• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, February 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಾಂಗ್ಲಾದೇಶದಲ್ಲಿ ನಿಲ್ಲದ ಹಿಂಸಾಚಾರ; ಕರ್ಫ್ಯೂ, ಕಂಡಲ್ಲಿ ಗುಂಡು

ಪ್ರತಿಧ್ವನಿ by ಪ್ರತಿಧ್ವನಿ
July 22, 2024
in Top Story, ರಾಜಕೀಯ, ವಿದೇಶ
0
ಬಾಂಗ್ಲಾದೇಶದಲ್ಲಿ ನಿಲ್ಲದ ಹಿಂಸಾಚಾರ; ಕರ್ಫ್ಯೂ, ಕಂಡಲ್ಲಿ ಗುಂಡು
Share on WhatsAppShare on FacebookShare on Telegram

ಬಾಂಗ್ಲಾದೇಶದಲ್ಲಿ ಸರ್ಕಾರಿ ಉದ್ಯೋಗಗಳಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಕುಟುಂಬ ಸದಸ್ಯರಿಗೆ ಮೀಸಲಾತಿ ಕೊಡುವ ಸಂಬಂಧ ಉದ್ಭವಿಸಿದ ಹಿಂಸಾಚಾರ ವಾರಗಳೇ ಆದರೂ ಕಡಿಮೆ ಆಗಿಲ್ಲ. ಇದೀಗ ಬಾಂಗ್ಲಾದೇಶದಲ್ಲಿ ರಾಷ್ಟ್ರವ್ಯಾಪಿ ಕಟ್ಟುನಿಟ್ಟಿನ ನಿಷೇಧಾಜ್ಞೆ (ಕರ್ಫ್ಯೂ) ಜಾರಿ ಮಾಡಲಾಗಿದೆ. ಗಲಭೆ ಮಾಡುವವರ ವಿರುದ್ಧ ಶೂಟ್ ಅಟ್ ಸೈಟ್ (ಕಂಡಲ್ಲಿ ಗುಂಡು ಹೊಡೆಯುವ) ಆದೇಶ ನೀಡಲಾಗಿದೆ. ದೇಶದ ವಿವಿಧೆಡೆ ಸೈನಿಕರನ್ನು ನಿಯೋಜಿಸಿ ಭದ್ರತೆ ಬಿಗಿಗೊಳಿಸಲಾಗಿದೆ. ಇಂದು ಇಲ್ಲಿನ ಸರ್ವೋಚ್ಚ ನ್ಯಾಯಾಲಯ ಈ ಮೀಸಲಾತಿ ಪ್ರಕರಣದಲ್ಲಿ ತೀರ್ಪು ನೀಡಲಿದ್ದು, ಇನ್ನಷ್ಟು ಹೆಚ್ಚಿನ ಜಾಗ್ರತೆ ವಹಿಸಿ ಭದ್ರತೆ ಬಿಗಿಗೊಳಿಸಲಾಗಿದೆ.

ADVERTISEMENT

ಬಾಂಗ್ಲಾದೇಶದಲ್ಲಿ ಹಿಂಸಾಚಾರ ಮತ್ತು ಗಲಭೆಗಳಿಂದ ಸಾವಿನ ಸಂಖ್ಯೆ ದಿನೇ ದಿನೇ ಹೆಚ್ಚುತ್ತಿದೆ. ಈವರೆಗೆ 133 ಜನರು ಬಲಿಯಾಗಿರುವುದು ತಿಳಿದುಬಂದಿದೆ. ಯೂನಿವರ್ಸಿಟಿ ವಿದ್ಯಾರ್ಥಿಗಳಿಂದ ಶುರುವಾದ ಪ್ರತಿಭಟನೆ ಬಳಿಕ ಹಿಂಸಾಚಾರಕ್ಕೆ ತಿರುಗಿತು. ಪೊಲೀಸರ ವಿರುದ್ದ ಹಿಂಸಾಚಾರ ಮೊದಲುಗೊಂಡಿತಾದರೂ ಮೀಸಲಾತಿ ಸಮರ್ಥಕರೂ ಕೂಡ ಸಂಘರ್ಷದಲ್ಲಿ ಸೇರಿಕೊಂಡಿದ್ದಾರೆ. ಇದರೊಂದಿಗೆ ಬಾಂಗ್ಲಾದಲ್ಲಿ ಸಿವಿಲ್ ವಾರ್ (Civil War) ರೀತಿಯ ಸ್ಥಿತಿ ನಿರ್ಮಾಣವಾಗಿದೆ.

ಹಿಂಸಾಚಾರ ನಿಯಂತ್ರಿಸಲು ಮೂರು ದಿನಗಳ ಹಿಂದೆ ಬಾಂಗ್ಲಾದೇಶದಾದ್ಯಂತ ಇಂಟರ್ನೆಟ್ ಅನ್ನು ಸ್ಥಗಿತಗೊಳಿಸಲಾಗಿತ್ತು. ನಿನ್ನೆ ಶನಿವಾರ ಜನರು ಅಗತ್ಯ ವಸ್ತುಗಳನ್ನು ಖರೀದಿಸಲು ಅನುವಾಗುವಂತೆ ಒಂದಷ್ಟು ಕಾಲ ಕರ್ಫ್ಯೂ ತೆರವುಗೊಳಿಸಲಾಗಿತ್ತು. ಈಗ ಅನಿರ್ದಾವಧಿಯವರೆಗೆ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಇದೇ ವೇಳೆ, ಬಾಂಗ್ಲಾದೇಶದಲ್ಲಿ ಸಿಲುಕಿದ್ದ ಒಂದು ಸಾವಿರದಷ್ಟು ಭಾರತೀಯ ವಿದ್ಯಾರ್ಥಿಗಳನ್ನು ವಿಮಾನ, ಬಸ್ ಇತ್ಯಾದಿ ವಾಹನಗಳ ಮೂಲಕ ವಾಪಸ್ ತರಲಾಗಿದೆ. ಅಮೆರಿಕ ಸೇರಿದಂತೆ ಕೆಲ ದೇಶಗಳು ತಮ್ಮ ನಾಗರಿಕರಿಗೆ ಬಾಂಗ್ಲಾದೇಶಕ್ಕೆ ಪ್ರಯಾಣ ಮಾಡದಂತೆ ಎಚ್ಚರಿಸಿದೆ. ರಾಜತಾಂತ್ರಿಕ ಸಿಬ್ಬಂದಿ ಮತ್ತವರ ಕುಟುಂಬದವರನ್ನು ಹಿಂದಕ್ಕೆ ಕರೆಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ.

ಬಾಂಗ್ಲಾದೇಶದಲ್ಲಿ ಯಾಕೆ ಈ ಹಿಂಸಾಚಾರ?

1971ರಲ್ಲಿ ಪಾಕಿಸ್ತಾನದಿಂದ ಬಾಂಗ್ಲಾದೇಶ ಪ್ರತ್ಯೇಕ ದೇಶವಾಗಿತ್ತು. ಆ ಸ್ವಾತಂತ್ರ್ಯ ಹೋರಾಟದಲ್ಲಿ ತೊಡಗಿದ ವ್ಯಕ್ತಿಗಳ ಸಂಬಂಧಿಕರಿಗೆ ಬಾಂಗ್ಲಾ ಸರ್ಕಾರಿ ಉದ್ಯೋಗದಲ್ಲಿ ಶೇ. 30ರಷ್ಟು ಮೀಸಲಾತಿ ಕಲ್ಪಿಸಲಾಗಿದೆ.

Tags: BangladeshCurfewPoliceStudentsSupremecourtorder
Previous Post

10 ವರ್ಷದ ಬಾಲಕ ಮೇಲೆ ಕುಳಿತು ಉಸಿರುಗಟ್ಟಿಸಿ ಕೊಂದ ತಾಯಿ..

Next Post

ರೊಚ್ಚಿಗೆದ್ದು ಸದನವನ್ನು ಬಿಟ್ಟು ಹೊರಟೇ ಹೋದ್ರು ಬಿಜೆಪಿಗರು..!

Related Posts

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ
Top Story

ಅಣೆಕಟ್ಟು ಸುರಕ್ಷತೆ ಒಂದೇ ಇಲಾಖೆಯ ಜವಾಬ್ದಾರಿಯಲ್ಲ : ಸಿಎಂ ಸಿದ್ದರಾಮಯ್ಯ

by ಪ್ರತಿಧ್ವನಿ
February 13, 2026
0

ಬೆಂಗಳೂರು :  ಭಾರತದಲ್ಲಿಯೇ ಅತಿ ಹೆಚ್ಚು ಅಣೆಕಟ್ಟುಗಳನ್ನು ಹೊಂದಿರುವ ರಾಜ್ಯಗಳಲ್ಲಿ ಕರ್ನಾಟಕವೂ ಒಂದಾಗಿದ್ದು, ಅಣೆಕಟ್ಟು ಸುರಕ್ಷತೆ ಕುರಿತು ನಡೆಯುವ ಚರ್ಚೆಗಳಲ್ಲಿ ಅನುಭವ ಮತ್ತು ಜವಾಬ್ದಾರಿ ಎರಡನ್ನೂ ಹೊಂದಿದ್ದೇವೆ...

Read moreDetails
CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

CM Cup Badminton Tournament: ಸ್ಪಷ್ಟ ಗುರಿ, ಶ್ರಮದ ಹಾದಿ: ಉದ್ಯಮಿ ಪ್ರಸನ್ನ ಎಡಿಕೇರಿ ಯಶೋಗಾಥೆ

February 13, 2026
ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ  ಜೋ ಸೈಮನ್‌ ಕೊನೆಯುಸಿರು..

ಹೃದಯಾಘಾತ : ಹಿಟ್‌ ಚಿತ್ರಗಳ ನಿರ್ದೇಶಕ ಜೋ ಸೈಮನ್‌ ಕೊನೆಯುಸಿರು..

February 13, 2026
ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

ರಾಜ್ಯದ 1.31 ಕೋಟಿ ಮಹಿಳೆಯರ ಖಾತೆಗೆ ಇಂದೇ 5 ಸಾವಿರ ರೂ.ಜಮಾ-ತಮಿಳುನಾಡು ಸಿಎಂ

February 13, 2026
ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ  ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

ಆರೋಗ್ಯ ಇಲಾಖೆ ಅಧಿಕಾರಿ ವರ್ಗಾವಣೆಗೆ ಸಿಎಂ ಹೆಸರಲ್ಲಿ ನಕಲಿ ಲೆಟರ್‌ : ಕಿಡಿಗೇಡಿಗಳ ವಿರುದ್ಧ ಕೇಸ್‌ ದಾಖಲು..

February 13, 2026
Next Post

ರೊಚ್ಚಿಗೆದ್ದು ಸದನವನ್ನು ಬಿಟ್ಟು ಹೊರಟೇ ಹೋದ್ರು ಬಿಜೆಪಿಗರು..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada