ಬೆಂಗಳೂರು : ನೈಜೀರಿಯಾ ಮೂಲದ ಡ್ರಗ್ ಫೆಡ್ಲರ್ಗಳನ್ನು ಪೊಲೀಸರು ಬಂಧಿಸಿದ ಬೆಂಗಳೂರಿನ ವಿವಿಪುರಂನಲ್ಲಿ ನಡೆದಿದೆ. ಬಂಧಿತರನ್ನು ಲಾರೆನ್ಸ್ ಹಾಗೂ ಚುಕ್ವೂನೇಜಿಮ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಸುಮಾರು 7 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.
1.85 ಕೆ.ಜಿ ಬಿಳಿ ಮೀಥೈಲ್ ಎಡಿಯಾಕ್ಸಿ ಮೆಥಾಂಫೆಟಮೈನ್ (White MDMA) 1.15kg ಕಂದು ಮೀಥೈಲ್ ಎಡಿಯಾಕ್ಸಿ ಮೆಥಾಂಫೆಟಮೈನ್ (Brown MDMA) 310 ಗ್ರಾಂ ಕೊಕೇನ್(Cocaine) ಅನ್ನು ವಿವಿಪುರಂ ಪೊಲೀಸರು ವಶಕ್ಕೆ ಪಡೆದಿದ್ದಾರೆ .
ಬಂಧಿತ ಆರೋಪಿಗಳು ಕಳೆದ ಐದು ವರ್ಷಗಳಿಂದ ಡ್ರಗ್ಸ್ ದಂಧೆ ನಡೆಸುತ್ತಿದ್ದರು ಎನ್ನಲಾಗಿದೆ. ಶ್ರೀಮಂತ ಉದ್ಯಮಿಗಳನ್ನು ಟಾರ್ಗೆಟ್ ಮಾಡಿ ಡ್ರಗ್ಸ್ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. ಇಬ್ಬರು ಪೆಡ್ಲರ್ಗಳನ್ನು ಬಂಧಿಸಿರುವ ಪೊಲೀಸರು ಆರೋಪಿಗಳನ್ನು ಹೆಚ್ಚಿನ ವಿಚಾರಣೆಗೆ ಒಳಪಡಿಸಿದ್ದಾರೆ.