ರಾಜ್ಯದಲ್ಲಿ ವಕ್ಫ್ ಕಿಚ್ಚು (Waqf board) ಹೆಚ್ಚಾಗಿದ್ದು, ಬಹಳಷ್ಟು ಜಿಲ್ಲೆಗಳಲ್ಲಿ ರೈತರ ಜಮೀನು ವಕ್ಫ್ ಆಸ್ತಿ ಎಂದು ನೀಡಿದ್ದ ನೋಟಿಸ್ ನೀಡಿ ಸರ್ಕಾರ ರೈತರ ಕೆಂಗಣ್ಣಿಗೆ ಗುರಿಯಾಗಿತ್ತು. ಈ ಹಿನ್ನಲೆ, ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದ್ದು ರೈತರಿಗೆ ನೀಡಿರುವ ನೋಟಿಸ್‌ಗಳನ್ನು ತಕ್ಷಣವೇ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ಕೊಟ್ಟಿದ್ದಾರೆ.
ಈಗಾಗಲೇ ನೀಡಿರುವ ನೋಟಿಸ್ ಗಳನ್ನು ಹಿಂಪಡೆಯಬೇಕು ಮತ್ತು ಇನ್ಮುಂದೆ ಯಾವುದೇ ನೋಟೀಸ್ ನೀಡಬಾರದು. ಒಂದುವೇಳೆ ಸಿಎಂ ನಿರ್ದೇಶನದ ನಂತರವೂ ಅಧಿಕಾರಿಗಳು ರೈತರಿಗೆ ನೋಟಿಸ್ ನೀಡಿದಲ್ಲಿ, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಲಾಗಿದೆ.
ಹತ್ತಾರು ವರ್ಷಗಳಿಂದ ರೈತರ ಹೆಸರಿನಲ್ಲಿ ಇರುವ ಭೂಮಿಗಳ ಪಹಣಿ ಇದ್ದಕ್ಕಿದ್ದಂತೆ ಬದಲಾವಣೆಯಾಗಿದ್ದು, ರೈತರಿಗೆ ನೋಟೀಸ್ ನೀಡಲಾಗಿತ್ತು. ಈ ನೋಟಿಸ್‌ಗಳನ್ನು ತಕ್ಷಣ ಹಿಂಪಡೆಯಬೇಕು ಎಂದು ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ರಾಜ್ಯದಲ್ಲಿನ ಉಪಚುನಾವಣೆಯ ಬೆನ್ನಲ್ಲೇ, ವಕ್ಫ್ ಬೋರ್ಡ್ ಭೂಕಬಳಿಕೆ ವಿಚಾರ ಬಿಜೆಪಿ ಪಾಲಿಗೆ ಅಸ್ತ್ರವಾಗಿ ಪರಿಣಮಿಸಿತ್ತು. ಹೀಗಾಗಿ ಇದ್ರಿಂದ ಡ್ಯಾಮೇಜ್ ಆಗಬುದಾದ ಹಿನ್ನೆಲೆ ಅಲರ್ಟ್ ಆದ ಸರ್ಕಾರ ಈ ಕ್ರಮ ಕೈಗೊಂಡಿದೆ.