• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, March 4, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!

ಬರೆದ ಪ್ರತೀ ವರದಿ-ತೋರಿಸಿದ ಪ್ರತಿ ಸುದ್ದಿ-ಕ್ಯಾಮರಾ ಎದುರು ಆಡಿದ ಪ್ರತೀ ಮಾತಿಗೂ ಉತ್ತರದಾಯಿತ್ವ ಹೊಂದುವ ಹೊಣೆಗಾರಿಕೆಯ ಪತ್ರಕರ್ತರಾಗಲು ಪ್ರಭಾಕರ್‌ ಕರೆ...

ಪ್ರತಿಧ್ವನಿ by ಪ್ರತಿಧ್ವನಿ
March 4, 2026
in Top Story, ಇದೀಗ, ಕರ್ನಾಟಕ, ರಾಜಕೀಯ
0
ಹಣದ ಬದಲಿಗೆ ಪತ್ರಿಕೋದ್ಯಕ್ಕೆ ಸತ್ಯದ ಬಡತನ ಕಾಡುತ್ತಿದೆ : ಕೆ.ವಿ. ಪ್ರಭಾಕರ್‌ ಬೇಸರ..!
Share on WhatsAppShare on FacebookShare on Telegram

ಬೆಂಗಳೂರು : ಇಂದು ಸಾಮಾಜಿಕ ಬೆಸುಗೆಯನ್ನು ಕತ್ತರಿಸುವ ಕತ್ತರಿಗಳು ಜನ‌ಸಮುದಾಯದ ಪ್ರಜ್ಞೆಯನ್ನು ರೂಪಿಸುತ್ತಿವೆ. ಇಂಥಾ ಹೊತ್ತಲ್ಲಿ ಸಮಾಜವನ್ನು ಪರಸ್ಪರ ಹೊಲಿಯುವ ಸೂಜಿಗಳ ಅಗತ್ಯವಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಅವರು ಅಭಿಪ್ರಾಯಪಟ್ಟಿದ್ದಾರೆ.

ADVERTISEMENT

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ‌ ಇಲಾಖೆ, ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವ ವಿದ್ಯಾನಿಲಯ ಮತ್ತು ಬೆಂಗಳೂರು ವಿಶ್ವ ವಿದ್ಯಾನಿಲಯ ಆಯೋಜಿಸಿದ್ದ “ಮಾಧ್ಯಮ ಹಬ್ಬ-2026” ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದರು.

CM Media Advisor KV Prabhakar : ಪತ್ರಕರ್ತರಿಗೆ ಕೆ ವಿ ಪ್ರಭಾಕರ್‌ ಕಿವಿಮಾತು.. #pratidhvani

ಅರಳುವ ಹೂವಿನ ಒಳಗೆ ಮಕರಂದ ಬೆರೆತಿರುವ ಹಾಗೆ ಅರಳುವ ಪತ್ರಕರ್ತ, ಪತ್ರಕರ್ತೆಯ ಒಳಗೆ ಸಾಮಾಜಿಕ ಪ್ರಜ್ಞೆ ಮತ್ತು ನೈತಿಕ ಪ್ರಜ್ಞೆ ಬೆರೆತಿರಬೇಕು. ಜನ ಸಮುದಾಯದ ಪ್ರಜ್ಞೆಯನ್ನು ರೂಪಿಸುವುದು ಪತ್ರಕರ್ತರಾದವರ ಹೊಣೆ. ಜನ‌ ಸಮುದಾಯದ, ಸಮಾಜದ ಪ್ರಜ್ಞೆಯನ್ನು ರೂಪಿಸುವ ನಿಮ್ಮ‌ ಪ್ರಜ್ಞೆಯನ್ನು ಯಾರು ರೂಪಿಸುತ್ತಿದ್ದಾರೆ, ಯಾವುದು ರೂಪಿಸುತ್ತಿದೆ ಎನ್ನುವ ಸ್ಪಷ್ಟ ಎಚ್ಚರ ಇರಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

ಈ ಎಚ್ಚರ ಇದ್ದಾಗ ತಾನು ಬರೆದ ಪ್ರತೀ ವರದಿ, ತಾನು ತೋರಿಸಿದ ಪ್ರತೀ ಸುದ್ಧಿ, ಕ್ಯಾಮರಾ ಮುಂದೆ ತಾನು ಆಡಿದ ಪ್ರತೀ ಮಾತಿಗೂ ಉತ್ತರದಾಯಿತ್ವ ಹೊಂದಿರುವ ಹೊಣೆಗಾರಿಕೆಯ ಪತ್ರಕರ್ತರು ರೂಪುಗೊಳ್ಳುತ್ತಾರೆ. ಈ ಸಾಮಾಜಿಕ ಎಚ್ಚರ ಬರುವುದು ನಮ್ಮ ನೋಟದಿಂದ. ಸಮಾಜವನ್ನು ನೋಡುವ ಕಣ್ಣುಗಳಿಂದ. ಯಾರ ಕಣ್ಣುಗಳಿಂದ ಹಾಗೂ ಯಾವ ಕಣ್ಣುಗಳಿಂದ ನಾವು ನೋಡುತ್ತಿದ್ದೇವೆ ಎನ್ನುವುದರ ಮೇಲೆ ನಮ್ಮ ನೋಟ, ನಮ್ಮ ಗ್ರಹಿಕೆ ರೂಪುಗೊಳ್ಳುತ್ತದೆ ಎಂದು ಒತ್ತಿ ಹೇಳಿದ್ದಾರೆ.

May be an image of dais and text that says 'ವಾರ್ತಾ ಡಾ.ಮನಮೋಹನ್ ಬೆಂಗಳೂರು ವಿಶ್ವ ಮಾದ್ವ 9g'

ಹುಟ್ಟಿದ ಮಗು ಮಾತಿಗೆ ಮೊದಲು ನೋಡಿ ಕಲಿಯುತ್ತದೆ. ನೋಟದ ಮೂಲಕವೇ ತನ್ನ ಸುತ್ತಲನ್ನು ಗ್ರಹಿಸುತ್ತದೆ. ಸಮಾಜದ ಬಗ್ಗೆ ಸ್ಪಷ್ಟ ನೋಟ-ಗ್ರಹಿಕೆ ಇದ್ದಾಗ ಪರಿಣಾಮಕಾರಿ ಪತ್ರಕರ್ತ ಹುಟ್ಟುತ್ತಾನೆ.
ಪತ್ರಕರ್ತರಾಗುವವರು ಪೂರ್ವಗ್ರಹ ಮುಕ್ತ ಮಗುವಿನ ಮನಸ್ಸಿನಿಂದ ಸಾಮಾಜಿಕ ವ್ಯವಸ್ಥೆಯನ್ನು, ಸಾಮಾಜಿಕ ತಾರತಮ್ಯಗಳನ್ನು “ಇರುವುದನ್ನು ಇರುವ ಹಾಗೆ ಗಮನಿಸಬೇಕು”. ಹೀಗಾದಾಗ ಮಾತ್ರ ಸಾಮಾಜಿಕ ಸಮಸ್ಯೆಗಳು ಮತ್ತು ಈ ಸಮಸ್ಯೆಗಳಿಗೆ ಕಾರಣವಾದ ಸಂಗತಿಗಳ ಬಗ್ಗೆ ಸ್ಪಷ್ಟ ಗ್ರಹಿಕೆ ಬರುತ್ತದೆ. ಈ ಸ್ಪಷ್ಟತೆಯೇ ಪರಿಣಾಮಕಾರಿ ಪತ್ರಕರ್ತನನ್ನು ರೂಪಿಸುತ್ತದೆ ಎಂದು ವಿವರಿಸಿದರು.

ದಿನೇಶ್‌ ಅಮೀನ್ ಮಟ್ಟು ಅವರು ಸೇರಿದಂತೆ ವಡ್ಡರ್ಸೆ ರಘುರಾಮ್ ಶೆಟ್ಟರು, ಪಿ.ಲಂಕೇಶ್, ಖಾದ್ರಿ ಶಾಮಣ್ಣ, ವೈಎನ್ ಕೆ, ಮೊಹರೆ ಹನುಮಂತರಾಯರು, ಡಿವಿಜಿ, ಟಿಎಸ್ ಆರ್ ರೀತಿಯ ಹಲವು ಹಿರಿಯರು ಸೂಜಿಗಳಾಗಿ, ದರ್ಜಿಗಳಾಗಿ, ನೇಕಾರರಾಗಿ ಪತ್ರಿಕಾ ವೃತ್ತಿಯ ಪ್ರಜ್ಞೆಯನ್ನು ರೂಪಿಸುವುದರ ಜೊತೆಗೆ ಸಾಮಾಜಿಕ‌ ಪ್ರಜ್ಞೆಯನ್ನೂ ರೂಪಿಸಿದ್ದಾರೆ. ಸಮಾಜವನ್ನು ಬೆಸೆಯುವ ಬೆಸುಗೆಗಳಾಗಿದ್ದಾರೆ ಎಂದು ಎಲ್ಲರಿಗೂ ಪ್ರಭಾಕರ್‌ ಧನ್ಯತಾಭಾವ ಮೆರೆದಿದ್ದಾರೆ.

ಇದನ್ನೂ ಓದಿ : ವಿಶ್ವದಲ್ಲೇ ಅತಿ ವೇಗದ ಇಂಟರ್ನೆಟ್ ಯಾವ ದೇಶಗಳಲ್ಲಿದೆ?

ಕೇವಲ ಕಾರ್ಯಾಗಾರದಲ್ಲಿ ಭಾಗವಹಿಸುವುದರಿಂದ ಪತ್ರಿಕೋದ್ಯಮದ‌ ಪಟ್ಟುಗಳನ್ನು ಕಲಿಯಲು ಸಾಧ್ಯವಿಲ್ಲ ಎಂಬುದರ ಬಗ್ಗೆಯೂ ವಿದ್ಯಾರ್ಥಿಗಳು ಸ್ಪಷ್ಡವಾಗಿ ತಿಳಿಯಬೇಕಿದೆ. ಓದು, ಸಂಘಟನೆ ಹಾಗೂ ಸ್ವತಂತ್ರ ಚಿಂತನೆಯಿಂದ ಮಾತ್ರ ಒಳನೋಟಗಳನ್ನು ಪಡೆಯಬಹುದು.‌ ಒಳನೋಟವೇ ಇಲ್ಲದವರಿಗೆ ಪತ್ರಿಕೋದ್ಯಮ ಕೈಹಿಡಿಯದು. ಹಾಗಾಗಿ ಈ ಒಳನೋಟಗಳನ್ನು ಬೆಳೆಸಿಕೊಳ್ಳಲು ವಿದ್ಯಾರ್ಥಿಗಳು ತಮ್ಮ ಒಳಗಣ್ಣುಗಳನ್ನು ತೆರೆದು ತಯಾರಿ ನಡೆಸಿಕೊಳ್ಳಬೇಕಿದೆ ಎಂದು ಕಿವಿಮಾತು ಹೇಳಿದ್ದಾರೆ.

ಮಹಾತ್ಮಗಾಂಧಿ ಮತ್ತು ಅಂಬೇಡ್ಕರ್ ಕೂಡ ಪತ್ರಕರ್ತರಾಗಿದ್ದವರು. ಇವರೆಲ್ಲಾ ಪತ್ರಕರ್ತರಾಗಿದ್ದಾಗ ಪತ್ರಿಕೋದ್ಯಮಕ್ಕೆ ಹಣದ ಬಡತನವಿತ್ತು. ಸತ್ಯಕ್ಕೆ ಬಡತನ ಇರಲಿಲ್ಲ. ಈಗ ಹಣದ ಬಡತನದಿಂದ ಹೊರಗೆ ಬಂದಿರುವ ಪತ್ರಿಕೋದ್ಯಮ ಸತ್ಯದ ಬಡತನಕ್ಕೆ ಜಾರಿರುವುದು ದುರಂತ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

May be an image of one or more people, dais and text that says 'ಾರ ವಿಶ್ವಿದ್ಯಾನಿಲಯ eo ನಗರ ವಿಶ್ವಿದ್ಯಾನಿಲಿಯ ಜ್ಞಾನಭಾರತಿ ಸಪಭಾಗಿತ್ವದಲ್ಲಿ ಮಾಗ್ಯಮು ಹಬ್ಬ 2026 NEW ting ent entth tha ALIEET 糕産'

ಸತ್ಯಕ್ಕೆ ಹಲವು‌ ಮುಖಗಳು ಇರುತ್ತವೆ. ಆ ಎಲ್ಲ‌ ಮುಖಗಳನ್ನು ನಿರ್ಭಿಡೆಯಾಗಿ ಅನಾವರಣಗೊಳಿಸಲು ಎಲ್ಲ ಜಾತಿ, ಮತ, ಧರ್ಮ, ಆಚಾರ, ವಿಚಾರಗಳನ್ನು ಹೊಂದಿರುವವರು ಮಾಧ್ಯಮ ಕ್ಷೇತ್ರದಲ್ಲಿ ಇದ್ದಷ್ಟು ಮಾಧ್ಯಮ ಕ್ಷೇತ್ರ ಸದೃಢಗೊಳ್ಳುತ್ತದೆ.
ಸ್ವಾತಂತ್ರ್ಯ ಹೋರಾಟದಲ್ಲಿ “ಒಗ್ಗಟ್ಟು” ದೇಶದ ಮೌಲ್ಯವಾಗಿತ್ತು. ಸ್ವಾತಂತ್ರ್ಯಾ ನಂತರ “ವಿವಿಧತೆಯಲ್ಲಿ ಏಕತೆ” ದೇಶದ ಮೌಲ್ಯವಾಗಿತ್ತು. ಭಾರತವನ್ನು ರೂಪಿಸಿದ ಈ ಎರಡೂ ಮೌಲ್ಯಗಳನ್ನೂ ಹಾಳುಗೆಡವುತ್ತಿರುವ ಈ ಹೊತ್ತಲ್ಲಿ “ಬಹುತ್ವ” ನಮ್ಮ ನೆಲದ ಮಂತ್ರವಾಗಿದೆ, ಮೌಲ್ಯವಾಗಿದೆ. ಇದು ಕಾಪಾಡುವ ಹೊಣೆಗಾರಿಕೆ ಹಾಲಿ ಮತ್ತು ಭಾವಿ ಪತ್ರಕರ್ತರ ಮೇಲಿದೆ ಎಂದು ಪ್ರಭಾಕರ್ ಒತ್ತಿ ಹೇಳಿದ್ದಾರೆ.

ಮಾಧ್ಯಮಗಳಲ್ಲಿ ಆಯ ಕಟ್ಟಿನ ಹುದ್ದೆಯಲ್ಲಿರುವವರು ಒಂದೇ ವರ್ಗಕ್ಕೆ ಸೇರಿದರೆ, ಬಹುತ್ವವನ್ನು ಪ್ರತಿನಿಧಿಸಲು ಸಾಧ್ಯವಿಲ್ಲ. ಇಂದು ಮೊಬೈಲ್ ನಲ್ಲಿ ಹರಿದಾಡುವ ಲಕ್ಷಾಂತರ ಕಟೆಂಟ್‌ಗಳು ಬಹುತ್ವದ ನೆಲೆಯಲ್ಲಿಯೇ ಸೃಷ್ಟಿಯಾಗಿವೆ. ಮಾಹಿತಿ ಸಾಗರ ಪತ್ರಿಕೋದ್ಯಮಕ್ಕೆ ಬೆದರಿಕೆಯೆಂದು ಭಾವಿಸಬೇಕಿಲ್ಲ. ಸೂಕ್ಷ್ಮವಾಗಿ ಗಮನಿಸಿದರೆ ಇಲ್ಲೊಂದು ಸಂಗತಿಯನ್ನು ಮಾಧ್ಯಮ ಕ್ಷೇತ್ರ ಸ್ಷಷ್ಡವಾಗಿ ಅಳವಡಿಸಿಕೊಳ್ಳಬೇಕಿದೆ. ಅದೇನೆಂದರೆ ಒಂದು ಸಮುದಾಯ, ಒಂದು ಭಾಷೆ, ಒಂದು ಜಾತಿಯ ದನಿಗಳನ್ನಷ್ಟೆ ಕೇಳುತ್ತಿದ್ದ ಕಾಲಘಟ್ಟದಲ್ಲಿ‌ ಕಟೆಂಟ್ ಸುರಿಮಳೆಯಲ್ಲಿ ನಾನಾ ಮಣ್ಣಿಗೆ ಸೇರಿದ ವಿಭಿನ್ನ ದನಿಗಳಿವೆ. ಈ‌ ಎಲ್ಲಾ ದನಿಗಳಿಂದ ಡಿಜಿಟಲ್ ಮಾಧ್ಯಮ ವರ್ಣಮಯವಾಗಿದೆ ಮತ್ತು ವಿಭಿನ್ನ ದನಿಗಳ‌ ಕಾರಣಕ್ಕೆ ಜನರನ್ನು ಹಿಡಿದಿಡುತ್ತಿದೆ ಎಂದು ಅಭಿಮತ ಹೊರಹಾಕಿದ್ದಾರೆ.

Iran Israel War : Khameneiಪರ Indiaದಲ್ಲಿ  ಪ್ರತಿಭಟನೆ ಮಾಡೋದು ಬೇಡ  |Major| Raghu Ram Reddy |Pratidhvani

ಪತ್ರಿಕೆಗಳಲ್ಲಿ ಮೊದಲೆಲ್ಲ ಪ್ರೂಫ್ ರೀಡರ್ ಇರುತ್ತಿದ್ದರು. ಕ್ರಮೇಣ ಆ ಪರಂಪರೆ ಇಲ್ಲವಾಯಿತು. ವಿಷಯ ತಪ್ಪಿಲ್ಲದ ಹಾಗೆ ಅಚ್ಚಿಗೆ ಹೋಗಲು ಪ್ರೂಪ್ ರೀಡರ್ ಹೇಗೆ ಮುಖ್ಯವಾಗುತ್ತಿದ್ದರೋ, ಪ್ರಸ್ತುತ ಎಲ್ಲ ಬಗೆಯ ಮಾಧ್ಯಮಗಳಿಗೂ ಬೇಕಿರುವುದು ಫ್ಯಾಕ್ಟ್ ಚೆಕರ್ಸ್. ಸುಳ್ಳುಗಳ‌ ನಡುವೆ ಸತ್ಯವನ್ನು, ನೈಜ‌ ಸುದ್ದಿಯನ್ನು ಹೆಕ್ಕಿ, ಜನರ ಮುಂದೆ ಪರಿಣಾಮಕಾರಿಯಾಗಿ ಇಡಬಲ್ಲವರು ಮಾತ್ರ ಪರಿಣಾಮಕಾರಿ ಪತ್ರಕರ್ತರಾಗಿ ಮಂಚೂಣಿಗೆ ಬರಲು ಸಾಧ್ಯವಿದೆ ಎಂದು ಪ್ರತಿಪಾದಿಸಿದ್ದಾರೆ.

ಸಾವಿರ ಸುಳ್ಳಿನ ಕಟೆಂಟ್ ಗಳ ನಡುವೆ ಸತ್ಯ ಹೇಳುವ ಕಟೆಂಟ್ ಗಳಿಗೆ ಆರಂಭದಲ್ಲಿ ಹಿನ್ನಡೆಯಾದರೂ ಅದು ಗೆಲ್ಲುತ್ತದೆ. ಆ ಭರವಸೆಯಲ್ಲಿ ಪತ್ರಕರ್ತರು ಸತ್ಯವನ್ನು ಹುಡುಕಬೇಕಿದೆ. ಈ ಸತ್ಯವನ್ನು ಹುಡುಕುವ ಕಣ್ಣುಗಳನ್ನು, ನೋಟವನ್ನು, ಗ್ರಹಿಕೆಯನ್ನು ಕೊಡುವ ಮೂಲಕ “ಸಾಮಾಜಿಕ ಪ್ರಜ್ಞೆ-ನೈತಿಕ ಪ್ರಜ್ಞೆ ಬೆರೆತ ಪತ್ರಕರ್ತರು ರೂಪುಗೊಳ್ಳಲು ಈ ಕಾರ್ಯಾಗಾರ ನೆರವಾಗಲಿ ಎಂದು ಆಶಿಸಿದ್ದಾರೆ.

ಪತ್ರಕರ್ತರಾಗುವವರಿಗೆ ಓದಿನ‌ ಹಸಿವು ಮತ್ತು ಸಾಮಾಜಿಕ ಜವಾಬ್ದಾರಿ ಇರಬೇಕು…

ಹಿರಿಯ ಸಮಾಜವಾದಿ ಚಿಂತಕರೂ, ಪತ್ರಕರ್ತರೂ ಆದ ದಿನೇಶ್ ಅಮೀನ್ ಮಟ್ಟು ಮಾತನಾಡಿ, ” ಬರೆಯುವುದಕ್ಕಿಂತ ಹೆಚ್ಚಾಗಿ ಓದಬೇಕು. ಪತ್ರಕರ್ತರಾಗುವವರಿಗೆ ಓದಿನ‌ ಹಸಿವು ಮತ್ತು ಸಾಮಾಜಿಕ ಜವಾಬ್ದಾರಿ ಇರಬೇಕು ಎಂದು ಸಲಹೆ ನೀಡಿದ್ದಾರೆ

ಸಾಮಾಜಿಕ ಜವಾಬ್ದಾರಿ ಇಲ್ಲದ ಯಾವುದೇ ವೃತ್ತಿ ಸಾಮಾಜಿಕ ಪಾಪ. ಪಾತಕ, ಮೂಡನಂಬಿಕೆಗಳನ್ನು ವಿಜ್ರಂಭಿಸುವವರು ಒಳ್ಳೆಯ ಪತ್ರಕರ್ತ ಇರಲಿ, ಒಬ್ಬ ಜವಾಬ್ದಾರಿಯುತ ನಾಗರಿಕ ಕೂಡ ಆಗಿರಲು ಸಾಧ್ಯವಿಲ್ಲ. ಅಜ್ಞಾನ, ಅಸೂಕ್ಷ್ಮ ಆಗಿರುವವರು ಪತ್ರಕರ್ತ ಎನ್ನಿಸಲು ಸಾಧ್ಯವೇ ಇಲ್ಲ ಎಂದು ಕುಟುಕಿದ್ದಾರೆ.

ಈ ವೇಳೆ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಮಾಧ್ಯಮ‌ ಅಕಾಡೆಮಿ‌ ಅಧ್ಯಕ್ಷೆ ಆಯೆಷಾ ಖಾನುಂ, ಕುಲಪತಿ ಪ್ರೊ.ರಮೇಶ್ ಬಿ, ಕುಲಸಚಿವ ನೀವೀನ್ ಜೋಸೆಫ್, ವಾರ್ತಾ ಇಲಾಖೆ ಉಪನಿರ್ದೇಶಕರಾದ ಪಲ್ಲವಿ ಹೊನ್ನಾಪುರ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

Tags: Benglore City UniversitycameraCM Media AdvisorCM Siddaramaiahcongress karnatakaConstitutionContent CreatingDeigital MediaElectronic mediajournalismJournalism EthicsJournalistsK V Prabhakarmedia freedomMoral JounalismPratidhvaniPrine MediaRepoertingReportersSocial Change JournalistSpecial Reportvideo
Previous Post

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

Next Post

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

Related Posts

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!
Top Story

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

by ಪ್ರತಿಧ್ವನಿ
March 4, 2026
0

ಬೆಂಗಳೂರು : ರೈತರು ತಮ್ಮ ಗಂಗಾ ಕಲ್ಯಾಣ ಯೋಜನೆ ಕುರಿತ ಅರ್ಜಿಯ ಸ್ಥಿತಿಯನ್ನು ಆನ್‌ಲೈನ್‌ನಲ್ಲಿ ಟ್ರ್ಯಾಕ್ ಮಾಡಲು ಗಂಗಾ ಕಲ್ಯಾಣ ಪೋರ್ಟಲ್‌ನಲ್ಲಿ ಬೆಸ್ಕಾಂ ವತಿಯಿಂದ ಹೊಸ ಆಯ್ಕೆ...

Read moreDetails
ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

ಇಸ್ರೇಲ್-ಇರಾನ್ ಯುದ್ಧ: ವಿನಾಶದ ಹಾದಿ ; ಗಗನಕ್ಕೆ ಡೀಸೆಲ್ ಬೆಲೆ, ಕಾಡುತ್ತೆ ಅಡುಗೆ ಅನಿಲದ ಅಭಾವ..!

March 4, 2026
ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

ಸಾಮ್ರಾಜ್ಯಶಾಹಿ ಕ್ರೌರ್ಯವೂ ಯುದ್ಧಕೋರ ಮನಸ್ಥಿತಿಯೂ..

March 4, 2026
ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

ಕೇಂದ್ರದ ಅಸಮಾನತೆ ನೀತಿ ನಮ್ಮ ಸಂವಿಧಾನ ರಚನಕಾರರ ಹೊಂದಾಣಿಕೆ ನೀತಿಗೆ ಅಡ್ಡಿ : ಸ್ಟಾಲಿನ್‌ಗೆ ಸಿದ್ದರಾಮಯ್ಯ ಪತ್ರ..

March 4, 2026
ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

ಅಸಭ್ಯವಾಗಿ ವೀಡಿಯೋ-ಫೋಟೋ ಚಿತ್ರೀಕರಿಸುವವರ ವಿರುದ್ಧ ನಟಿ ಸಪ್ತಮಿ ಗೌಡ ಆಕ್ರೋಶ..!

March 4, 2026
Next Post
ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

ಗಂಗಾ ಕಲ್ಯಾಣ ಫಲಾನುಭವಿಗಳಿಗೆ ಇಂಧನ ಸಚಿವ ಕೆ.ಜೆ.ಜಾರ್ಜ್ ಗುಡ್‌ ನ್ಯೂಸ್..!

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada