ಇದುವರೆಗೂ ಒಂದೇ ಒಂದು ಕೋವಿಡ್ ಪ್ರಕರಣ ದಾಖಲಾಗದ ಉತ್ತರ ಕೊರಿಯಾದಲ್ಲಿ ಇದೇ ಮೊದಲ ಬಾರಿಗೆ ಕರೋನಾ ಸೊಂಕು ಪತ್ತೆಯಾಗಿದೆ. ಸೋಂಕು ಹರಡುವುದನ್ನು ತಡೆಗಟ್ಟಲು ದೇಶದಲ್ಲಿ ‘ತೀವ್ರ ರಾಷ್ಟ್ರೀಯ ತುರ್ತು ಪರಿಸ್ಥಿತಿ’ ಘೋಷಿಸಲಾಗಿದೆ.
ಅಲ್ಲದೆ, ಕರೋನಾ ವೈರಸ್ ಅನ್ನು ನಿರ್ಮೂಲನೆ ಮಾಡಲು ಕಿಮ್ ಜೊಂಗ್ ಉನ್ ಪ್ರತಿಜ್ಞೆ ಮಾಡಿದ್ದಾರೆ ಎಂದು ಅಲ್ಲಿನ ಸರ್ಕಾರಿ ಮಾಧ್ಯಮಗಳು ಗುರುವಾರ ವರದಿ ಮಾಡಿವೆ.
ರಾಜಧಾನಿಯಲ್ಲಿ ಜ್ವರದಿಂದ ಬಳಲುತ್ತಿದ್ದ ರೋಗಿಯೊಬ್ಬರಿಂದ ಪಡೆದ ಮಾದರಿಯನ್ನು ಪರೀಕ್ಷಿಸಲಾಗಿದ್ದು, ವ್ಯಕ್ತಿಗೆ ಓಮೈಕ್ರಾನ್ ಸೋಂಕು ತಗುಲಿರುವುದು ದೃಢವಾಗಿದೆ ಎಂದು ಕೊರಿಯದ ಸರ್ಕಾರಿ ಸುದ್ದಿ ಸಂಸ್ಥೆ ‘ಕೆಸಿಎನ್ಎ’ ವರದಿ ಮಾಡಿದೆ.
2019 ರಲ್ಲಿ ಸಾಂಕ್ರಾಮಿಕ ರೋಗ ಕಾಣಿಸಿಕೊಂಡಾಗಿನಿಂದಲೂ ಸರ್ಕಾರವು ದೇಶದ ಎಲ್ಲ ಗಡಿಗಳಲ್ಲಿ ಕಠಿಣ ದಿಗ್ಬಂಧನ ಜಾರಿಗೆ ತಂದಿತ್ತು.