• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ವಕ್ಫ್​ ಆಸ್ತಿ ಎಂದು ಮೈಸೂರಿನ ಎಂ.ಕೆ ಹಾಸ್ಟೆಲ್​ಗೆ ನೋಟಿಸ್​.. ಆಕ್ರೋಶ

ಕೃಷ್ಣ ಮಣಿ by ಕೃಷ್ಣ ಮಣಿ
April 25, 2025
in Top Story, ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಮೈಸೂರಿನ ಎಂ.ಕೆ ಹಾಸ್ಟೆಲ್ ವಕ್ಫ್​ಗೆ ಸೇರಿದ ಆಸ್ತಿ ಎಂದು ನೋಟಿಸ್ ಕೊಡಲಾಗಿದೆ. ಹೀಗಾಗಿ ವಕ್ಫ್ ಮಂಡಳಿ ವಿರುದ್ಧ ಪ್ರತಿಭಟನೆ ಮಾಡಲಾಗಿದೆ. ಮೈಸೂರಿನ ವಿನೋಬಾ ರಸ್ತೆಯಲ್ಲಿರುವ ಹಾಸ್ಟೆಲ್ ಬಳಿ ಪ್ರತಿಭಟನೆ ನಡೆಸಿದ್ದು, ವಕ್ಫ್ ನೋಟಿಸ್​ಗೆ ಚಪ್ಪಲಿಯಲ್ಲಿ ಹೊಡೆದು ಆಕ್ರೋಶ ಹೊರ ಹಾಕಿದ್ದಾರೆ. ವಕ್ಫ್ ಮಂಡಳಿ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವಕ್ಫ್ ನಿಷೇಧ ಮಾಡುವಂತೆಯೂ ಪ್ರತಿಭಟನಾಕಾರರು ಆಗ್ರಹ ಮಾಡಿದ್ದಾರೆ. ಪ್ರತಿಭಟನೆಯಲ್ಲಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ, ಬಿಜೆಪಿ ಜಿಲ್ಲಾಧ್ಯಕ್ಷ ಎಲ್.ನಾಗೇಂದ್ರ ಸೇರಿದಂತೆ ಕನ್ನಡ ಪರ ಹೋರಾಟಗಾರರು ಭಾಗಿಯಾಗಿದ್ದರು.

ADVERTISEMENT

ಶತಮಾನಕ್ಕೂ ಹೆಚ್ಚಿನ ಇತಿಹಾಸವಿರುವ ಕಟ್ಟಡಕ್ಕೆ ವಕ್ಫ್ ಮಂಡಳಿ ನೋಟಿಸ್ ಜಾರಿ ಮಾಡಿದೆ. ಮೈಸೂರಿನ ಹೃದಯ ಭಾಗದಲ್ಲಿರುವ ಶಿವರಾಂ ಪೇಟೆಯ ವಿನೋಬಾ ರಸ್ತೆಯಲ್ಲಿರುವ ಎಂ ಕೆ ಹಾಸ್ಟೆಲ್​ಗೆ ಸೇರಿದ ಖಾಲಿ ಜಾಗ ವಕ್ಫ್​ಗೆ ಸೇರಿದ ಆಸ್ತಿ ಎಂದು ನೋಟಿಸ್ ಜಾರಿ ಮಾಡಲಾಗಿದೆ. 1916ರಲ್ಲಿ ಕಡಬದ ನಾರಾಯಣ ಶೆಟ್ಟರು ಸ್ಥಾಪಿಸಿರುವ ಸ್ಟೂಡೆಂಟ್ಸ್ ಹಾಸ್ಟೆಲ್ ಇದು. ರಾಜ್ಯದಾದ್ಯಂತ ದೊಡ್ಡ ಸದ್ದು ಮಾಡಿದ ವಕ್ಪ್ ಆಸ್ತಿ ವಿಚಾರ ತಣ್ಣಗಾಗುವ ಹೊತ್ತಲ್ಲೇ ಮೈಸೂರಿನಲ್ಲಿ ಶತಮಾನಗಳ ಇತಿಹಾಸವಿರುವ ಎಂ.ಕೆ ಹಾಸ್ಟೆಲ್ ಜಾಗಕ್ಕೆ ವಕ್ಫ್ ಮಂಡಳಿಯಿಂದ ನೋಟಿಸ್‌ ಜಾರಿ ಆಕ್ರೋಶಕ್ಕೆ ಕಾರಣವಾಗಿದೆ.

ಮುಂಬರುವ ಮೇ 9ರ ಒಳಗೆ ಉತ್ತರ ನೀಡುವಂತೆ ನೋಟಿಸ್​ನಲ್ಲಿ ತಿಳಿಸಲಾಗಿದೆ. ಪೂರ್ವ ಪಶ್ಚಿಮ 54 ಅಡಿ, ಉತ್ತರ ದಕ್ಷಿಣ 100 ಅಡಿ ಸೇರಿದಂತೆ ಒಟ್ಟು 3268 ಚದರ ಅಡಿ ನಮ್ಮ ಸಂಸ್ಥೆಗೆ ಸೇರಿದ್ದು ಎಂದು ವಕ್ಫ್​ ಮಂಡಳಿ ನೋಟಿಸ್ ಕೊಟ್ಟಿದೆ. ಎಂ ಕೆ ಹಾಸ್ಟೆಲ್ ವಿಳಾಸಕ್ಕೆ ನೋಟಿಸ್ ಅಂಟಿಸಿರುವ ಅಧಿಕಾರಿಗಳು, ಎಂ.ಕೆ ಹಾಸ್ಟೆಲ್​ಗೆ ಹೊಂದಿಕೊಂಡಿರುವ ಜಾಗದಲ್ಲಿ ಯಾವುದೇ ದಾಖಲೆ ಇಲ್ಲದ ಅನಧಿಕೃತ ಜಾಗದಲ್ಲಿ ಹಿಂದೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಸೇರಿದ ಗದ್ದುಗೆ ಇತ್ತು. ಕಾಲಾ ನಂತರದಲ್ಲಿ ಅಲ್ಲಿ ಕೆಲವರು ಅತಿಕ್ರಮಣ ಮಾಡಿಕೊಂಡು ಗದ್ದಿಗೆಯನ್ನು ನಮ್ಮ ದರ್ಗಾ ಎಂದು ಹೇಳಿ ಜಾಗವನ್ನು ತಮ್ಮ ವಶಕ್ಕೆ ಪಡೆಯುವ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ನಮ್ಮ ಜಾಗದ ಎಲ್ಲಾ ದಾಖಲೆಗಳು ನಮ್ಮ ಬಳಿ ಇವೆ. ಅವರ ಬಳಿ ಏನು ದಾಖಲೆಗಳಿವೆಯೋ ಅದನ್ನು ತೋರಿಸಲಿ, ನಾವು ಕೋರ್ಟ್ ಮೂಲಕ ಕಾನೂನು ಹೋರಾಟ ಮಾಡುತ್ತೇವೆ ಎಂದು ಎಂ.ಕೆ ಹಾಸ್ಟೆಲ್ ಮಾಲೀಕರಾದ ಸಿ.ವಿ ರಾಮಚಂದ್ರ ಶೆಟ್ಟಿ ಹೇಳಿದ್ದಾರೆ. ಆದರೆ ಇತ್ತೀಚಿನ ಬೆಳವಣಿಗೆಯಲ್ಲಿ ಹಲವಾರು ಸಾರ್ವಜನಿಕ ಸ್ಥಳಗಳನ್ನು ವಕ್ಫ್ ಆಸ್ತಿ ಎಂದು ಹೇಳಿಕೊಂಡು ಕೆಲವು ಖಾಸಗಿ ಆಸ್ತಿಗಳನ್ನು ಕಬಳಿಸುವ ಯತ್ನವನ್ನು ವಕ್ಪ್ ಮಂಡಳಿ ಮಾಡುತ್ತಿದೆ. ಯಾವುದೇ ಕಾರಣಕ್ಕೂ ಈ ಜಾಗವನ್ನು ವಕ್ಫ್​ ಮಂಡಳಿಗೆ ಬಿಟ್ಟುಕೊಡುವುದಿಲ್ಲ. ಅದು ನಮ್ಮ ಆಸ್ತಿ ಅಂತ ಒಂದೇ ಒಂದು ದಾಖಲೆ ಇದ್ದರೇ ತೋರಿಸಲಿ ಎಂದು ಸವಾಲು ಎಸೆದಿದ್ದಾರೆ.

ನಾವು ಮುಂದಿನ ದಿನಗಳಲ್ಲಿ ದೊಡ್ಡ ಮಟ್ಟದ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ ಎಂ.ಕೆ ಹಾಸ್ಟೆಲ್ ಪರ ಹೋರಾಟಗಾರರು, ಸರ್ಕಾರ ಮಧ್ಯಪ್ರವೇಶ ಮಾಡಿ ನೋಟಿಸ್ ವಾಪಸ್​ ಪಡೆಯುವಂತೆ ಆಗ್ರಹ ಮಾಡಿದ್ದಾರೆ. ವಿಶೇಷ ಅಂದರೆ ವಕ್ಫ್​ ಮಂಡಳಿ ಬಳಿ ಯಾವುದೇ ದಾಖಲೆ ಇಲ್ಲದೆ ಇದ್ದರೂ ವಕ್ಫ್​ ಮಂಡಳಿ ಆಸ್ತಿ ನನ್ನದು ಎನ್ನಲು ಅವಕಾಶವಿದೆ. ಇದು ರೈತರು ಸೇರಿದಂತೆ ಸಾಕಷ್ಟು ಜನರಿಗೆ ಸಂಕಷ್ಟ ತಂದಿಟ್ಟಿದೆ. ಇದೇ ಕಾರಣಕ್ಕೆ ಕೇಂದ್ರ ಸರ್ಕಾರ ವಕ್ಫ್​ ತಿದ್ದುಪಡಿ ಕಾಯ್ದೆ ಜಾರಿ ಮಾಡಿರುವುದು.

Tags: best places to traveleuropean weddingidgah maidan issueidgah maidan issue news updatesKarnataka Policekarnataka police book sameerkarnataka police investigationkashmir issue explainedMysoremysore dasaraMYSORE DASARA 2022mysore dasara aahara mela 2022mysore dasara elephant 2022mysore newsMysuru City Corporationmysuru mayor electionsupreme courtsuresh manjhi storywakf board propertieswaqf board issues
Previous Post

ಪ್ಲೇ ಆಫ್ ರೇಸ್ ನಿಂದ ರಾಜಸ್ಥಾನ ರಾಯಲ್ಸ್ ಔಟ್ ..? ಪಾಯಿಂಟ್ಸ್ ಟೇಬಲ್ ಲೆಕ್ಕಾಚಾರ ಹೀಗಿದೆ ನೋಡಿ ! 

Next Post

ಕಾಂಗ್ರೆಸ್​ ಶಾಸಕನ ಮೇಲೆ ED ದಾಳಿ ಬಗ್ಗೆ ಸಿಎಂ ಏನ್​ ಹೇಳಿದ್ರು.?

Related Posts

ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?
ರಾಜಕೀಯ

ಸಿದ್ದರಾಮಯ್ಯ ದೆಹಲಿ ಭೇಟಿ ಚರ್ಚೆ ಜೋರು: ಕರ್ನಾಟಕದಲ್ಲಿ ನಾಯಕತ್ವ ಬದಲಾವಣೆಯ ಸುಳಿವೇ?

by ಪ್ರತಿಧ್ವನಿ
May 20, 2026
0

ಕರ್ನಾಟಕ ರಾಜಕೀಯದಲ್ಲಿ ಮತ್ತೆ ನಾಯಕತ್ವ ಬದಲಾವಣೆಯ ಚರ್ಚೆ ತೀವ್ರಗೊಂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್ ಭೇಟಿಗೆ ಸಮಯ ಕೇಳಿದ್ದಾರೆ ಎಂಬ ಮಾಹಿತಿ ರಾಜಕೀಯ ವಲಯದಲ್ಲಿ ಭಾರೀ...

Read moreDetails
ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

ಮಹಾರಾಷ್ಟ್ರದಲ್ಲಿ ಹಕ್ಕಿ ಜ್ವರ ಆತಂಕ: ಆರೋಗ್ಯ ಇಲಾಖೆ ಅಲರ್ಟ್

May 20, 2026
ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

ಕೊಳಚೆ ನಿರ್ಮೂಲನಾ ಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ದಾಳಿ: ಅಧಿಕಾರಿಗಳಲ್ಲಿ ಆತಂಕ

May 20, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಬಿಜೆಪಿ ಮೆಗಾ ಪ್ಲಾನ್: ರಾಜ್ಯದ ನಾಲ್ಕು ಭಾಗಗಳಲ್ಲಿ ಬೃಹತ್ ಸಮಾವೇಶಕ್ಕೆ ಸಿದ್ಧತೆ

May 19, 2026
ದರ್ಶನ್–ವಿಜಯಲಕ್ಷ್ಮೀ ಬಾಂಧವ್ಯ: 23 ವರ್ಷದ ಪಯಣ ಹೇಗಿತ್ತು ?

ಹೈಕೋರ್ಟ್ ಸೂಚನೆಗೆ ಮಣಿದ ಸಾರಿಗೆ ನೌಕರರು: ರಾಜ್ಯವ್ಯಾಪಿ ಮುಷ್ಕರ ವಾಪಸ್

May 19, 2026
Next Post
ಕಾಂಗ್ರೆಸ್​ ಶಾಸಕನ ಮೇಲೆ ED ದಾಳಿ ಬಗ್ಗೆ ಸಿಎಂ ಏನ್​ ಹೇಳಿದ್ರು.?

ಕಾಂಗ್ರೆಸ್​ ಶಾಸಕನ ಮೇಲೆ ED ದಾಳಿ ಬಗ್ಗೆ ಸಿಎಂ ಏನ್​ ಹೇಳಿದ್ರು.?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada