ಎನ್‌ಆರ್‌ಸಿ ಜಾರಿಯ ಕುರಿತಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸತ್ ಅಧಿವೇಶನದ ಸಂದರ್ಭದಲ್ಲಿ ಎನ್‌ಆರ್‌ಸಿ ದೇಶದಾದ್ಯಂತ ಜಾರಿಗೊಳಿಸುತ್ತೇವೆ ಎಂದು ಖಡಾಖಂಡಿತವಾಗಿ ಹೇಳಿದ್ದರು. ಆದರೆ ಪ್ರಧಾನಿ ನರೇಂದ್ರ ಮೋದಿ ಸಮಾವೇಶವೊಂದರಲ್ಲಿ ಮಾತನಾಡುತ್ತಾ ಇದನ್ನು ನಿರಾಕರಿಸಿದ್ದರು. ಇದರಿಂದಾಗಿ ಎನ್‌ಆರ್‌ಸಿ ಜಾರಿ ಮಾಡುವ ಕುರಿತು ಬಿಜೆಪಿಯಲ್ಲೇ ಗೊಂದಲ ಮೂಡಿದೆಯೇ ಎಂದ ಪ್ರಶ್ನೆ ಎಲ್ಲೆಡೆಯಿಂದ ಕೇಳಿ ಬಂದಿತ್ತು. ಹಾಗೂ ಈ ರೀತಿಯ ಹೇಳಿಕೆಗಳಿಂದ ಭಾರತೀಯರಲ್ಲಿ ಮತ್ತಷ್ಟು ಗೊಂದಲ ಮನೆ ಮಾಡಿತ್ತು.
ಇಂದು ಸಂಸತ್ತಿನಲ್ಲಿ ರಾಷ್ಟ್ರೀಯ ಪೌರತ್ವ ನೋಂದಣಿ(ಎನ್‌ಆರ್‌ಸಿ) ಕುರಿತಾದ ಪ್ರಶ್ನೆಗೆ ಲಿಖಿತವಾಗಿ ಉತ್ತರ ನೀಡಿರುವ ಕೇಂದ್ರ ಸಚಿವಾಲಯ ರಾಷ್ಟ್ರಮಟ್ಟದಲ್ಲಿ ಎನ್‌ಆರ್‌ಸಿಯನ್ನು ಜಾರಿಗೆ ತರುವ ನಿಟ್ಟಿನಲ್ಲಿ ಕೇಂದ್ರ ಸರಕಾರ ಇದುವರೆಗೂ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಸಂಸತ್‌ಗೆ ಸ್ಪಷ್ಟಪಡಿಸಿದೆ. ಸಿಎಎ ಜೊತೆಗೆ ಎನ್‌ಆರ್‌ಸಿಯನ್ನು ದೇಶದಾದ್ಯಂತ ಜಾರಿಗೆ ತರಲಾಗುವುದು ಎಂಬ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಕೇಂದ್ರ ಸರಕಾರದ ಎನ್‌ಆರ್‌ಸಿ ಜಾರಿ ಇಲ್ಲ ಎಂದಿದೆ. ಇದರ ಬೆನ್ನಲ್ಲೇ ಲೋಕಸಭೆಯಲ್ಲಿ ಎನ್‌ಆರ್‌ಸಿ ಜಾರಿಯ ಕುರಿತಾಗಿ ಕೇಳಿರುವ ಪ್ರಶ್ನೆಯೊಂದಕ್ಕೆ ಕೇಂದ್ರ ಗೃಹ ಇಲಾಖೆಯ ರಾಜ್ಯ ಸಚಿವ ನಿತ್ಯಾನಂದ ರೈ ಲಿಖಿತ ರೂಪದಲ್ಲಿ ಉತ್ತರಿಸಿ, ಎನ್‌ಆರ್‌ಸಿ ರಾಷ್ಟ್ರೀಯ ಮಟ್ಟದಲ್ಲಿ ಜಾರಿಗೆ ತರವ ನಿರ್ಧಾರವನ್ನು ಇದುವರೆಗೂ ಕೇಂದ್ರ ಸರಕಾರ ಮಾಡಿಲ್ಲ ಎಂದಿದ್ದಾರೆ.
ರಾಷ್ಟ್ರೀಯ ಪೌರತ್ವ ನೋಂದಣಿ (ಎನ್‌ಆರ್‌ಸಿ) ಬಗ್ಗೆ ದೇಶದಲ್ಲಿ ದೊಡ್ಡ ಚರ್ಚೆಯೇ ನಡೆದಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷಗಳು ಎನ್‌ಆರ್‌ಸಿ ಪರಿಷ್ಕೃತ ಕರಡು ಪಟ್ಟಿಯಿಂದಾಗಿ ಅಸ್ಸಾಂ ಜನರ ಪ್ರಜಾಪ್ರಭುತ್ವ ಹಕ್ಕುಗಳು ಮತ್ತು ಮಾನವ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ ಎಂದು ಆರೋಪಿಸಿವೆ.
ಕೆಲ ದಿನಗಳಿಂದ ದೆಹಲಿಯಲ್ಲಿ ಸಿಎಎ, ಎನ್ಆರ್ ಸಿ ಕುರಿತಾಗಿ ಉದ್ವಿಗ್ನ ವಾತಾವರಣ ಇಡೀ ದೇಶದಲ್ಲಿ ಸೃಷ್ಟಿಯಾಗಿದೆ. ದೆಹಲಿ ವಿಧಾಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಈಗಾಗಲೇ ಎಲ್ಲಾ ಪಕ್ಷದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿಯಾಗಿದೆ. ಚುನಾವಣಾ ತಂತ್ರಗಾರಿಕೆಗೋ ಅಥವಾ ಪ್ರತಿಭಟನೆ ತೀವ್ರ ಸ್ವರೂಪ ಪಡೆಯುತ್ತಿರುವ ಹಿನ್ನೆಲೆ ಕಾರಣಕ್ಕೋ ಎನ್‌ಆರ್‌ಸಿಯ ಕುರಿತಾದ ಗೊಂದಲಗಳಿಗೆ ತೆರೆ ಎಳೆಯುವ ಪ್ರಯತ್ನವನ್ನು ಕೇಂದ್ರ ಮಾಡುತ್ತಿದೆ.
ಈ ಹಿಂದೆ ಗೃಹ ಸಚಿವ ಅಮಿತ್ ಶಾ ದೇಶಾದ್ಯಂತ ಸಿಎಎ ಜಾರಿಗೊಳಿಸಲಾಗಿದೆ, ಇದರ ಬೆನ್ನಲ್ಲೇ ಎನ್‌ಆರ್‌ಸಿ ಯನ್ನೂ ಜಾರಿಗೊಳಿಸಲಾಗುವುದು. ಅಸ್ಸಾಂನಲ್ಲಿ ಎನ್‌ಆರ್‌ಸಿ ಯನ್ನು ಜಾರಿಗೊಳಿಸಿದಂತೆ ದೇಶವ್ಯಾಪಿಗೊಳಿಸಲಾಗುವುದು. ಸಿಎಎ ನಂತರ ಎನ್‌ಆರ್‌ಸಿ ಜಾರಿ ಖಚಿತ’ ಎಂದು ಹೇಳಿಕೆ ನೀಡಿದ್ದರು. ಇದೀಗ ಗೃಹ ಸಚಿವಾಲಯ ಎನ್‌ಆರ್‌ಸಿ ಜಾರಿಗೆ ತರುವ ಯಾವುದೇ ಯೋಚನೆ ಇಲ್ಲ ಎಂದು ಲಿಖಿತ ರೂಪದಲ್ಲಿ ಸ್ಪಷ್ಟಪಡಿಸಿದೆ. ಇದಕ್ಕಾಗಿ ಸರ್ಕಾರವು ಪ್ರತ್ಯೇಕವಾಗಿ 8,754 ಕೋಟಿ ರೂ ವ್ಯಯಿಸಬೇಕಾಗುತ್ತದೆ. ಗೃಹ ಸಚಿವರು
ಪೌರತ್ವ ತಿದ್ದುಪಡಿ ಕಾಯ್ದೆ 2019 ಹಾಗೂ ಎನ್‌ಆರ್‌ಸಿ, ಎನ್‌ಪಿಆರ್ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ದೆಹಲಿಯ ಶಾಹಿನ್ ಭಾಗ್‌ನಲ್ಲಿ ಮಹಿಳೆಯರ ನೇತೃತ್ವದಲ್ಲಿ ಸತ್ಯಾಗ್ರಹ ನಡೆಯಿತ್ತಿದೆ. ಜಾಮಿಯಾ ಮಿಲಿಯಾ ಮತ್ತು ಶಾಹಿನ್ ಭಾಗ್ನಲ್ಲಿ ಗುಂಡಿನ ಸದ್ದೂ ಕೇಳಿಸಿವೆ. ಸಂಸತ್ ಅಧಿವೇಶನದಲ್ಲೂ ಕಾಂಗ್ರೆಸ್ ಹಾಗೂ ವಿರೋಧ ಪಕ್ಷಗಳು ಸರಕಾರವನ್ನು ತರಾಟೆಗೆ ತೆಗೆದುಕೊಂಡಿವೆ.
ನಿಜವಾಗಿಯೂ ತನ್ನ ಮನಸ್ಸನ್ನು ಬದಲಿಸಿದ್ದಾರೆಯೇ, ಅಥವಾ ಎನ್‌ಆರ್‌ಸಿ ಮತ್ತು ಪೌರತ್ವ (ತಿದ್ದುಪಡಿ) ಕಾಯ್ದೆಯ ವಿರುದ್ಧ ದೊಡ್ಡ ಪ್ರಮಾಣದ ಪ್ರತಿಭಟನೆಯಿಂದಾದ ಹಿನ್ನಡೆಯೇ ? ಒಂದು ವೇಳೆ ನಿಜವಾಗಿಯೂ ಎನ್‌ಆರ್‌ಸಿಯನ್ನು ಜಾರಿಗೆ ತರುವ ಕುರಿತು ಚರ್ಚೆ ನಡೆಯದೇ ಇದ್ದಲ್ಲಿ, ಅಮಿತ್ ಶಾ ಸಂಸತ್ತಿನಲ್ಲಿ ಸುಳ್ಳು ಹೇಳಿದರೇ? ಎನ್ನುವುದು ಇದೀಗ ಎದ್ದಿರುವ ಪ್ರಶ್ನೆಯಾಗಿದೆ.