ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ(Social Media) ಕಿಡಿಗೇಡಿಗಳ ಅಶ್ಲೀಲ, ಅವಾಚ್ಯವಾಗಿ ನಿಂದನೆ ಪ್ರಕರಣ ಸಂಬಂಧ ನಟ ದರ್ಶನ್(Darshan) ಪತ್ನಿ ವಿಜಯಲಕ್ಷ್ಮಿಗೆ(VijayaLakshmi Darshan) ಸಿಸಿಬಿ(CCB) ಪೊಲೀಸರು ನೋಟಿಸ್ ನೀಡಿದ್ದಾರೆ.

ಪ್ರಕರಣ ಸಂಬಂಧ ನ್ಯಾಯಾಧೀಶರ ಮುಂದೆ ಹಾಜರಾಗಿ BNSS ಸೆಕ್ಷನ್ 183 ಅಡಿ ಹೇಳಿಕೆ ದಾಖಲಿಸಲು ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದು, ಶುಕ್ರವಾರ ಹಾಜರಾಗಲು ಸೂಚಿಸಿದ್ದಾರೆ.
ಇದನ್ನೂ ಓದಿ: Pavithra Gowda: ಪವಿತ್ರಾ ಗೌಡಗೆ ಮತ್ತೊಂದು ಬಿಗ್ ಶಾಕ್ ಕೊಟ್ಟ ಹೈಕೋರ್ಟ್
ಕಳೆದ ತಿಂಗಳು ಸಾಮಾಜಿಕ ಜಾಲತಾಣದಲ್ಲಿ ವಿಜಯಲಕ್ಷ್ಮಿಗೆ ಅಶ್ಲೀಲ, ಅವಾಚ್ಯವಾಗಿ ಕಾಮೆಂಟ್ ಮಾಡಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಎಂಟು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಹಾಗೆ ಬಂಧಿತ ಆರೋಪಿಗಳು ಕೃತ್ಯಕ್ಕೆ ಬಳಸಿದ್ದ ಮೊಬೈಲ್ ಫೋನ್‌ಗಳನ್ನು ಸೀಜ್ ಮಾಡಲಾಗಿದ್ದು, ಅವುಗಳನ್ನು ತಾಂತ್ರಿಕ ಪರಿಶೀಲನೆಗಾಗಿ ಫೊರೆನ್ಸಿಕ್ ಸೈನ್ಸ್ ಲ್ಯಾಬೋರೇಟರಿ (FSL)ಗೆ ರವಾನಿಸಲಾಗಿದೆ.

ಶೀಘ್ರದಲ್ಲೇ ಮೊಬೈಲ್‌ಗಳ ಎಫ್‌ಎಸ್‌ಎಲ್ ವರದಿ ಪೊಲೀಸರ ಕೈ ಸೇರಲಿದ್ದು, ಈ ವರದಿ ಪ್ರಕರಣದಲ್ಲಿ ಅತ್ಯಂತ ಪ್ರಮುಖ ಸಾಕ್ಷಿಯಾಗಿ ಪರಿಗಣಿಸಲಾಗುತ್ತಿದೆ. ಎಫ್‌ಎಸ್‌ಎಲ್ ವರದಿಯ ಆಧಾರದ ಮೇಲೆಯೇ ಚಾರ್ಜ್ ಶೀಟ್ ಸಿದ್ಧಪಡಿಸಿ ಈ ವಾರದ ಅಂತ್ಯದೊಳಗೆ ಚಾರ್ಜ್ ಶೀಟ್ ದಾಖಲಿಸುವ ಸಾಧ್ಯತೆ ಇದೆ. ಸದ್ಯ ಈ ಪ್ರಕರಣದಲ್ಲಿ ಬಂಧಿತರಾಗಿರುವ ಆರೋಪಿಗಳಿಗೆ ಇದುವರೆಗೂ ಜಾಮೀನು ಸಿಕ್ಕಿಲ್ಲ. ಎಲ್ಲಾ 8 ಆರೋಪಿಗಳು ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ.













