಂದಲೇ ಕೊಡುತ್ತೇವೆ ಎಂದು ಹೇಳಿದ್ದೆ ಎಂದು ಮೋದಿ ತಿಳಿಸಿದ್ದಾರೆ.