ಪಠ್ಯ ಪುಸ್ತಕಗಳಲ್ಲಿನ ಅಸಂಖ್ಯಾತ ದೋಷ ಮತ್ತು ಅನ್ಯಾಯಗಳನ್ನು ಸರಿಪಡಿಸಲು ಸಾಧ್ಯವಾಗುವುದಿಲ್ಲ, ಆದ್ದರಿಂದ ಬರಗೂರು ರಾಮಚಂದ್ರಪ್ಪರವರ ನೇತೃತ್ವದ 27 ಸಮಿತಿಗಳು ಪರಿಷ್ಕರಿಸಿದ ಪಠ್ಯಪುಸ್ತಕಗಳನ್ನೇ ಈ ವರ್ಷವೂ ಮುಂದುವರೆಸಿ ಎಂದು ಸಿಎಂ ಬಸವರಾಜ್ ಬೊಮ್ಮಾಯಿಗೆ ಮಾಜಿ ಪ್ರಧಾನಿ ದೇವೇಗೌಡರು ಪತ್ರ ಬರೆದಿದ್ದಾರೆ.
ಅವರು ಬರೆದಿರುವವ ಅತ್ರದಲ್ಲಿ, ಪಠ್ಯ ಪುಸ್ತಕಗಳಲ್ಲಿನ ಅಸಂಖ್ಯಾತ ದೋಷ ಮತ್ತು ಅನ್ಯಾಯಗಳನ್ನು ಕೇವಲ ತಪ್ಪೋಲೆ ಅಥವಾ ಪ್ರತ್ಯೇಕ ಪುಟಗಳ ಮುದ್ರಣದಿಂದ ಸರಿಪಡಿಸಲು ಸಾಧ್ಯವಾಗುವುದಿಲ್ಲ. ಆದ್ದರಿಂದ ಪುನರ್ ಪರಿಷ್ಕರಣೆಯ ಪಠ್ಯಪುಸ್ತಕಗಳನ್ನು ವಾಪಸ್ ಪಡೆದು, ಹಿಂದೆ ಇದ್ದ ಬರಗೂರು ರಾಮಚಂದ್ರಪ್ಪರವರ ನೇತೃತ್ವದ 27 ಸಮಿತಿಗಳು ಪರಿಷ್ಕರಿಸಿದ ಪಠ್ಯಪುಸ್ತಕಗಳನ್ನೇ ಈ ವರ್ಷ ಮುಂದುವರೆಸುವುದು ಸೂಕ್ರವೆಂದು ನಾನು ಕೂಡ ಅಭಿಪ್ರಾಯ ಪಡುತ್ತೇನೆ ಎಂದು ಹೇಳಿದ್ದಾರೆ.
ಮುಂದುವರೆದು, ಈಗ ತಮಗೆ ಕಳುಹಿಸುತ್ತಿರುವ ವಿಶ್ವಮಾನವ ಕುವೆಂಪು ಹೋರಾಟ ಸಮಿತಿಯ ಹಕ್ಕೋತ್ತಾಯ ಪತ್ರದ ಅಂಶಗಳನ್ನು ನಾನು ಕೂಡ ಬೆಂಬಲಿಸುತ್ತಾ, ಈ ವಿಷಯವಾಘಿ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಆಶಿಸುತ್ತೇನೆ ಎಂದು ಹೇಳಿದ್ದಾರೆ.