• Home
  • About Us
  • ಕರ್ನಾಟಕ
Wednesday, October 1, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ತುರ್ತು ಪರಿಹಾರ, ಮುಂಜಾಗರೂಕತ ಕ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ..!

ಪ್ರತಿಧ್ವನಿ by ಪ್ರತಿಧ್ವನಿ
September 28, 2025
in ಕರ್ನಾಟಕ, ವಿಶೇಷ
0
ತುರ್ತು ಪರಿಹಾರ, ಮುಂಜಾಗರೂಕತ ಕ್ರಮಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಸೂಚನೆ..!
Share on WhatsAppShare on FacebookShare on Telegram
ADVERTISEMENT

ಕಲಬುರಗಿ ಜಿಲ್ಲೆಯಲ್ಲಿ ಕಳೆದ 28 ದಿನಗಳಲ್ಲಿ ಶೇ. 72 ರಷ್ಟು ಹೆಚ್ಚು ಮಳೆ
ಅತಿವೃಷ್ಟಿ ಹಾಗೂ ಪ್ರವಾಹದಂತಹ ಆಕಸ್ಮಿಕಗಳು ಸಂಭವಿಸಿದ ಸಂದರ್ಭಗಳಲ್ಲಿ ಅಧಿಕಾರಿಗಳು ವಿವೇಚನೆಯಿಂದ ವರ್ತಿಸಿ, ಲಭ್ಯವಿರುವ ಅನುದಾನವನ್ನು ಬಳಸಿಕೊಂಡು ತುರ್ತು ಪರಿಹಾರ ನೀಡಲು ಕ್ರಮ ಕೈಗೊಳ್ಳಬೇಕು ಹಾಗೂ ತಾತ್ಕಾಲಿಕ ವಸತಿ, ಆಹಾರ ಸರಬರಾಜು ಸೌಲಭ್ಯಗಳನ್ನು ಕೂಡಲೇ ಒದಗಿಸಲು ನಿರ್ಧರಿಸಬೇಕು ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಕಲಬುರಗಿ ಜಿಲ್ಲಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಕಲಬುರಗಿ ಜಿಲ್ಲೆಯಲ್ಲಿ 2025ರ ಆಗಸ್ಟ್ ತಿಂಗಳಲ್ಲಿ ಶೇ.69 ರಷ್ಟು ಹಾಗೂ ಸೆಪ್ಟೆಂಬರ್ ತಿಂಗಳ ಮೊದಲ 28 ದಿನಗಳಲ್ಲಿ ಶೇ.72ರಷ್ಟು ವಾಡಿಕೆಗಿಂತಲೂ ಹೆಚ್ಚಿನ ಮಳೆಯಾಗಿದ್ದು, ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಸುರಿದ ಅಧಿಕ ಮಳೆಯಿಂದ ಆಗಿರುವ ಪರಿಣಾಮಗಳು ಹಾಗೂ ಅವುಗಳನ್ನು ಸಮರ್ಪಕವಾಗಿ ಎದುರಿಸುವ ಸಂಬಂಧ ಕಲುಬುರಗಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಹಲವು ಸೂಚನೆಗಳು ನೀಡಿರುತ್ತಾರೆ.

ಕಲಬುರಗಿ ಜಿಲ್ಲೆಯಲ್ಲಿ ಎರಡು ದಿನಗಳ ಪ್ರವಾಸ ಕೈಗೊಂಡು, ಪ್ರವಾಹ ಪೀಡಿತ ಸ್ಥಳಗಳನ್ನು ಕುದ್ದು ವೀಕ್ಷಿಸಿದ ನಂತರ ಸಚವರು ಕಲಬುರಗಿ ಜಿಲ್ಲೆಯ ಅಧಿಕಾರಿಗಳಿಗೆ ಹಲವು ಸೂಚನೆಗಳನ್ನು ನಿಡಿದ್ದಾರೆ.

• ನದಿ, ಹಳ್ಳ, ಕೆರೆ ದಡದಲ್ಲಿರುವ ಗುಡಿ, ಮಸಿದಿ,ಚರ್ಚ್ ಮುಂತಾದ ಧಾರ್ಮಿಕ ಕೇಂದ್ರಗಳಲ್ಲಿ ಪೂಜೆ, ಪ್ರಾರ್ಥನೆ ಹಾಗೂ ಭಾಗಿನ ಸಲ್ಲಿಸುವವರನ್ನು ಮನವೊಲಿಸಿ ನದಿ, ಹಳ್ಳ, ಕೆರೆ ದಡದಲ್ಲಿ ತೆರಳದಂತೆ ಮುನ್ನಚ್ಚರಿಕೆ ತೆಗೆದುಕೊಳ್ಳುವುದು.

• ನಿರಂತರ ಮಳೆಯಿಂದ ಅಪಾಯವಿರುವ ಮನೆ, ಶಾಲೆಗಳು ಹಾಗೂ ಇತರೆ ಕಟ್ಟಡಗಳ ಗೋಡೆಗಳು ಕುಸಿಯುವ ಸಾಧ್ಯತೆ ಇರುವದರಿಂದ ಸಾವು ನೋವುಗಳು ಸಂಭವಿಸುವ ಸಂದರ್ಭವಿರುತ್ತದೆ.ಆದ್ದರಿಂದ ಸಾರ್ವಜನಿಕರಿಗೆ ಸುರಕ್ಷತೆಯ ಮುನ್ನೆಚ್ಚರಿಕೆಯ ಕ್ರಮ ತೆಗೆದುಕೊಳ್ಳಲು ಅಧಿಕಾರಿಗಳು ಕ್ರಮವಹಿಸುವುದು.

• ನದಿ ತೀರದ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರು ಅಪಾಯವಿರುವ ನದಿ, ಹಳ್ಳಗಳಲ್ಲಿ ಈಜಾಡುವುದು ಮತ್ತು ಪೋಟೊ,ಸೆಲ್ಸಿಗಳನ್ನು ತೆಗೆಯದಂತೆ ಸೂಚಿಸುವುದು.

• ಮೀನುಗಾರರು ಮೀನು ಹಿಡಿಯಲು ನದಿಯಲ್ಲಿ ಹೋಗದಂತೆ ಮುನ್ನಚರಿಕೆ ಕ್ರಮಗೊಳ್ಳುವುದು.

• ಜಿಲ್ಲಾ, ತಾಲೂಕು, ಹೋಬಳಿ ಹಾಗೂ ಗ್ರಾಮ ಪಂಚಾಯತ್ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಕೇಂದ್ರ ಸ್ಥಾನದಲ್ಲಿದ್ದು ಪ್ರವಾಹ, ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಯಾಗದಂತೆ ಮುನ್ನಚ್ಚರಿಕೆ ವಹಿಸುವುದು.

• ಜಲಾಶಯದಿಂದ ನೀರು ಬಿಡುವ ಬಗ್ಗೆ ಮಾಹಿತಿ ಬಂದ ಕೂಡಲೇ ನದಿ ಪಾತ್ರದಲ್ಲಿರುವ ಗ್ರಾಮಗಳ ಸಾರ್ವಜನಿಕರಿಗೆ ಮುಂಚಿತವಾಗಿ ತಿಳುವಳಿಕೆ ನೀಡಲು ಡಂಗುರದ ಮೂಲಕ ಪ್ರಚಾರ ಮಾಡಲು ಮತ್ತು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಅಧಿಕಾರಿಗಳು ಕ್ರಮ ಕೈಗೊಳ್ಳುವುದು.

• ಅತಿವೃಷ್ಠಿಯಿಂದ ನೀರು ತುಂಬಿ ಸಂಚಾರಕ್ಕೆ ಅಡ್ಡಿಯಾಗಿರುವ ಸೇತುವೆಗಳಿಗೆ ಬ್ಯಾರಿಕೇಡ್ ಗಳನ್ನು ಅಳವಡಿಸುವುದು ಮತ್ತು ಜನರು ಅಂತಹ ಸೇತುವೆಗಳ ಮೇಲೆ ಸಂಚರಿಸದಂತೆ ನಿಗಾ ವಹಿಸುವುದು.

• ಪ್ರವಾಹಕ್ಕೆ ಸಿಲುಕಿ ಯಾವುದೇ ಅಹಿತಕರ ಘಟನೆಯಾಗದಂತೆ ಪ್ರತಿ ಗ್ರಾಮಗಳಲ್ಲಿ ಮುಂಜಾಗರೂಕತೆಯಾಗಿ ಡಂಗೂರ ಸಾರುವುದು, ಮೈಕ್ ಮೂಲಕ ಜಾಗೃತಿ ಮೂಡಿಸಲು ಅಧಿಕಾರಿಗಳು ಕ್ರಮವಹಿಸುವುದು.

Priyanka Gandhi: ನಮ್ಮ ಮಹಿಳೆಯರಿಗಿಂತ ಬುದ್ಧಿವಂತರು ಯಾರೂ ಇಲ್ಲ: ಸಂಸದೆ ಪ್ರಿಯಾಂಕಾ ಗಾಂಧಿ..! #priyankagandhi

• ಪ್ರವಾಹದಿಂದ ಹಾನಿಯಾದ ಬಗ್ಗೆ ಪ್ರಾಥಮಿಕ ವರದಿಯನ್ನು ಅಧಿಕಾರಿಗಳು ಪ್ರತಿ ದಿನ ಜಿಲ್ಲಾಡಳಿತಕ್ಕೆ ಸಲ್ಲಿಸಬೇಕು ಹಾಗೂ ತುರ್ತು ಪರಿಹಾರ ನೀಡಲು ನಿಯಮಾನುಸಾರ ಕ್ರಮ ವಹಿಸಬೇಕು.

ಬೆಳೆವಿಮೆ

2025ರ ಮುಂಗಾರು ಹಂಗಾಮಿನಲ್ಲಿ 3.01 ಲಕ್ಷ ರೈತ ಬಾಂಧವರು ನೊಂದಣಿ ಮಾಡಿಸಿದ್ದು ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿರುವ ಕಾರಣಕ್ಕೆ ಇಲ್ಲಿಯವರೆಗೆ 1.78 ಲಕ್ಷ ರೈತ ಬಾಂದವರು ಸ್ಥಳೀಯ ವಿಪತ್ತು ಅಡಿಯಲ್ಲಿ ಶೇ.59ರಷ್ಟು ರೈತ ಬಾಂಧವರು ದೂರು ಸಲ್ಲಿಸಿರುವ ಪ್ರಯುಕ್ತ ಬೆಳೆ ವಿಮೆ ಮಾಡಿಸಿದ ರೈತರ ಬೆಳೆ ಹಾನಿ ಸಮಿಕ್ಷೆ ಕಾರ್ಯ ಪ್ರಗತಿಯಲ್ಲಿದ್ದು, ಕೆಲವೆ ದಿವಸಗಳಲ್ಲಿ ಬೆಳೆ ಹಾನಿಯಾದ ರೈತ ಬಾಂಧವರಿಗೆ ಪರಿಹಾರ ವಿತರಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ನದಿಗಳಿಂದ ಅಧಿಕ ನೀರು ಹೊರಕ್ಕೆ

Karur stampede: ಕರೂರ್‌ಗೆ ನಟ ವಿಜಯ್‌ ಬರ್ತಿದಂತೆ ಓಡೋಡಿ ಹೋದ ಫ್ಯಾನ್ಸ್..!‌ #Vijayrally #TamilNadu #Karur

ಮಹಾರಾಷ್ಟ್ರ ರಾಜ್ಯದ ಉಜ್ಜನಿ ಮತ್ತು ಸಿನಾ ಜಲಾಶಯದಿಂದ ಭೀಮಾ ನದಿಗೆ 1.84 ಲಕ್ಷ ಕ್ಯುಸೆಕ್ ನೀರು ಬಿಡಲಾಗುತ್ತಿದೆ. ಈ ನೀರು ಅಫಜಲಪೂರ ತಾಲ್ಲೂಕಿನ ಭೀಮಾ ಸೊನ್ನ ಬ್ಯಾರೇಜಿಗೆ ಇಂದು ಬಂದು ತಲುಪುತ್ತದೆ.

ಈಗಾಗಲೇ ಸೊನ್ನ ಬ್ಯಾರೇಜ್ನಿಂದ 2.80 ಲಕ್ಷ ಕ್ಯುಸೆಕ್ ನೀರು ಹೊರ ಬಿಡಲಾಗುತ್ತಿದೆ, ಉಜ್ಜನಿ ಮತ್ತು ಸಿನಾ ಜಲಾಶಯದ ನೀರು ಬಂದ ನಂತರ ಸೊನ್ನ ಬ್ಯಾರೇಜಿನಿಂದ ಇನ್ನೂ ಹೆಚ್ಚಿನ ಗೇಟ್ಗಳ ಮೂಲಕ ಭೀಮಾ ನದಿಗೆ ನೀರು ಹರಿಬಿಡಲಾಗುವುದು ಎಂದೂ ಸಚಿವರು ಮಾಹಿತಿ ನೀಡಿದ್ದಾರೆ.

ಬೆಣ್ಣೆತ್ತೋರ ಜಲಾಶಯದಿಂದ 12000 ಕ್ಯುಸೆಕ್ ನೀರು ಹೊರ ಬಿಡಲಾಗುತ್ತಿದೆ. ಮಳೆಯ ಮುನ್ಸೂಚನೆ ಇರುವ ಕಾರಣ ಜಲಾಶಯದ ಒಳಹರಿವು ಹೆಚ್ಚಾಗುವ ಸಾಧ್ಯತೆ ಯಾವುದೇ ಸಮಯದಲ್ಲಿ ಜಲಾಶಯದಿಂದ ಇನ್ನು ಹೆಚ್ಚಿನ ನೀರು ನದಿಗೆ ಹರಿಸಲಾಗುವುದು. ಆದ್ದರಿಂದ ಮುಂದಿನ ದಿನಗಳಲ್ಲಿ ಸೊನ್ನ ಮತ್ತು ಬೆಣ್ಣತ್ತೋರ ಬ್ಯಾರೇಜ್ ಕೆಳಗಡೆ ಇರುವ ನದಿ ಪಾತ್ರದ ಜನರು ಮುಂಜಾಗರೂಕತೆವಹಸಿಲು ಸೂಚಿಸುವಂತೆ ಜಿಲ್ಲೆ, ತಾಲೂಕು, ಹೋಬಳಿ, ಹಾಗೂ ಗ್ರಾಮ ಪಂಚಾಯತ್ ಮಟ್ಟದ ಅಧಿಕಾರಿಗಳು ಕಾರ್ಯೋನ್ಮುಖರಾಗುವಂತೆ ಸಚಿವರು ನಿರ್ದೇಶನ ನೀಡಿದ್ದಾರೆ.
ಮಳೆಯಿಂದ ಮೃತರಾದವರ ಕುಟುಂಬಗಳ ಅವಲಂಬಿತರಿಗೆ ತಕ್ಷಣ ಪರಿಹಾರ ಒದಗಿಸಲು ಕ್ರಮ ಆಗಬೇಕು, ಆಸ್ಪತ್ರೆಗಳಲ್ಲಿ ಅವಶ್ಯ ಔಷಧಿಗಳಳು, ಒ.ಆರ್.ಎಸ್. ಫಸ್ಟ್ಎಯ್ಡ್ ಸಾಮಗ್ರಿಗಳನ್ನು ದಾಸ್ತಾನು ಇರಿಸಿಕೊಳ್ಳಬೇಕು ಎಂದು ಸಚಿವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮನೆ ಕಳೆದುಕೊಂಡಿರುವ ನಿರಾಶ್ರಿತರನ್ನು ಆಯಾ ಗ್ರಾಮಗಳ ಪರಿಮಿತಿಯೊಳಗಿನ ಸರ್ಕಾರಿ ಕಟ್ಟಡಗಳಿಗೆ ಸ್ಥಳಾಂತರಿಸಬೇಕು, ಅಪಾಯದ ಸ್ಥಿತಿಯಲ್ಲಿರುವ ಕಟ್ಟಡಗಳಲ್ಲಿ ವಾಸ ಮಾಡುವವರನ್ನು ಸಹ ಕಾಳಜಿ ಕೇಂದ್ರಗಳಲ್ಲಿರಿಸಬೇಕು, ಬಿ.ಇ.ಒಗಳು ತೊಂದರೆಗೀಡಾದ ಗ್ರಾಮಗಳಿಗೆ ಭೇಟಿ ಕಟ್ಟಡಗಳು ಶಿಥಿಲವಾಗಿಲ್ಲ ಎಂಬುದನ್ನು ಖಾತ್ರಿಪಡಿಸಿಕೊಳ್ಳಬೇಕು, ಹೊಳೆ ಹರಿಯುವ ಹಾಗೂ ನೀರು ನಿಂತ ಸ್ಥಳಗಳತ್ತ ಮಕ್ಕಳನ್ನು ಕಳುಹಿಸದಂತೆ ಪೋಷಕರಲ್ಲಿ ಜಾಗೃತಿ ಮೂಡಿಸಬೇಕು, ಪ್ರವಾಹಕ್ಕೆ ತುತ್ತಾಗಿರುವ ನದಿ ಹಾಗೂ ಹೊಳೆಗಳತ್ತ ಹೋಗದಂತೆ ಗ್ರಾಮಸ್ಥರು ಜಾಗ್ರತೆವಹಿಸಬೇಕು ಎಂದೂ ಸಚಿವ ಪ್ರಿಯಾಂಕ್ ಖರ್ಗೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ತಾಲ್ಲೂಕುವಾರು ಗುರುತಿಸಲಾದ ಪ್ರವಾಹ ಪೀಡಿತ ಗ್ರಾಮಗಳು ಹಾಗೂ ತೆರೆಯಲಾದ ಕಾಳಜಿ ಕೇಂದ್ರಗಳು

ಈಗಾಲೇ ಕಲಬುರಗಿ ಜಿಲ್ಲೆಯ ಭಾರಿ ಮಳೆಯಿಂದಾಗಿ ಒಟ್ಟು 88 ಗ್ರಾಮ ಗಳನ್ನು ಪ್ರವಾಹ ಪೀಡಿತ ಗ್ರಾಮಗಳೆಂದು ಗುರುತಿಸಲಾಗಿದ್ದು, ಒಟ್ಟು 54 ಕಾಳಜಿ ಕೇಂದ್ರಗಳನ್ನು ತೆರೆಯಲಾಗಿದೆ ಹಾಗೂ ಸದರಿ ಕಾಳಜಿ ಕೇಂದ್ರಗಳಿಗೆ ಒಟ್ಟು 6664 ಸಾರ್ವಜನಿಕರಿಗೆ ಜಿಲ್ಲಾಡಳಿತದಿಂದ ಹಾಗೂ ರಕ್ಷಣಾ ಸಿಬ್ಬಂದಿಗಳಿಂದ (NDRF, SDRF, FIRE)ಕಾಳಜಿ ಕೇಂದ್ರಕ್ಕೆ ಸ್ಥಳಾಂತರಿಸಿದ್ದು, ವಿವರಗಳು ಹೀಗಿವೆ.

Lawyer Jagadish: ಬಿಗ್‌ಬಾಸ್‌ 12ರ ಬಗ್ಗೆ ಲಾಯರ್‌ ಜಗದೀಶ್‌ ಏನಂದ್ರು..! #kichchasudeep #kannada #bbk12
Tags: floodsHeavyRainsKarnatakaRainfallKarnatakaRainHavocKarnatakaRainsLandslideMonsoon2025
Previous Post

ಲಡಾಖ್‌ ಜನರ, ಸಂಸ್ಕೃತಿ ಮತ್ತು ಪರಂಪರೆಗಳ ನಾಶವೇ RSS ಬಿಜೆಪಿ ಗುರಿ : ರಾಹುಲ್‌ ಕಿಡಿ !

Next Post

ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

Related Posts

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !
ಇತರೆ / Others

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

by ಪ್ರತಿಧ್ವನಿ
September 30, 2025
0

ಇಂದು ನಗರದಲ್ಲಿನ ಚಂದ್ರ ಲೇಔಟ್‌ನಲ್ಲಿ Sunya IAS ನೂತನ ಸೆಂಟರ್‌ ಉದ್ಘಾಟನೆಗೊಂಡಿತು. ಚಂದ್ರ ಬಡಾವಣೆಯಲ್ಲಿ Civil Services Training Institutions ಗಳಿಗೆ ಹೆಸರುವಾಸಿಯಾಗಿದೆ. ರಾಜ್ಯ ಬೇರೆ ಬೇರೆ...

Read moreDetails
NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

September 30, 2025
ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

ಹೆಚ್ಚುವರಿ ಸೌಕರ್ಯಕ್ಕೆ ನಟ ದರ್ಶನ್‌ ಪರ ವಕೀಲರು ಕೋರ್ಟ್‌ ನಲ್ಲಿ ವಾದ !

September 30, 2025
ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!

ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!

September 29, 2025
ಕಲರ‍್ಸ್  ಕನ್ನಡದಲ್ಲಿ  ಹೊಚ್ಚ ಹೊಸ  ಧಾರಾವಾಹಿ

ಕಲರ‍್ಸ್ ಕನ್ನಡದಲ್ಲಿ ಹೊಚ್ಚ ಹೊಸ ಧಾರಾವಾಹಿ

September 30, 2025
Next Post
ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

Recent News

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !
Top Story

UAPA ಕಾನೂನಿನ ಅಡಿಯಲ್ಲಿ ಮೋದಿಯ ಬಹಳ ದೊಡ್ಡ ಅಭಿಮಾನಿ ಬಂಧನ !

by ಪ್ರತಿಧ್ವನಿ
September 30, 2025
ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ,  ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !
Top Story

ಬಿಜೆಪಿ ವಕ್ತಾರನಿಂದ ರಾಹುಲ್‌ ಗಾಂಧಿ ಹತ್ಯೆ ಬೆದರಿಕೆ, ಕೇಂದ್ರ ಹಾಗೂ ಕೇರಳ ಸರ್ಕಾರಗಳ ನಿರ್ಲಕ್ಷ್ಯ !

by ಪ್ರತಿಧ್ವನಿ
September 30, 2025
ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!
Top Story

ಪ್ರಸಿದ್ದ ಹಾಸ್ಯ ಕಲಾವಿದ, ರಂಗ ನಿರ್ದೇಶಕ ಯಶವಂತ ಸರದೇಶಪಾಂಡೆ ವಿಧಿವಶ!

by ಪ್ರತಿಧ್ವನಿ
September 29, 2025
ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ
Top Story

ಕಲ್ಯಾಣ ಕರ್ನಾಟಕದಲ್ಲಿ ನೆರೆ ಪರಿಹಾರ ಕಾರ್ಯ ತುರ್ತಾಗಿ ಕೈಗೊಳ್ಳಲು ರಾಜ್ಯ ಸರ್ಕಾರಕೆ ಹೆಚ್.ಡಿ. ಕುಮಾರಸ್ವಾಮಿ ಆಗ್ರಹ

by ಪ್ರತಿಧ್ವನಿ
September 28, 2025
ನಟ ವಿಜಯ್‌ : ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಸಂತಾಪ, ಪರಿಹಾರದ ವಾಗ್ದಾನ
Top Story

ನಟ ವಿಜಯ್‌ : ಕಾಲ್ತುಳಿತದಲ್ಲಿ ಮೃತರ ಕುಟುಂಬಕ್ಕೆ ಸಂತಾಪ, ಪರಿಹಾರದ ವಾಗ್ದಾನ

by ಪ್ರತಿಧ್ವನಿ
September 29, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

ಶೂನ್ಯ ಐಎಎಸ್‌ ಸೆಂಟರ್‌ ಖಾದರ್‌ ರಿಂದ ಉದ್ಘಾಟನೆ !

September 30, 2025
NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

NAASH Studio Launch ಮಾಡಿದ ಸ್ಯಾಂಡಲ್‌ವುಡ್‌ ನಟಿ ಸುಧಾರಾಣಿ !

September 30, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada