ಕೊಲೆ ಪ್ರಕರಣ- ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಬಂಧನ

ಕುಸ್ತಿಪಟು ಹತ್ಯೆಯಲ್ಲಿ ಭಾಗಿಯಾದ ಆರೋಪದ ಮೇಲೆ ಎರಡು ಬಾರಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಅವರನ್ನು ಬಂಧಿಸಲಾಗಿದೆ.

ಮೇ 4 ರಂದು ದೆಹಲಿಯ ಛತ್ರಸಾಲ್ ಸ್ಟೇಡಿಯಂನಲ್ಲಿ ಕುಸ್ತಿಪಟುಗಳ ಮಧ್ಯೆ ಗಲಾಟೆ ನಡೆದಿತ್ತು. ಗಲಾಟೆಯಲ್ಲಿ 23 ವರ್ಷದ ಸಾಗರ್ ರಾಣಾ ಎಂಬ ಕುಸ್ತಿಪಟು ಸಾವನ್ನಪ್ಪಿದ್ದರು, ಹಾಗು ಆತನ ಇಬ್ಬರು ಸ್ನೇಹಿತರು ಕೂಡ ಗಂಭೀರವಾಗಿ ಗಾಯಗೊಂಡಿದ್ದರು.

ಮೇ 18 ರಂದು ಸುಶೀಲ್ ಕುಮಾರ್ ಬಂಧನದಿಂದ ರಕ್ಷಣೆ ಕೋರಿ ನ್ಯಾಯಾಲಯದ ಮೊರೆಹೋಗಿದ್ದರು. ಆದರೆ ದೆಹಲಿ ನ್ಯಾಯಾಲಯ ಇವರ ಜಾಮೀನು ಅರ್ಜಿಯನ್ನು ನಿರಾಕರಿಸಿತ್ತು. ನಂತರ ಕೆಲವು ದಿನಗಳಿಂದ ಸುಶೀಲ್ ಕುಮಾರ್ ತಲೆಮರೆಸಿಕೊಂಡಿದ್ದರು.

ಕೆಲವು ದಿನಗಳ ಹಿಂದೆ ಸುಶೀಲ್ ಕುಮಾರ್‌ ಬಗ್ಗೆ ಮಾಹಿತಿ ನೀಡಿದವರಿಗೆ ಪೊಲೀಸರು ನಗದು ಬಹುಮಾನವನ್ನು ಘೋಷಿಸಿದ್ದರು. ಸುಶೀಲ್ ಕುಮಾರ್ ಬಗ್ಗೆ ಸುಳಿಯು ಕೊಟ್ಟವರಿಗೆ 1 ಲಕ್ಷ ರೂ. ಮತ್ತು 50,000 ರೂ, ಆತನ ಸಹಚರ ಅಜಯ್ ಕುಮಾರ್ ಅವರ ಬಗ್ಗೆ ಸುಳಿವು ನೀಡಿದವರಿಗೆ ಕೊಡುವುದಾಗಿ ಘೋಷಿಸಲಾಗಿತ್ತು.

ಇದೀಗ ಇನ್ಸ್ಪೆಕ್ಟರ್ ಶಿವಕುಮಾರ್, ಕರಂಬೀರ್ ಮತ್ತು ಎಸಿಪಿ ಅತ್ತಾರ್ ಸಿಂಗ್ ನೇತೃತ್ವದ ವಿಶೇಷ ತಂಡ ದೆಹಲಿಯ ಮುಂಡ್ಕಾ ಪ್ರದೇಶದಲ್ಲಿ ಸುಶೀಲ್ ಕುಮಾರ್ ಮತ್ತು ಅಜಯ್ ಅವರನ್ನು ಬಂಧಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ ಪಿ ಎಸ್ ಕುಶ್ವಾಃ ತಿಳಿಸಿದ್ದಾರೆ.

ಏನಿದು ಪ್ರಕರಣ

ಕುಸ್ತಿಪಟು ಸಾಗರ್ ರಾಣಾ ತನ್ನ ಸ್ನೇಹಿತರೊಂದಿಗೆ ಛತ್ರಸಾಲ್ ಕ್ರೀಡಾಂಗಣದ ಹತ್ತಿರದ ಮಾಡೆಲ್ ಟೌನ್ ಪ್ರದೇಶದ ಮನೆಯಲ್ಲಿ ವಾಸಿಸುತ್ತಿದ್ದರು. ಸ್ಥಳದ ವಿಚಾರವಾಗಿ ಮೇ 4 ರಂದು ಸಾಗರ್ ರಾಣಾ ಮತ್ತು ಸುನೀಲ್ ಕುಮಾರ್ ನಡುವೆ ಮಾತಿನ ಚಕಮಕಿ ನಡೆದು ಕೊನೆಗೆ ಎರಡು ಗುಂಪುಗಳ ನಡುವಿನ ಜನಗಳ ಗಂಭೀರ ಸ್ವರೂಪ ಪಡೆದು ಗುಂಡಿನ ಚಕಮಕಿಗೆ ಕಾರಣವಾಗಿತ್ತು. ಇದರಲ್ಲಿ ಗಾಯಗೊಂಡ ಕುಸ್ತಿಪಟುಗಳಲ್ಲಿ, ಸಾಗರ್ ರಾಣಾ ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದರು.

Related posts

Latest posts

ಬಡವರಿಗೆ ನೆರವಾಗುವುದನ್ನು ತಡೆಯುವ ಪೊಲೀಸ್ ಅಧಿಕಾರಿಗಳಿಗೆ ಬಿಜೆಪಿ ಬ್ಯಾಡ್ಜ್, ಬಾವುಟ ಕೊಡಿ; ಸರಕಾರದ ವಿರುದ್ಧ ಡಿಕೆಶಿ ಗರಂ

'ಬಿಜೆಪಿ ನಾಯಕರು ಜನರ ತೆರಿಗೆ ಹಣದಲ್ಲಿ ನೀಡುವ ಸರ್ಕಾರಿ ಆಹಾರ ಕಿಟ್, ಔಷಧಿ ಮೇಲೆ ತಮ್ಮ ಹಾಗೂ ಪ್ರಧಾನಿ ಫೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದರೆ, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ತಮ್ಮ ಶ್ರಮಪಟ್ಟು ದುಡಿದ...

ಸುರಕ್ಷಿತವಾಗಿ ಲಾಕ್‌ಡೌನ್ ತೆರವುಗೊಳಿಸಲು ಸರ್ಕಾರಕ್ಕೆ 10 ಶಿಫಾರಸು ನೀಡಿದ ತಜ್ಞರ ತಂಡ SAGE

ಕರ್ನಾಟಕದಲ್ಲಿ ಕರೋನಾ ನಿಯಂತ್ರಿಸಲು ಹೇರಿರುವ ಲಾಕ್‌ಡೌನ್ ಅನ್ನು ಹೇಗೆ ಸುರಕ್ಷಿತವಾಗಿ ಹಾಗೂ ಸೂಕ್ತವಾಗಿ ತೆರವುಗೊಳಿಸಬಹುದೆಂದು ತಜ್ಞರ ತಂಡವು ಸರ್ಕಾರಕ್ಕೆ ಹತ್ತು ಶಿಫಾರಸುಗಳನ್ನು ನೀಡಿದೆ. ಕೋವಿಡ್ ವಿಪತ್ತಿನ ವಿರುದ್ಧದ ಹೋರಾಟಕ್ಕೆ ರೂಪುಗೊಂಡ SAGE (ಸಮಾಜಮುಖಿ ಕಾರ್ಯಪ್ರವೃತ್ತ...

ಬೆಲೆ ಏರಿಕೆ ಮಾಡಿ ಸರ್ಕಾರ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ- ಡಿ.ಕೆ ಶಿವಕುಮಾರ್

 ಇಂಧನ ಬೆಲೆ ಏರಿಕೆ ಹಿನ್ನೆಲೆ,  ರಾಜ್ಯಾದ್ಯಂತ ಜೂನ್‌ 11 ರಿಂದ 15 ರವರೆಗೆ '100 ನಾಟ್ ಔಟ್' ಹೆಸರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಂದೋಲನ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಇಂದು 900ಕ್ಕೂ ಹೆಚ್ಚು ಜಿ.ಪಂ, ಹೋಬಳಿ...