• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕೇಸರಿ ಬಳಗದಲ್ಲಿ ನಿಲ್ಲದ ಕಚ್ಚಾಟ.. ಜನಾಕ್ರೋಶದಲ್ಲೂ ಭಿನ್ನಾಭಿಪ್ರಾಯ..

ಕೃಷ್ಣ ಮಣಿ by ಕೃಷ್ಣ ಮಣಿ
April 22, 2025
in ಕರ್ನಾಟಕ, ರಾಜಕೀಯ
0
ಕೇಸರಿ ಬಳಗದಲ್ಲಿ ನಿಲ್ಲದ ಕಚ್ಚಾಟ.. ಜನಾಕ್ರೋಶದಲ್ಲೂ ಭಿನ್ನಾಭಿಪ್ರಾಯ..
Share on WhatsAppShare on FacebookShare on Telegram

ದಾವಣಗೆರೆಯಲ್ಲಿ ಬಿಜೆಪಿ ಒಳಜಗಳ ಮತ್ತೆ ಸ್ಫೋಟವಾಗಿದೆ. ದಾವಣಗೆರೆಯಲ್ಲಿ ನಡೆದ ಕಾಂಗ್ರೆಸ್ ವಿರುದ್ದ ಬಿಜೆಪಿ ಜನಾಕ್ರೋಶ ಯಾತ್ರೆಯಲ್ಲಿ ಬಿಜೆಪಿಯಲ್ಲಿ ಇನ್ನು ಗೊಂದಲ ಇದೆ ಅನ್ನೋದು ಬಯಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ನೇತೃತ್ವದಲ್ಲಿ ನಡೆದ ಸಮಾವೇಶ‌ದಲ್ಲಿ ಮತ್ತೆ ಭುಗಿಲೆದ್ದಿದೆ ಬಿಜೆಪಿ ಒಳ ಜಗಳ. ದಾವಣಗೆರೆ ನಗರದ ಜಯದೇವ ವೃತ್ತದಲ್ಲಿ ನಡೆದ ಸಮಾವೇಶದಲ್ಲಿ ಕೇಂದ್ರದ ಮಾಜಿ ಸಚಿವ ಜಿ.ಎಂ ಸಿದ್ದೇಶ್ವರ್, ಹರಿಹರ ಶಾಸಕ ಬಿಪಿ ಹರೀಶ್, ಮಾಜಿ ಶಾಸಕ ಎಸ್.ವಿ ರಾಮಚಂದ್ರಪ್ಪ ಗೈರು ಹಾಜರಾಗಿದ್ರು..

ADVERTISEMENT

ದಾವಣಗೆರೆ ನಗರದಲ್ಲಿ ಜನಾಕ್ರೋಶ ಯಾತ್ರೆ ನಡೆಯುತ್ತಿದ್ದರು ಫ್ಲೆಕ್ಸ್​ಗಳಲ್ಲೂ ಜಿ.ಎಂ ಸಿದ್ದೇಶ್ವರ್, ಬಿ.ಪಿ ಹರೀಶ್ ಫೋಟೊ ಹಾಕಿಸದ ವಿಜಯೇಂದ್ರ ಟೀಂ, ಎಂ.ಪಿ ರೇಣುಕಾಚಾರ್ಯ ಅಂಡ್ ಟೀಂ ಜೊತೆಗೆ ಸಮಾವೇಶ ಮಾಡಲಾಗಿದೆ. ದಾವಣಗೆರೆಯಲ್ಲಿ ಮತ್ತೆ ಒಳಜಗಳ ಬಟಾ ಬಯಲು ಆಗಿದೆ. ಕಾರ್ಯಕರ್ತರು ಕೂಡ ಕಡಿಮೆ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದಾರೆ. ರಾಜ್ಯಾಧ್ಯಕ್ಣ ಬಿ.ವೈ ವಿಜಯೇಂದ್ರ, ಮಾಜಿ ಸಿಎಂ ಸದಾನಂದ ಗೌಡ, ಛಲವಾದಿ ನಾರಾಯಣಸ್ವಾಮಿ, ಸಂಸದ ಗೋವಿಂದ ಕಾರಜೋಳ, ಪಿ ರಾಜೀವ್, ಮಾಡಾಳ್ ವಿರುಪಾಕ್ಷಪ್ಪ ಭಾಗಿಯಾಗಿದ್ದರು.

Santosh Lad :  ಜನತಾ ದರ್ಶನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಖಡಕ್‌ ನಿರ್ದೇಶನ #pratidhvani

ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಬಿ.ವೈ ವಿಜಯೇಂದ್ರ, ಮೂರನೇ ಹಂತದ ಜನಾಕ್ರೋಶ ಯಾತ್ರೆಗೆ ದಾವಣಗೆರೆಯಲ್ಲಿ ಚಾಲನೆ ಸಿಕ್ಕಿದೆ. ಕಳೆದ ವಿಧಾಸಭೆಯಲ್ಲಿ ಹಿನ್ನೆಡೆ ಆಗಿರೋದ್ರಿಂದ ಜನಾಕ್ರೋಶ ಯಾತ್ರೆ ಮಾಡ್ತಿಲ್ಲ. ಕಾಂಗ್ರೆಸ್ ಸರ್ಕಾರದಲ್ಲಿ ವಿಧಾಸಭೆಯಲ್ಲಿ ನೀಡಿದ್ದ ಎಲ್ಲಾ ಭರಸೆ ಗಾಳಿಗೆ ತೂರಿದೆ. 50 ಕ್ಕೂ ಹೆಚ್ಚು ಅಗತ್ಯ ವಸ್ತುಗಳ ಬೆಲೆಗಳ ದುಬಾರಿ ಆಗಿದೆ. ಕೇವಲ ಅಲ್ಪಸಂಖ್ಯಾತರ ಹಿಂದೆ ಸಿದ್ದರಾಮಯ್ಯ ಹೊರಟ್ಟಿದ್ದಾರೆ. ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರಾಜ್ಯ ಸರ್ಕಾರ ಜನರ ಮೇಲೆ ಬರೆ ಎಳೆದಿದೆ. ಈ ಹಿಂದೆ ಇದ್ದ ಬಿಜೆಪಿ ಅನುದಾನದಲ್ಲಿ ಕೆಲಸಗಳು ಆಗ್ತಾಯಿದೆ. ಕಾಂಗ್ರೆಸ್ ಸರ್ಕಾರ ಬಂದ ಮೇಲೆ ಯಾವುದೇ ಕೆಲಸಗಳು ಆಗ್ತಿಲ್ಲ ಎಂದು ಕಿಡಿಕಾರಿದ್ದಾರೆ.

ಸಿದ್ದರಾಮಯ್ಯನವರು ಮುಂದಿನ ದಿನಗಳಲ್ಲಿ ಬುರ್ಕಾ ಹಾಕಿಕೊಂಡು ಓಡಾಡೋ ಪರಿಸ್ಥಿತಿ ಬಂದ್ರು ಬರಬಹುದು ಎಂದು ಸಿಎಂ ಸಿದ್ದರಾಮಯ್ಯ ಬಗ್ಗೆ ಲೇವಡಿ ಮಾಡಿದ್ದಾರೆ ಬಿ.ವೈ.ವಿಜಯೇಂದ್ರ. ಭ್ರಷ್ಟಾಚಾರದಲ್ಲಿ ಕರ್ನಾಟಕ ಇಡೀ ದೇಶದಲ್ಲಿ ಪ್ರಥಮ ಸ್ಥಾನದಲ್ಲಿದೆ. ರಾಯರೆಡ್ಡಿಯವರೆ ಈ ಬಗ್ಗೆ ಸರ್ಟಿಫಿಕೇಟ್ ಕೊಟ್ಟಿದ್ದಾರೆ. ಆಡಳಿತ ಪಕ್ಷದ ಶಾಸಕರೇ ಸರ್ಕಾರದಲ್ಲಿ ಕೆಲಸ ಮಾಡೋಕೆ ಆಗ್ತಿಲ್ಲ ಅಂತಿದ್ದಾರೆ. ಅಭಿವೃದ್ಧಿ ಬಿಟ್ಟು ಭ್ರಷ್ಟಾಚಾರದಲ್ಲಿ ದೇಶದಲ್ಲಿ ಪ್ರಥಮ ಬಂದಿದೆ. ಕಾಂತಾರಾಜ್ ವರದಿ ಯಾವುದೇ ಕಾರಣಕ್ಕೂ ಸಿದ್ದರಾಮಯ್ಯ ಹೊರ ತರೋಕೆ ಆಗೋದಿಲ್ಲ. ತಮ್ಮ ಕುರ್ಚಿ ಭದ್ರಗೊಳಿಸುವ ಸಲುವಾಗಿಯೇ ಜಾತಿ ಜಾತಿ ಮಧ್ಯ ಕಂದಕ ತೊಡ್ತಿದ್ದಾರೆ. ಮುಖ್ಯಮಂತ್ರಿ ಸ್ಥಾನ ಬಿಟ್ಟುಕೊಡಬೇಕಾಗುತ್ತೆ ಅಂತ ಜಾತಿಗಣತಿ ಮುಂದೆ ತಂದಿದ್ದಾರೆ ಎಂದಿರುವ ವಿಜಯೇಂದ್ರ ಕೇವಲ ಮುಸ್ಲಿಂ ಮತ ಪಡೆದು ಮುಖ್ಯಮಂತ್ರಿ ಆಗಿದ್ದಿರಾ..? ಅಂತ ಪ್ರಶ್ನೆ ಮಾಡಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ವಿಸ್ಮೃತಿಗೆ ಜಾರಲೊಪ್ಪದ ಚಿಂತನಶೀಲ ಸಂಗಾತಿ

Next Post

ಸಿಎಂ ಸಿದ್ದರಾಮಯ್ಯ ಮಂಡ್ಯ ಪ್ರವಾಸ ..! ಹುಚ್ಚಪ್ಪಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಭಾಗಿ 

Related Posts

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!
Top Story

AIADMKಗೆ ಬಿಗ್‌ ಶಾಕ್‌ : ಮೂವರು ಶಾಸಕರ ರಾಜೀನಾಮೆ : ಸಂಚಲನ ಮೂಡಿಸಿದ ರಾಜಕೀಯ..!

by ಪ್ರತಿಧ್ವನಿ
May 25, 2026
0

ಚೆನೈ : ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ತಮಿಳುನಾಡಿನ ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಸಂಚಲನ ಸೃಷ್ಟಿಸಿದ್ದಾರೆ. ಬಳಿಕ ನೂತನವಾಗಿ ಅಧಿಕಾರಕ್ಕೆ...

Read moreDetails
BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

BREAKING NEWS : ಮೇಕೆದಾಟು ಯೋಜನೆಗೆ ತಮಿಳುನಾಡು ಅಡ್ಡಗಾಲು : ಕಾನೂನು ಹೋರಾಟಕ್ಕೆ ಸಿದ್ದವಾದ ಸಿಎಂ ವಿಜಯ್

May 25, 2026
ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

May 25, 2026
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
Next Post
ಸಿಎಂ ಸಿದ್ದರಾಮಯ್ಯ ಮಂಡ್ಯ ಪ್ರವಾಸ ..! ಹುಚ್ಚಪ್ಪಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಭಾಗಿ 

ಸಿಎಂ ಸಿದ್ದರಾಮಯ್ಯ ಮಂಡ್ಯ ಪ್ರವಾಸ ..! ಹುಚ್ಚಪ್ಪಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಭಾಗಿ 

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada