ಸರ್ಕಾರಿ ಅಧಿಕಾರಿಯೊಬ್ಬರು ಡ್ರಿಂಕ್ ಅಂಡ್ ಡ್ರೈವ್ ತಪಾಸಣೆ ನಡೆಸುವ ವೇಳೆ, ಅಯ್ಯಪ್ಪ ಸ್ವಾಮಿಯ ಮಾಲೆ ಧರಿಸಿದ್ದ ಚಾಲಕನಿಗೆ ಡ್ರಂಕ್ ಅಂಡ್ ಡ್ರೈವ್ ಪರೀಕ್ಷೆ ಮಾಡಿದ್ದಾರೆ. ಇದು ಭಕ್ತಾದಿಗಳ ಅಸಮಾಧಾನಕ್ಕೆ ಕಾರಣವಾಗಿದೆ.
ಅಯ್ಯಪ್ಪ ಸ್ವಾಮಿಯ ಮಾಲೆ ಹಾಕಿದ ಸಂದರ್ಭದಲ್ಲಿ ಭಕ್ತಾದಿಗಳು ಕಠಿಣ ವ್ರತ ಆಚರಿಸುತ್ತಾರೆ. ಆದ್ರೆ ಮಾಲೆ ಹಾಕಿದ ವ್ಯಕ್ತಿಯ ಮೇಲೆ ಅನುಮಾನ ಪಟ್ಟು ಡ್ರಂಕ್ ಅಂಡ್ ಡ್ರೈವ್ ಚೆಕ್ ಮಾಡಿರುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತೆಲಂಗಾಣದಲ್ಲಿ ಈ ಘಟನೆ ನಡೆದಿದ್ದು, ಆರ್ಟಿಸಿ ಅಧಿಕಾರಿ ನಡೆ ವಿರುದ್ಧ ಅಯ್ಯಪ್ಪ ಸ್ವಾಮಿ ಭಕ್ತಿ ಮಂಡಳಿ ಆಕ್ರೋಶ ವ್ಯಕ್ತ ಪಡಿಸಿದ್ದು, ಆರ್ಟಿಸಿ ಡಿಪೋ ಎದುರು ಧರಣಿ ಮಾಡಿ ಆಕ್ರೋಶ ಹೊರಹಾಕಿದ್ದಾರೆ.
ಈ ಪ್ರತಿಭಟನೆ ಬಳಿಕ ಎಚ್ಚೆತ್ತ ಬಳಿಕ ಆರ್ಟಿಸಿ ಡಿಪೋ ಮ್ಯಾನೇಜರ್ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಪ್ರತಿಭಟನಾಕಾರರಲ್ಲಿ ಕ್ಷಮೆ ಕೋರಿದ್ದಾರೆ.