ಬೆಂಗಳೂರು: ಪ್ರಜ್ವಲ್ ರೇವಣ್ಣ (Prajwal video case) ಅಶ್ಲೀಲ ವಿಡಿಯೋ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ತಂದೆ ಹಾಗೂ ಮಗನ ಮೇಲೆ ಈಗಾಗಲೇ ದೂರು ದಾಖಲಾಗಿದ್ದು, ತನಿಖೆಗೆ ಹಾಜರಾಗುವಂತೆ ಸೂಚಿಸಲಾಗಿದೆ.

ಪ್ರಜ್ವಲ್ ತಂದೆ, ಜೆಡಿಎಸ್ ಶಾಸಕ ಹೆಚ್ಡಿ ರೇವಣ್ಣರನ್ನು (HD Revanna) ಕೂಡ ಪ್ರಕರಣದಲ್ಲಿ ಪ್ರಮುಖ ಆರೋಪಿಯನ್ನಾಗಿ ಹೆಸರಿಸಲಾಗಿದೆ. ಮಾಜಿ ಸಚಿವ ಹೆಚ್ಡಿ ರೇವಣ್ಣ ಅವರಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾಗಿದ್ದಳು ಎನ್ನಲಾದ ಕೆಆರ್ ನಗರದ ಸಂತ್ರಸ್ತೆ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣ (Bhavni Revanna) ಅವರ ಸಂಬಂಧಿಯೊಬ್ಬರನ್ನು ಈಗಾಗಲೇ ಎಸ್ ಐಟಿ ಅಧಿಕಾರಿಗಳು ಬಂಧಿಸಿದ್ದಾರೆ. ಇದು ಪ್ರಕರಣದ ಮೊದಲ ಬಂಧನವಾಗಿದೆ.

ಈ ಕುರಿತು ನಾಪತ್ತೆಯಾಗಿದ್ದ ಸಂತ್ರಸ್ತೆ ದೂರು ದಾಖಲಿಸಿದ್ದಾರೆ. ಕಿಡ್ನಾಪ್ ಆರೋಪದ ಮೇರೆಗೆ ರೇವಣ್ಣ ವಿರುದ್ಧ ಸೆಕ್ಷನ್ 364/A 365 ಹಾಗೂ 34 ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ರೇವಣ್ಣರನ್ನು ಆರೋಪಿ ಸಂಖ್ಯೆ 1 ಎಂದೂ ಸತೀಶ್ ಬಾಬು ಎಂಬವರನ್ನು ಆರೋಪಿ ಸಂಖ್ಯೆ 2 ಎಂದೂ ನಮೂದಿಸಲಾಗಿದೆ. ಎಸ್ಐಟಿ ತಂಡಗಳು ಗುರುವಾರ ತಡರಾತ್ರಿಯಿಂದ ಮೈಸೂರು, ಹಾಸನ, ಮಂಡ್ಯ ಜಿಲ್ಲೆಗಳು ಮತ್ತು ಬೆಂಗಳೂರು ನಗರ ಸೇರಿದಂತೆ ಹಲವೆಡೆ ಪರಿಶೀಲನೆ ನಡೆಸಿದೆ.

ಅಲ್ಲದೇ, ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣ ಅವರಿಗೂ ಹಾಜರಾಗುವಂತೆ ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಹೊಳೆನರಸೀಪುರದಲ್ಲಿನ ರೇವಣ್ಣ ಅವರ ಮನೆಗೆ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಮನೆಯಲ್ಲಿದ್ದ ಭವಾನಿ ರೇವಣ್ಣ ಜೊತೆ ಚರ್ಚೆ ನಡೆಸಿದ್ದಾರೆ.