ಮುರುಘಾ ಮಠದ ವಸತಿ ನಿಲಯದಲ್ಲಿ ವಾಸವಿದ್ದ ಬಾಲಕಿಯರಿಗೆ ಲೈಂಗಿಕ ಕಿರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ತಾಯಿಗೆ ಸರ್ಕಾರಿ ಅಧಿಕಾರಿಗಳು ಕೆಲಸದ ಆಮಿಷ ಒಡ್ಡಿದ ಕುರಿತಾಗಿ ತನಿಖೆಗೆ ಆದೇಶಿಸಲಾಗಿದೆ.
ಈ ಕುರಿತು ಒಡನಾಡಿ ಸಂಸ್ಥೆಯ ಮುಖ್ಯಸ್ಥರು ಕರ್ತವ್ಯ ಲೋಪ ಕುರಿತು ಸಮಗ್ರ ತನಿಖೆ ನಡೆಸುವಂತೆ ಆಗ್ರಹಿಸಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧ್ಯಕ್ಷರಿಗೆ ಪತ್ರ ಬರೆದಿದ್ದರು. ಅದರಂತೆ ಈಗ ತನಿಖೆಗೆ ಆದೇಶಿಸಲಾಗಿದೆ ಎಂದು ತಿಳಿದು ಬಂದಿದೆ.
ಲೋಪದ ಕುರಿತು ಕೂಲಂಕುಷ ವರದಿ ನೀಡುವಂತೆ ಆದೇಶಿಸಲಾಗಿದ್ದು ಆದಷ್ಟು ಬೇಗ ವರದಿ ನೀಡುವಂತೆ ಅಧಿಕಾರಿಗಳು ತನಿಖೆಗೆ ಸೂಚಿಸಿದ್ದಾರೆ ಎಂದು ವರದಿಯಾಗಿದೆ.
ಅಪ್ರಾಪ್ತ ಬಾಲಕಿಯರ ಮೇಲಿನ ಅತ್ಯಾಚಾರದ ಪ್ರಕರಣಗಳು, ರಾಣಿ ಎಂಬ ಮಗುವಿನ ಅನುಮಾನಸ್ಪದ ಸಾವು, ಮಡಿಲು ಕೇಂದ್ರದಿಂದ ಅಕ್ರಮವಾಗಿ ಮಕ್ಕಳ ದತ್ತು ಪ್ರಕ್ರಿಯೆ, ಹಲವು ವಿಷಯಗಳಲ್ಲಿ ಲೋಪ ಎಸಗಿರುವ ಬಗ್ಗೆ ಪತ್ರ ಬರೆದಿರುವ ಒಡನಾಡಿ ಸಂಸ್ಥೆ.