ಬೆಂಗಳೂರು : ಒಡಿಶಾದಲ್ಲಿ ನಡೆದ ಭೀಕರ ರೈಲು ದುರಂತದಲ್ಲಿ ಬೆಂಗಳೂರು ಹೋಟೆಲ್ ಕಾರ್ಮಿಕ ಸಾವನ್ನಪ್ಪಿದ್ದಾರೆ. ಅಲ್ಲದೇ ಯಶವಂತಪುರ – ಹೌರಾ ಎಕ್ಸ್ಪ್ರೆಸ್ನಲ್ಲಿದ್ದ ಓರ್ವ ಪ್ರಯಾಣಿಕನ ಸ್ಥಿತಿ ಗಂಭೀರವಾಗಿದೆ ಹಾಗೂ ಇನ್ನುಳಿದ 36 ಪ್ರಯಾಣಿಕರು ಗಾಯಗೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಪಶ್ಚಿಮ ಬಂಗಾಳದ ಜಲ್ಪೈಗುರಿ ಜಿಲ್ಲೆಯ ನಿವಾಸಿ ಸಾಗರ್ ಖೇರಿಯಾ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.
30 ವರ್ಷದ ಖೇರಿಯಾ ಅವರು ಬೆಂಗಳೂರಿನ ಹೋಟೆಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದು, ಮನೆಗೆ ಹಿಂದಿರುಗುತ್ತಿದ್ದಾಗ ದುರಂತದಲ್ಲಿ ಸಾವನ್ನಪ್ಪಿದ್ದಾರೆ.