ಕಾಂಗ್ರೆಸ್ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಸಿದ್ದರಾಮಯ್ಯ ಭೇಟಿಯಾದ ಬಳಿಕ ಸಿದ್ದರಾಮಯ್ಯ ಅವರು ರಾಷ್ಟ್ರೀಯ ರಾಜಕಾರಣಕ್ಕಾಗಿ ರಾಜಕಾರಣದಿಂದ ನಿರ್ಗಮಿಸುವ ಊಹಾಪೋಹಗಳು ಎದ್ದಿದ್ದವು.
ಆದಾಗ್ಯೂ, ಇದು ಕೇವಲ ಊಹಾಪೋಹ ಎಂದು ಸಿದ್ದರಾಮಯ್ಯ ಹೇಳಿದ್ದರು. ಇದೀಗ ಮತ್ತೆ ರಾಷ್ಟ್ರೀಯ ರಾಜಕಾರಣದಲ್ಲಿ ಆಸಕ್ತಿಯಿಲ್ಲವೆಂದು ಅವರು ಸ್ಪಷ್ಟಪಡಿಸಿದ್ದಾರೆ.
ದಿ ಪ್ರಿಂಟ್‌ಗೆ ನೀಡಿದ ಸಂದರ್ಶದ ವೇಳೆ “ಅಂತಹ ಯಾವುದೇ ಪ್ರಸ್ತಾಪವಿಲ್ಲ ಅಥವಾ ರಾಷ್ಟ್ರೀಯ ರಾಜಕಾರಣದಲ್ಲಿ ನನಗೆ ಆಸಕ್ತಿಯಿಲ್ಲ. ನನ್ನ ರಾಜಕೀಯ ಜೀವನವು ಕರ್ನಾಟಕದಲ್ಲಿದೆ ಮತ್ತು ಅದು ಹಾಗೆಯೇ ಮುಂದುವರಿಯುತ್ತದೆ.” ಎಂದು ತಿಳಿಸಿದ್ದಾರೆ.
ಮತ್ತೆ ಮುಖ್ಯಮಂತ್ರಿಯಾಗುವ ಆಸೆಯನ್ನು ನಿರಾಕರಿಸದ ಅವರು, “ಹೈಕಮಾಂಡ್ ಮುಖ್ಯಮಂತ್ರಿಯನ್ನು ನಿರ್ಧರಿಸುತ್ತದೆ ಆದರೆ, ಮೊದಲು, ನಾವು ಬಹುಮತದಿಂದ ಗೆಲ್ಲಬೇಕು. ನಂತರ ಶಾಸಕರು ಅವರ ಆಯ್ಕೆಯನ್ನು ನಿರ್ಧರಿಸಬೇಕು, ”ಎಂದು ಅವರು ಹೇಳಿದ್ದಾರೆ.
ತಾವು ಮುಂದಿನ ಮುಖ್ಯಮಂತ್ರಿ ಎಂದು ಯಾರೂ ಹೇಳಿಕೊಳ್ಳಲು ಸಾಧ್ಯವಿಲ್ಲ. ನಾನು ಮುಖ್ಯಮಂತ್ರಿಯಾಗುತ್ತೇನೋ ಇಲ್ಲವೋ ಗೊತ್ತಿಲ್ಲ, ಆದರೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಬೇಕು. ರಾಜ್ಯವನ್ನು ಹಾಳು ಮಾಡುತ್ತಿರುವ ಬಿಜೆಪಿಯನ್ನು ಸೋಲಿಸುವುದು ಮೊದಲ ಆದ್ಯತೆ ಎಂದು ತಿಳಿಸಿದ್ದಾರೆ.
“ಮುಖ್ಯಮಂತ್ರಿಯಾಗುವ ಆಕಾಂಕ್ಷೆಗಳಿವೆ ಎಂಬುದನ್ನು ನಾನು ನಿರಾಕರಿಸುವುದಿಲ್ಲ. ಮುಖ್ಯಮಂತ್ರಿಯಾಗಲು ಬಯಸುವುದರಲ್ಲಿ ತಪ್ಪೇನಿಲ್ಲ ಮುಖ್ಯಮಂತ್ರಿ ಆಗಬೇಕೆಂಬ ಕಾರಣಕ್ಕೆ ಪಕ್ಷದ ನಾಯಕರೊಳಗೆ ಭಿನ್ನಾಭಿಪ್ರಾಯಗಳಿಲ್ಲ, ”ಎಂದು ಅವರು ಹೇಳಿದ್ದಾರೆ.
“ಜಿ. ಪರಮೇಶ್ವರ, ಡಿ.ಕೆ. ಶಿವಕುಮಾರ್ ಮತ್ತು ಎಂ.ಬಿ. ಪಾಟೀಲ್ ಮೊದಲಾದವರೂ ಸಿಎಂ ಆಗಬೇಕೆಂದು ಆಸೆ ಹೊಂದಿದ್ದಾರೆ. ಆದರೆ, ಅಂತಿಮವಾಗಿ, ಎಲ್ಲರೂ ಹೈಕಮಾಂಡ್ ಹೇಳುವುದನ್ನು ಕೇಳುತ್ತಾರೆ. ನಾನು ಕೂಡ ಹೈಕಮಾಂಡ್ ಹೇಳುವುದನ್ನು ಕೇಳುತ್ತೇನೆ ಎಂದು ಅವರು ಹೇಳಿದ್ದಾರೆ
ಡಿಕೆ ಶಿವಕುಮಾರ್ ಜೊತೆಗೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ ಎಂದು ಒತ್ತಿ ಹೇಳಿದ ಅವರು ಕರ್ನಾಟಕ ಕಾಂಗ್ರೆಸ್‌ನಲ್ಲಿ ಯಾವುದೇ ಆಂತರಿಕ ಸಮಸ್ಯೆಗಳಿಲ್ಲ. ನಾವು ಒಗ್ಗಟ್ಟಾಗಿದ್ದೇವೆ ಮತ್ತು ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಚರ್ಚೆ ಸಂಸತ್‌ನಲ್ಲಿ ತೀವ್ರಗೊಳ್ಳುತ್ತಿರುವ ನಡುವೆ, ಸದನದಲ್ಲಿ ರಾಜಕೀಯ ಗದ್ದಲದ ಜೊತೆಗೆ...