ಒಮಿಕ್ರಾನ್ ಗಿಂತ 10 ಪಟ್ಟು ವೇಗವಾಗಿ ಹರಡಬಲ್ಲ ಹೊಸ ರೂಪಾಂತರಿ ವೈರಸ್ ಎಕ್ಸ್ ಇ ಮೊದಲ ಪ್ರಕರಣ ಮುಂಬೈನಲ್ಲಿ ಪತ್ತೆಯಾಗಿದೆ.
ಮುಂಬೈ ವಿಮಾನ ನಿಲ್ದಾಣದಲ್ಲಿ ಮೊದಲ ಎಕ್ಸ್ ಇ ವೈರಸ್ ಪತ್ತೆಯಾಗಿದೆ ಎಂದು ಮುಂಬೈ ಸ್ಥಳೀಯ ಆರೋಗ್ಯ ಇಲಾಖೆ ಪ್ರಕಟಿಸಿದೆ. ಆದರೆ ಈ ಬಗ್ಗೆ ಕೇಂದ್ರ ಸರಕಾರ ಯಾವುದೇ ಹೇಳಿಕೆ ನೀಡಿಲ್ಲ.
ಕೇಂದ್ರ ಸರಕಾರದ ಆರೋಗ್ಯ ಸಚಿವಾಲಯ ಒಮಿಕ್ರಾನ್ ರೂಪಾಂತರಿ ಎಕ್ಸ್ ಇ ಪ್ರಕರಣ ಪತ್ತೆಯಾಗಿರುವ ಬಗ್ಗೆ ಮರು ಪರಿಶೀಲನೆ ನಡೆಸಿದ ನಂತರ ಈ ವಿಷಯವನ್ನು ಪ್ರಕಟಿಸಲಾಗುವುದು. ಯಾವುದೇ ಹೊಸ ಪ್ರಕರಣ ಪತ್ತೆಯಾದರೆ ಮರು ಪರಿಶೀಲನೆ ಅಗತ್ಯ ಎಂದು ಹೇಳಿದೆ.