ಸಾರಿಗೆ ಮತ್ತು ಮುಜರಾಯಿ ಇಲಾಖೆ ಸಚಿವ ರಾಮಲಿಂಗಾರೆಡ್ಡಿ (Ramalingareddy) ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿದೆ. ಕೋರ್ಟ್ ವಿಚಾರಣೆಗೆ ಹಾಜರಾಗದ ಹಿನ್ನೆಲೆಯಲ್ಲಿ ವಾರೆಂಟ್ ಜಾರಿಯಾಗಿದ್ದು, ಬಂಧನದ ಭೀತಿ (Arrest) ಎದುರಾಗಿದೆ.
![](https://pratidhvani.com/wp-content/uploads/2024/02/news-8-ramalingareddy-1-jpg.webp)
ಬೆಂಗಳೂರಿನ 42 ನೇ ಎಸಿಎಂಎಂ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ಮೇಕೆದಾಟು ಪಾದಯಾತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದ ಕಾರಣಕ್ಕೆ ವಿಪತ್ತು ನಿರ್ವಹಣಾ ಕಾಯ್ದೆ ಅಡಿಯಲ್ಲಿ ಕೇಸ್ ದಾಖಲಾಗಿತ್ತು.
![](https://pratidhvani.com/wp-content/uploads/2024/02/195799-ramalinga.jpg)
ಪೊಲೀಸರು ತನಿಖೆ ನಡೆಸಿ ಕೋರ್ಟ್ಗೆ ಆರೋಪ ಪಟ್ಟಿ ಸಲ್ಲಿಸಿದ್ದರು. ಆದರೆ ಕೋರ್ಟ್ನಿಂದ ಸಮನ್ಸ್ ಜಾರಿಯಾದರೂ ಸಚಿವ ರಾಮಲಿಂಗಾರೆಡ್ಡಿ ಕೋರ್ಟ್ಗೆ ಗೈರು ಹಾಜರಾಗಿದ್ದರು. ಹೀಗಾಗಿ 42 ನೇ ಎಸಿಎಂಎಂ ಜಡ್ಜ್ ಜೆ.ಪ್ರೀತ್ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ಆದೇಶ ಮಾಡಿದ್ದಾರೆ.
#Police #Ramalingareddy #Court #warrent