Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
No Result
View All Result
Pratidhvani
No Result
View All Result

NRC ಕುರಿತು ಸಂಸತ್ತಿನಲ್ಲಿ ಸುಳ್ಳು ಹೇಳಿದರೇ ಅಮಿತ್‌ ಶಾ?

NRC ಕುರಿತು ಸಂಸತ್ತಿನಲ್ಲಿ ಸುಳ್ಳು ಹೇಳಿದರೇ ಅಮಿತ್‌ ಶಾ?
NRC ಕುರಿತು ಸಂಸತ್ತಿನಲ್ಲಿ ಸುಳ್ಳು ಹೇಳಿದರೇ ಅಮಿತ್‌ ಶಾ?

February 4, 2020
Share on FacebookShare on Twitter

ಎನ್‌ಆರ್‌ಸಿ ಜಾರಿಯ ಕುರಿತಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ ಅಧಿವೇಶನದ ಸಂದರ್ಭದಲ್ಲಿ ಎನ್‌ಆರ್‌ಸಿ ದೇಶದಾದ್ಯಂತ ಜಾರಿಗೊಳಿಸುತ್ತೇವೆ ಎಂದು ಖಡಾಖಂಡಿತವಾಗಿ ಹೇಳಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿ ಸಮಾವೇಶವೊಂದರಲ್ಲಿ ಮಾತನಾಡುತ್ತಾ ಇದನ್ನು ನಿರಾಕರಿಸಿದ್ದರು. ಇದರಿಂದಾಗಿ ಎನ್‌ಆರ್‌ಸಿ ಜಾರಿ ಮಾಡುವ ಕುರಿತು ಬಿಜೆಪಿಯಲ್ಲೇ ಗೊಂದಲ ಮೂಡಿದೆಯೇ ಎಂದ ಪ್ರಶ್ನೆ ಎಲ್ಲೆಡೆಯಿಂದ ಕೇಳಿ ಬಂದಿತ್ತು. ಹಾಗೂ ಈ ರೀತಿಯ ಹೇಳಿಕೆಗಳಿಂದ ಭಾರತೀಯರಲ್ಲಿ ಮತ್ತಷ್ಟು ಗೊಂದಲ ಮನೆ ಮಾಡಿತ್ತು.

ಹೆಚ್ಚು ಓದಿದ ಸ್ಟೋರಿಗಳು

ಕಾಂಗ್ರೆಸ್​ ನಾಯಕಿಗೆ ಶೂರ್ಪನಖಿ ಎಂದಿದ್ದ ಪ್ರಧಾನಿ ಮೋದಿ : ಮಾನನಷ್ಟ ಮೊಕದ್ದಮೆ ಹೂಡುತ್ತೇನೆಂದ ರೇಣುಕಾ ಚೌಧರಿ

ಬಿಜೆಪಿಗೆ ಬಿಜೆಪಿಯೇ ಎದುರಾಳಿ..! ‘ನಾವಿಕನಿಲ್ಲದ ಹಡಗು’ ಭಾಗ – 02

ನಿಮ್ಮಂತಹ ಪುಕ್ಕಲು ಸರ್ವಾಧಿಕಾರಿಗೆ ಹೆದರಲ್ಲ: ಮೋದಿ ವಿರುದ್ಧ ಪ್ರಿಯಾಂಕ ಗುಡುಗು.!

ಇಂದು ಸಂಸತ್ತಿನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ಕುರಿತಾದ ಪ್ರಶ್ನೆಗೆ ಲಿಖಿತವಾಗಿ ಉತ್ತರ ನೀಡಿರುವ ಕೇಂದ್ರ ಸಚಿವಾಲಯ ರಾಷ್ಟ್ರಮಟ್ಟದಲ್ಲಿ ಎನ್‌ಆರ್‌ಸಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಇದುವರೆಗೂ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಸಂಸತ್‌ಗೆ ಸ್ಪಷ್ಟಪಡಿಸಿದೆ. ಸಿಎಎ ಜೊತೆಗೆ ಎನ್‌ಆರ್‌ಸಿಯನ್ನು ದೇಶದಾದ್ಯಂತ ಜಾರಿಗೆ ತರಲಾಗುವುದು ಎಂಬ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಕೇಂದ್ರ ಸರಕಾರದ ಎನ್‌ಆರ್‌ಸಿ ಜಾರಿ ಇಲ್ಲ ಎಂದಿದೆ. ಇದರ ಬೆನ್ನಲ್ಲೇ ಲೋಕಸಭೆಯಲ್ಲಿ ಎನ್‌ಆರ್‌ಸಿ ಜಾರಿಯ ಕುರಿತಾಗಿ ಕೇಳಿರುವ ಪ್ರಶ್ನೆಯೊಂದಕ್ಕೆ ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ನಿತ್ಯಾನಂದ ರೈ ಲಿಖಿತ ರೂಪದಲ್ಲಿ ಉತ್ತರಿಸಿ, ಎನ್‌ಆರ್‌ಸಿ ರಾಷ್ಟ್ರೀಯ ಮಟ್ಟದಲ್ಲಿ ಜಾರಿಗೆ ತರವ ನಿರ್ಧಾರವನ್ನು ಇದುವರೆಗೂ ಕೇಂದ್ರ ಸರಕಾರ ಮಾಡಿಲ್ಲ ಎಂದಿದ್ದಾರೆ.

ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಬಗ್ಗೆ ದೇಶದಲ್ಲಿ ದೊಡ್ಡ ಚರ್ಚೆಯೇ ನಡೆದಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಎನ್‌ಆರ್‌ಸಿ ಪರಿಷ್ಕೃತ ಕರಡು ಪಟ್ಟಿಯಿಂದಾಗಿ ಅಸ್ಸಾಂ ಜನರ ಪ್ರಜಾಪ್ರಭುತ್ವ ಹಕ್ಕುಗಳು ಮತ್ತು ಮಾನವ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿವೆ.

ಕೆಲ ದಿನಗಳಿಂದ ದೆಹಲಿಯಲ್ಲಿ ಸಿಎಎ, ಎನ್ಆರ್ ಸಿ ಕುರಿತಾಗಿ ಉದ್ವಿಗ್ನ ವಾತಾವರಣ ಇಡೀ ದೇಶದಲ್ಲಿ ಸೃಷ್ಟಿಯಾಗಿದೆ. ದೆಹಲಿ ವಿಧಾಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈಗಾಗಲೇ ಎಲ್ಲಾ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿಯಾಗಿದೆ. ಚುನಾವಣಾ ತಂತ್ರಗಾರಿಕೆಗೋ ಅಥವಾ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆ ಕಾರಣಕ್ಕೋ ಎನ್‌ಆರ್‌ಸಿಯ ಕುರಿತಾದ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನವನ್ನು ಕೇಂದ್ರ ಮಾಡುತ್ತಿದೆ.

ಈ ಹಿಂದೆ ಗೃಹ ಸಚಿವ ಅಮಿತ್ ಶಾ ದೇಶಾದ್ಯಂತ ಸಿಎಎ ಜಾರಿಗೊಳಿಸಲಾಗಿದೆ, ಇದರ ಬೆನ್ನಲ್ಲೇ ಎನ್‌ಆರ್‌ಸಿ ಯನ್ನೂ ಜಾರಿಗೊಳಿಸಲಾಗುವುದು. ಅಸ್ಸಾಂನಲ್ಲಿ ಎನ್‌ಆರ್‌ಸಿ ಯನ್ನು ಜಾರಿಗೊಳಿಸಿದಂತೆ ದೇಶವ್ಯಾಪಿಗೊಳಿಸಲಾಗುವುದು. ಸಿಎಎ ನಂತರ ಎನ್‌ಆರ್‌ಸಿ ಜಾರಿ ಖಚಿತ’ ಎಂದು ಹೇಳಿಕೆ ನೀಡಿದ್ದರು. ಇದೀಗ ಗೃಹ ಸಚಿವಾಲಯ ಎನ್‌ಆರ್‌ಸಿ ಜಾರಿಗೆ ತರುವ ಯಾವುದೇ ಯೋಚನೆ ಇಲ್ಲ ಎಂದು ಲಿಖಿತ ರೂಪದಲ್ಲಿ ಸ್ಪಷ್ಟಪಡಿಸಿದೆ. ಇದಕ್ಕಾಗಿ ಸರ್ಕಾರವು ಪ್ರತ್ಯೇಕವಾಗಿ 8,754 ಕೋಟಿ ರೂ ವ್ಯಯಿಸಬೇಕಾಗುತ್ತದೆ. ಗೃಹ ಸಚಿವರು

ಪೌರತ್ವ ತಿದ್ದುಪಡಿ ಕಾಯ್ದೆ 2019 ಹಾಗೂ ಎನ್‌ಆರ್‌ಸಿ, ಎನ್‌ಪಿಆರ್ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ದೆಹಲಿಯ ಶಾಹಿನ್ ಭಾಗ್‌ನಲ್ಲಿ ಮಹಿಳೆಯರ ನೇತೃತ್ವದಲ್ಲಿ ಸತ್ಯಾಗ್ರಹ ನಡೆಯಿತ್ತಿದೆ. ಜಾಮಿಯಾ ಮಿಲಿಯಾ ಮತ್ತು ಶಾಹಿನ್ ಭಾಗ್ನಲ್ಲಿ ಗುಂಡಿನ ಸದ್ದೂ ಕೇಳಿಸಿವೆ. ಸಂಸತ್ ಅಧಿವೇಶನದಲ್ಲೂ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳು ಸರಕಾರವನ್ನು ತರಾಟೆಗೆ ತೆಗೆದುಕೊಂಡಿವೆ.

ನಿಜವಾಗಿಯೂ ತನ್ನ ಮನಸ್ಸನ್ನು ಬದಲಿಸಿದ್ದಾರೆಯೇ, ಅಥವಾ ಎನ್‌ಆರ್‌ಸಿ ಮತ್ತು ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ದೊಡ್ಡ ಪ್ರಮಾಣದ ಪ್ರತಿಭಟನೆಯಿಂದಾದ ಹಿನ್ನಡೆಯೇ ? ಒಂದು ವೇಳೆ ನಿಜವಾಗಿಯೂ ಎನ್‌ಆರ್‌ಸಿಯನ್ನು ಜಾರಿಗೆ ತರುವ ಕುರಿತು ಚರ್ಚೆ ನಡೆಯದೇ ಇದ್ದಲ್ಲಿ, ಅಮಿತ್‌ ಶಾ ಸಂಸತ್ತಿನಲ್ಲಿ ಸುಳ್ಳು ಹೇಳಿದರೇ? ಎನ್ನುವುದು ಇದೀಗ ಎದ್ದಿರುವ ಪ್ರಶ್ನೆಯಾಗಿದೆ.

RS 500
RS 1500

SCAN HERE

Pratidhvani Youtube

«
Prev
1
/
3821
Next
»
loading
play
PadmaAwards2023| ಕರ್ನಾಟಕದ ಮಾಜಿ ಮುಖ್ಯಮಂತ್ರಿ SM ಕೃಷ್ಣ ಅವರಿಗೆ, ಪದ್ಮ ಪ್ರಶಸ್ತಿ ಪ್ರಧಾನ ಮಾಡಿದ ರಾಷ್ಟ್ರಪತಿ .
play
ಕೇಂದ್ರ ಸರ್ಕಾರದ ವಿರುದ್ಧ ಮಾತನಾಡಿರುವ ಮೋಹನ್ ಭಾಗವತ್‌ರನ್ನು ದೇಶದ್ರೋಹಿ ಎನ್ನಲು ಧೈರ್ಯವಿದೆಯೇ? ಹನುಮೇಗೌಡ ಸವಾಲು
«
Prev
1
/
3821
Next
»
loading

don't miss it !

ಇನ್ನೂ ಕ್ಷೇತ್ರದ ಗುಟ್ಟು ಬಿಟ್ಟುಕೊಡದ ಮಾಜಿ ಸಿಎಂ ಸಿದ್ದರಾಮಯ್ಯ..! : Siddaramaiah Still Not Giving Up The Secret Of The Constituency
Top Story

ಇನ್ನೂ ಕ್ಷೇತ್ರದ ಗುಟ್ಟು ಬಿಟ್ಟುಕೊಡದ ಮಾಜಿ ಸಿಎಂ ಸಿದ್ದರಾಮಯ್ಯ..! : Siddaramaiah Still Not Giving Up The Secret Of The Constituency

by ಪ್ರತಿಧ್ವನಿ
March 21, 2023
AARADHYA | ಪೆಂಟಗನ್ ಸಿನಿಮಾದ ಪುಟ್ಟ ಪ್ರತಿಭೆಯ ಸಿಹಿ ಮಾತು.. #PRATIDHVANI
ಇದೀಗ

AARADHYA | ಪೆಂಟಗನ್ ಸಿನಿಮಾದ ಪುಟ್ಟ ಪ್ರತಿಭೆಯ ಸಿಹಿ ಮಾತು.. #PRATIDHVANI

by ಪ್ರತಿಧ್ವನಿ
March 23, 2023
ಆಟೋ ಬಂದ್ : ಅನಧೀಕೃತ ಬೈಕ್ ಟ್ಯಾಕ್ಸಿ ಸೇವೆ ನಿಲ್ಲಿಸುವಂತೆ ಒತ್ತಾಯ #PRATIDHVANI
ಇದೀಗ

ಆಟೋ ಬಂದ್ : ಅನಧೀಕೃತ ಬೈಕ್ ಟ್ಯಾಕ್ಸಿ ಸೇವೆ ನಿಲ್ಲಿಸುವಂತೆ ಒತ್ತಾಯ #PRATIDHVANI

by ಪ್ರತಿಧ್ವನಿ
March 20, 2023
HD KUMARASWAMY | ಸಿದ್ದರಾಮಯ್ಯ ಅವರ ಶಕ್ತಿ ಕುಂದಿದೆ ಎಂಬುದಕ್ಕೆ ಅವರು ಕ್ಷೇತ್ರ ಹುಟುಕಾಟವೆ ಸಾಕ್ಷಿ..!
ಇದೀಗ

HD KUMARASWAMY | ಸಿದ್ದರಾಮಯ್ಯ ಅವರ ಶಕ್ತಿ ಕುಂದಿದೆ ಎಂಬುದಕ್ಕೆ ಅವರು ಕ್ಷೇತ್ರ ಹುಟುಕಾಟವೆ ಸಾಕ್ಷಿ..!

by ಪ್ರತಿಧ್ವನಿ
March 18, 2023
ಬಿಜೆಪಿಗೆ ಬಿಜೆಪಿಯೇ ಎದುರಾಳಿ..! ‘ನಾವಿಕನಿಲ್ಲದ ಹಡಗು’ ಭಾಗ – 02
Top Story

ಬಿಜೆಪಿಗೆ ಬಿಜೆಪಿಯೇ ಎದುರಾಳಿ..! ‘ನಾವಿಕನಿಲ್ಲದ ಹಡಗು’ ಭಾಗ – 02

by ಕೃಷ್ಣ ಮಣಿ
March 24, 2023
Next Post
ಪ್ರಧಾನಿ ಮೋದಿಗೆ ಮತ್ತೆ ಕಂಟಕವಾಗಲಿದೆಯೇ ಗೋದ್ರಾ ವಿಚಾರಣೆ

ಪ್ರಧಾನಿ ಮೋದಿಗೆ ಮತ್ತೆ ಕಂಟಕವಾಗಲಿದೆಯೇ ಗೋದ್ರಾ ವಿಚಾರಣೆ

ದೆಹಲಿಯಲ್ಲಿ ಬಿಜೆಪಿಗಿಲ್ಲ ಆಧಿಕಾರ? ಗುಂಡು ಹಾರಿಸಿದ್ದು ಎಎಪಿ ಬೆಂಬಲಿಗನೇ? 

ದೆಹಲಿಯಲ್ಲಿ ಬಿಜೆಪಿಗಿಲ್ಲ ಆಧಿಕಾರ? ಗುಂಡು ಹಾರಿಸಿದ್ದು ಎಎಪಿ ಬೆಂಬಲಿಗನೇ? 

ಸೋಶಿಯಲ್ ಮೀಡಿಯಾ ಮತ್ತು ನಾವು!

ಸೋಶಿಯಲ್ ಮೀಡಿಯಾ ಮತ್ತು ನಾವು!

  • About Us
  • Privacy Policy
  • Terms & Conditions

© 2021 Pratidhvani – Copy Rights Reserved by Pratidhvani News.

No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಇತರೆ
    • ಸರ್ಕಾರಿ ಗೆಜೆಟ್
    • ಶೋಧ
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ

© 2021 Pratidhvani – Copy Rights Reserved by Pratidhvani News.

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

Add New Playlist