ಬಿಜೆಪಿ ಹಾಗೂ ಜೆಡಿಎಸ್ ಸೇರಿ ಓರ್ವ ಅಭ್ಯರ್ಥಿ ಕಣಕ್ಕಿಳಿಸಿರುವ ಬಗ್ಗೆ ಡಿಸಿಎಂ ಡಿಕೆ ಶಿವಕುಮಾರ್ ರನ್ನ ಕೇಳಿದಾಗ, ನಾವು ದೇವೇಗೌಡರ ಕುಟುಂಬದ ವಿರುದ್ಧ ಅನೇಕ ಚುನಾವಣೆಗಳನ್ನು ಮಾಡಿದ್ದೇವೆ. ದೇವೇಗೌಡರ ವಿರುದ್ಧ ಓರ್ವ ಮಹಿಳೆಯನ್ನು ನಿಲ್ಲಿಸಿ ಗೆಲ್ಲಿಸಿದ್ದೆವೆ. ನಾನು ಕುಮಾರಸ್ವಾಮಿ ಅವರ ವಿರುದ್ಧ ಸ್ಪರ್ಧಿಸಿ ಗೆದ್ದಿದ್ದೇನೆ. 2013ರ ಉಪಚುನಾವಣೆಯಲ್ಲಿ ಇದೇ ರೀತಿ ಜೆಡಿಎಸ್ ಹಾಗೂ ಬಿಜೆಪಿ ಸೇರಿ ಅನಿತಾ ಕುಮಾರಸ್ವಾಮಿ ಅವರನ್ನು ಕಣಕ್ಕಿಳಿಸಿದಾಗ ಸುರೇಶ್ ಅವರು ಗೆದ್ದಿದ್ದರು ಎಂದು ಹೇಳಿದ್ದಾರೆ.
ಈ ಹಿಂದಿನ ಸನ್ನಿವೇಶ ನೆನಪಿಸಿಕೊಂಡ ಅವರು , ಆಗ ಸಿದ್ದರಾಮಯ್ಯ ಅವರ ಸರ್ಕಾರ ಇದ್ದರೂ ನಾನು ಸಚಿವನಾಗಿರಲಿಲ್ಲ. ಆಗ ನನಗೆ ಈ ಚುನಾವಣೆಗಳು ದೊಡ್ಡ ಸವಾಲಾಗಿತ್ತು. ಆಗಲೂ ನಾವು ಸಹೋದರಿ ಅನಿತಾ ಕುಮಾರಸ್ವಾಮಿ ಅವರನ್ನು ಬರೋಬ್ಬರಿ 1.30 ಲಕ್ಷ ಮತಗಳಿಂದ ಮಣಿಸಿದೆವು. ನಂತರ ಜನ ಸುರೇಶ್ ಅವರನ್ನು ಸತತವಾಗಿ ಗೆಲ್ಲಿಸಿಕೊಂಡು ಬಂದಿದ್ದಾರೆ ಹಾಗಾಗಿ ನಮಗೆ ಆತ್ಮ ವಿಶ್ವಾಸವಿದೆ ಎಂದು ತಿಳಿಸಿದರು.