ಬಿಗ್ ಬಾಸ್ ಕನ್ನಡ ಖ್ಯಾತಿಯ ಒಳ್ಳೆ ಹುಡ್ಗ ಪ್ರಥಮ್ ವೈವಾಹಿಕ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ ,ಸೋಶಿಯಲ್ ಮೀಡಿಯಾದಲ್ಲಿ ತಾವು ನಿಶ್ಚಿತಾರ್ಥ ಮಾಡಿಕೊಂಡಿರುವ ಬಗ್ಗೆ ಮಾಹಿತಿಯನ್ನು ಪ್ರಥಮ್ ಹಂಚಿಕೊಂಡಿದ್ದಾರೆ. ಮಂಡ್ಯ ಮೂಲದ ಭಾನುಶ್ರೀ ಎಂಬವರ ಜೊತೆಯಲ್ಲಿ ಪ್ರಥಮ್ ಎಂಗೇಜ್ ಆಗಿದ್ದಾರೆ .
ಒಂದು ಸುಂದರ ಕ್ಷಣ, ಇಂದು ನನ್ನ ಎಂಗೇಜ್ಮೆಂಟ್ ಆಯ್ತು, ಯಾವ ಆಡಂಬರ, ಸಂಭ್ರಮ, ತೋರ್ಪಡಿಕೆ ಇಲ್ಲದೇ ಸರಳವಾಗಿ ಕುಟುಂಬದವರು ಮೆಚ್ಚಿದವರ ಜೊತೆಯಾದೆ ಎಂದು ಹೇಳುವ ಮೂಲಕ ಇದು ಪಕ್ಕಾ ಅರೆಂಜ್ ಮ್ಯಾರೇಜ್ ಅನ್ನೋದನ್ನು ಬಹಿರಂಗ ಪಡಿಸಿದ್ದಾರೆ .
ಮಂಡ್ಯದ ಹಳ್ಳಿಯೊಂದರಲ್ಲಿ ನಿನ್ನೆ ಸಂಜೆ ಕುಟುಂಬಸ್ಥರ ಸಮ್ಮುಖದಲ್ಲಿ ಪ್ರಥಮ್ ನಿಶ್ಚಿತಾರ್ಥ ಕಾರ್ಯಕ್ರಮ ನೆರವೇರಿದೆ . ಮದುವೆ ದಿನಾಂಕದ ಬಗ್ಗೆ ಇದುವರೆಗೂ ಯಾವುದೇ ಮಾಹಿತಿ ಹೊರಬಿದ್ದಿಲ್ಲ.
