ಪ್ಯಾರಿಸ್‌ನಲ್ಲಿ (Parls) ಒಲಿಂಪಿಕ್ಸ್ (Olympics) ಕ್ರೀಡಾಕೂಟದ ಸಂಭ್ರಮ ಮನೆ ಮಾಡಿದ್ದು, ಅದ್ಧೂರಿ ಕ್ರೀಡೋತ್ಸವ ಕಣ್ಣುಂಬಿಕೊಳ್ಳಲು ಇಡೀ ವಿಶ್ವವೇ ಕಾದು ಕುಳಿತಿದೆ. 1900ರಲ್ಲಿ ಆಧುನಿಕ ಯುಗದ ಒಲಿಂಪಿಕ್ಸ್ ಕೂಟಕ್ಕೆ ನಾಂದಿ ಹಾಡಿದ್ದ ಪ್ಯಾರಿಸ್‌ನಲ್ಲಿ ಈ ಬಾರಿ 3ನೇ ಐತಿಹಾಸಿಕ ಒಲಿಂಪಿಕ್ಸ್ ಮೇಳ ನಡೆಯುತ್ತಿರುವುದು ಮತ್ತೊಂದು ವಿಶೇಷವಾಗಿದೆ.
ಒಲಿಂಪಿಕ್ಸ್‌ನಲ್ಲಿ ಪಾಲ್ಗೊಳ್ಳುವ ವಿಶ್ವದ ಎಲ್ಲಾ ಕ್ರೀಡಾಪಟುಗಳು ಈಗಾಗಲೇ ಪ್ಯಾರಿಸ್ ಅಂಗಳ ತಲುಪಿದ್ದು, ಇಂದು ಒಲಿಂಪಿಕ್ಸ್‌ಗೆ ಅಧಿಕೃತ ಚಾಲನೆ ದೊರೆಯಲಿದೆ. ಇದೇ ಮೊದಲ ಬಾರಿಗೆ ಕ್ರೀಡಾಂಗಣದ ಹೊರಗೆ ಒಲಿಂಪಿಕ್ಸ್ ಉದ್ಘಾಟನಾ ಸಮಾರಂಭ ನಡೆಯುತ್ತಿದ್ದು, ಪ್ಯಾರಿಸ್‌ನ ಜೀವನದಿಯಾಗಿರುವ ಸೀನ್ ನದಿಯ ಉದ್ದಕ್ಕೂ ಉದ್ಘಾಟನಾ ಸಮಾರಂಭದ ಕಾರ್ಯಕ್ರಮಗಳು ನಡೆಯಲಿದೆ.
ವಿಶ್ವದ 10 ಸಾವಿರಕ್ಕೂ ಅಧಿಕ ಕ್ರೀಡಾಪಟುಗಳು ನದಿಯಲ್ಲಿ ಸುಮಾರು 100 ದೋಣಿಗಳ ಮೂಲಕ ಉದ್ಘಾಟನಾ ಸಮಾರಂಭಕ್ಕೆ ಎಂಟ್ರಿಕೊಡಲಿದ್ದಾರೆ.. ಇನ್ನೂ ಭಾರತದಿಂದ (India) ಈ ಬಾರಿ 117 ಕ್ರೀಡಾಪಟುಗಳು ಹಾಗೂ 140 ಮಂದಿ ಕ್ರೀಡಾ ಸಿಬ್ಬಂದಿ ಒಲಂಪಿಕ್ಸ್‌ನಲ್ಲಿ ಪಾಲ್ಗೊಳ್ಳುತ್ತಿದ್ದಾರೆ.