ಬೆಂಗಳೂರು :ಏ.೦5: ನಟ ಕಿಚ್ಚ ಸುದೀಪ್ ಅವರು ಬಿಜೆಪಿ ಪಕ್ಷಕ್ಕೆ ಬೆಂಬಲ ಕೊಡ್ತೀನಿ ಆದ್ರೆ ಬಿಜೆಪಿಗೆ ಸೇರಲ್ಲ ಎಂದು ಹೇಳುವ ಮೂಲಕ ಗೊಂದಲ ಹೇಳಿಕೆ ನೀಡಿದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನನಗೆ ಸಿಎಂ ಬಸವರಾಜ ಬೊಮ್ಮಾಯಿ ಅವರಿಗಾಗಿ ನಾನು ಬಿಜೆಪಿ ಪರವಾಗಿ ಪ್ರಚಾರ ಮಾಡ್ತೀನಿ ಆದ್ರೆ ಯಾವುದೇ ಕಾರಣಕ್ಕೂ ನಾನು ಒಂದು ಪಕ್ಷಕ್ಕೆ ಸೀಮಿತ ಆಗಲ್ಲ.

ನನಗೆ ಎಲ್ಲಾ ಪಕ್ಷದಲ್ಲೂ ಸ್ನೇಹಿತರು ಇದ್ದಾರೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ನನಗೆ ತುಂಬಾ ವರ್ಷಗಳಿಂದ ಪರಿಚಯ, ಹೀಗಾಗಿ ಮುಂದಿನ ಚುನಾವಣೆಯಲ್ಲಿ ನಾನು ಅವರಿಗಾಗಿ ಬಿಜೆಪಿ ಪರವಾಗಿ ಪ್ರಚಾರ ಮಾಡ್ತೀನಿ ಎಂದು ಗೊಂದಲದ ಹೇಳಿಕೆ ನೀಡಿದ್ದಾರೆ.