ನವದೆಹಲಿ: ಮಹಿಳಾ ಮೀಸಲಾತಿ ಮಸೂದೆಯಲ್ಲಿ ಒಬಿಸಿ ಕೂಡ ಸೇರಿಸಬೇಕು ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ಹೇಳಿದ್ದಾರೆ. ಮಹಿಳಾ ಮೀಸಲಾತಿ ಮಸೂದೆ ಮೇಲಿನ ಚರ್ಚೆ ವೇಳೆ ಲೋಕಸಭೆಯಲ್ಲಿ ಬುಧವಾರ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಮುಖಾಮುಖಿ ನಡೆದಿದ್ದು, ಕಾಂಗ್ರೆಸ್‌ನ ಮಾಜಿ ಅಧ್ಯಕ್ಷೆ ಸೋನಿಯಾ ಗಾಂಧಿ ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿ ಮತ್ತು ಮಸೂದೆಯನ್ನು ತಕ್ಷಣ ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.
ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ರಾಜಕೀಯ ಕೋನಕ್ಕಾಗಿ ಹೊಸ ವಿಷಯಗಳನ್ನು ಹೇಳುತ್ತಿದ್ದಾರೆ ಮತ್ತು ಮಹಿಳಾ ಶಾಸಕರಿಗೆ ಮೀಸಲಾತಿಯಲ್ಲಿ ಓಬಿಸಿ ಕೋಟಾದ ಬಗ್ಗೆ ಎಂದಿಗೂ ಮಾತನಾಡಿಲ್ಲ ಎಂದು ಆರೋಪಿಸಿದರು. ಮಸೂದೆಯಲ್ಲಿ ವಿರೋಧ ಪಕ್ಷದ ಪರ ಮೊದಲಿಗರಾಗಿ ಹಿಂದಿಯಲ್ಲಿ ಸೋನಿಯಾ ಗಾಂಧಿ ಮಾತನಾಡಿದ್ದು, ಈ ವೇಳೆ ತಮ್ಮ ಪಕ್ಷವು ಮಸೂದೆಯನ್ನು ಬೆಂಬಲಿಸುತ್ತದೆ. ಆದರೆ ಮಹಿಳೆಯರಿಗೆ ಶೇ.33ರ ಕೋಟಾದೊಳಗೆ ಇತರ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ಸೇರಿಸಬೇಕು. ಇತರ ಹಿಂದುಳಿದ ವರ್ಗ/ಪರಿಶಿಷ್ಟ ಜಾತಿ (ಒಬಿಸಿ/ಎಸ್‌ಸಿ) ಸಮುದಾಯಗಳಿಗೆ ಸೇರಿದ ಮಹಿಳೆಯರ ಭಾಗವಹಿಸುವಿಕೆಯನ್ನು ಖಚಿತಪಡಿಸಿಕೊಳ್ಳಲು ಜಾತಿ ಗಣತಿಯನ್ನು ನಡೆಸಬೇಕು ಎಂದು ಒತ್ತಾಯಿಸಿದರು.