ನವೆಂಬರ್ 5ರಂದು 2022-23ನೇ ಸಾಲಿನ ಕಲ್ಯಾಣ ಕರ್ನಾಟಕ ಪೊಲೀಸ್ ಕಾನ್ಸ್ಟೆಬಲ್ (ಸಿವಿಲ್) 454 ಹುದ್ದೆಗಳ ನೇಮಕಾತಿಗೆ ನಡೆಯಬೇಕಿದ್ದ ಲಿಖಿತ ಪರೀಕ್ಷೆಯನ್ನು ನ.19ಕ್ಕೆ ನಡೆಸಲು ಸಿದ್ಧತೆ ನಡೆಸುವಂತೆ ಪೊಲೀಸ್ ನೇಮಕಾತಿ ವಿಭಾಗ ಡಿಐಜಿಪಿ ಯಡಾ ಮಾರ್ಟಿನ್ ಮಾರ್ಬನ್ಯಾಂಗ್ ಆದೇಶವನ್ನು ಹೊರಡಿಸಿದ್ದಾರೆ.

ಕರ್ನಾಟಕ ಪೊಲೀಸ್ ಕಾನ್ಸ್ಟೆಬಲ್ (ಸಿವಿಲ್) 454 ಬ್ಯಾಕ್‌ಲಾಗ್ ಹುದ್ದೆಗಳ ಲಿಖಿತ ಪರೀಕ್ಷೆಯನ್ನು ನ.5ಕ್ಕೆ ನಿಗದಿ ಪಡಿಸಲಾಗಿತ್ತು. ಪರೀಕ್ಷಾ ಕೇಂದ್ರಗಳನ್ನು ಗುರುತಿಸಲಾಗಿತ್ತು. ಈ ನಡುವೆ ಅಂದೇ ದಿನ ಕೆಪಿಎಸ್‌ಸಿ ಕೂಡ ವಿವಿಧ ಇಲಾಖೆಗಳ ನೇಮ ಕಾತಿ ಲಿಖಿತ ಪರೀಕ್ಷೆ ನಿಗದಿಪಡಿಸಿತ್ತು. ಇದು ಅಭ್ಯರ್ಥಿಗಳಲ್ಲಿ ಅಸಮಾಧನವನ್ನು ಹುಟ್ಟುಹಾಕಿತ್ತು, ಈ ಬಗ್ಗೆ ಸಚಿವ ಪ್ರಿಯಾಂಕ ಖರ್ಗೆ ಕೂಡ ಸಂಬಂಧಪಟ್ಟ ಅಧಿಕಾರಿಗಳ ಗಮನ ಸೆಳೆದಿದ್ದರು.