ಬೆಂಗಳೂರು : ರಾಜ್ಯ ವಿಧಾನಸಭಾ ಚುನಾವಣಾ ಕಣ ರಂಗೇರಿದೆ. ಜೆಡಿಎಸ್ ಪಕ್ಷಕ್ಕೆ ಆರಂಭಿಕ ಆಘಾತ ಎದುರಾಗಿದ್ದ ಶಿವಾಜಿನಗರದ ಜೆಡಿಎಸ್ ಅಭ್ಯರ್ಥಿ ಅಬ್ದುಲ್ ಜಫರ್ ಅಲಿ ನಾಮಪತ್ರ ತಿರಸ್ಕೃತಗೊಂಡಿದೆ. ವಿದೇಶದಲ್ಲಿ ವಾಸವಿದ್ದ ಜಫರ್ ಅಲಿ ಕೆಲವು ಸಮಯದ ಹಿಂದಷ್ಟೇ ಬೆಂಗಳೂರಿಗೆ ಶಿಫ್ಟ್ ಆಗಿದ್ದರು.
ಜಫರ್ ಅಲಿ ಹೆಸರು ಮತದಾರರ ಪಟ್ಟಿಯಲ್ಲಿ ನಮೂದಾಗಿರಲಿಲ್ಲ. ಇದೇ ಕಾರಣಕ್ಕೆ ಚುನಾವಣಾ ಆಯೋಗವು ಅವರ ನಾಮಪತ್ರವನ್ನು ತಿರಸ್ಕರಿಸಿದೆ. ಈ ಸಂಬಂಧ ಶಿವಾಜಿನಗರ ಆರ್ಓ ಬಸವರಾಜ ಸೋಮಣ್ಣನವರ್ ಮಾಹಿತಿ ನೀಡಿದ್ದಾರೆ,
ಶಿವಾಜಿನಗರ ಕ್ಷೇತ್ರದಲ್ಲಿ ಬಿಜೆಪಿಯಿಂದ ಎನ್ ಚಂದ್ರ ಹಾಗೂ ಕಾಂಗ್ರೆಸ್ನಿಂದ ಶಾಸಕ ರಿಜ್ವಾನ್ ಅರ್ಷದ್ ಕಣದಲ್ಲಿದ್ದಾರೆ. ಕಳೆದ ಬಾರಿಯ ಚುನಾವಣೆಯಲ್ಲಿ ಶಿವಾಜಿನಗರದಿಂದ ರಿಜ್ವಾನ್ ಅರ್ಷದ್ ಜಯಭೇರಿ ಬಾರಿಸಿದ್ದರು.