
ರಾಜ್ಯ ಸರ್ಕಾರ ಜಾತಿ ಗಣತಿ (Caste census) ಆರಂಭಿಸಿದ್ದು, ಈಗಾಗಲೇ ಸೆಪ್ಟೆಂಬರ್ 22 ರಿಂದ ರಾಜ್ಯ ಹಿಂದುಳಿದ ವರ್ಗಗಳ (Backward classes commission) ಆಯೋಗದಿಂದ ಮನೆ ಮನೆ ಸರ್ವೆ (Survey) ಕಾರ್ಯ ಆರಂಭವಾಗಿದೆ. ಸಮೀಕ್ಷೆ ನಡೆಸುವ ವೇಳೆ ಮೊದಲ ಎರಡೂ ದಿನ ಸಾಕಷ್ಟು ತೊಡಕುಗಳು ಉಂಟಾಗಿವೆ. ಈ ಮಧ್ಯೆ ಸಮೀಕ್ಷೆ ಮೂರನೇ ದಿನಕ್ಕೆ ಕಾಲಿಟ್ಟಿದೆ.

ಹೌದು, ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಜಾತಿ ಗಣತಿ ಕಾರ್ಯ ರಾಜ್ಯದಲ್ಲಿ 3ನೇ ದಿನಕ್ಕೆ ಕಾಲಿಟ್ಟಿದೆ. ರಾಜ್ಯದ ಜನರು ಈ ಗಣತಿಯಲ್ಲಿ ಭಾಗಿಯಾಗುವುದು ಕಡ್ಡಾಯವಲ್ಲ ಎಂದು ರಾಜ್ಯ ಸರ್ಕಾರ ತಿಳಿಸಿದೆ. ರಾಜ್ಯದ ಪ್ರತಿಯೊಬ್ಬರೂ ಕೂಡ ಕಡ್ಡಾಯವಾಗಿ ಈ ಸಮೀಕ್ಷೆಯಲ್ಲಿ ಪಾಲ್ಗೊಳ್ಳಬೇಕು ಎಂಬ ನಿಯಮವಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ಸಾಮಾಜಿಕೆ ಹಾಗೂ ಶೈಕ್ಷಣಿಕ ಸಮೀಕ್ಷೆ ರಾಜ್ಯದಲ್ಲಿ ಕಲ್ಯಾಣ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸುವ ಉದ್ದೇಶದಿಂದ ಕೈಗೊಳ್ಳಲಾಗುತ್ತಿದೆ. ಈ ಸಮೀಕ್ಷೆಯಲ್ಲಿ ಜನರ ಭಾಗಿ ಸ್ವಯಂ ಪ್ರೇರಿತರಾಗಿ ಭಾಗವಹಿಸಬಹುದು ಅಥವಾ ತಮ್ಮ ಮಾಹಿತಿ ನೀಡಲು ನಿರಾಕರಿಸಬಹುದು ಎಂದು ಸರ್ಕಾರ ತಿಳಿಸಿದೆ.







