• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

Accident: ‘ಕರ್ನಾಟಕದಲ್ಲಿ ಪ್ರತಿದಿನ ರಸ್ತೆ ಅಪಘಾತಕ್ಕೆ 31 ಜೀವಗಳು ಬ**’: ಕಾರಣವೇನು..?

ಪ್ರತಿಧ್ವನಿ by ಪ್ರತಿಧ್ವನಿ
February 23, 2026
in Top Story, ಕರ್ನಾಟಕ
0
Accident: ‘ಕರ್ನಾಟಕದಲ್ಲಿ ಪ್ರತಿದಿನ ರಸ್ತೆ ಅಪಘಾತಕ್ಕೆ 31 ಜೀವಗಳು ಬ**’: ಕಾರಣವೇನು..?
Share on WhatsAppShare on FacebookShare on Telegram

ಬೆಂಗಳೂರು: ದಿನ ಬೆಳಗಾದರೆ ಸಾಕು ಹೊಸ ದಿನದ ಶುಭ ಸುದ್ದಿಗಾಗಿ ಪತ್ರಿಕೆ ಅಥವಾ ಟಿವಿ ಮುಂದೆ ಕುಳಿತರೆ ನೋಡುವವರ ಕಣ್ಣಿಗೆ ರಾಚುವಂತೆ ಕಾಣುವುದು ಅಪಘಾತದ ಸುದ್ದಿಗಳು. ದಿನಕ್ಕೆ ಕನಿಷ್ಠ ಹತ್ತು ಅಪಘಾತದ ಸುದ್ದಿ ಬಗ್ಗೆಯಾದರೂ ನೀವು ಕಣ್ಣು ಹಾಯಿಸಬಹುದಾಗಿದ್ದು, ಪ್ರತಿ ದಿನ ಒಂದು ಐದು ಮಂದಿಯಾದರೂ ಅಪಘಾತದಿಂದ ಸಾವನ್ನಪ್ಪುತ್ತಾರೆ ಎಂದು ಅಂದಾಜಿಸಬಹುದು. ಆದರೆ ಇದೀಗ ಆತಂಕಕಾರಿ ವಿಚಾರವೊಂದು ಹೊರಬಿದ್ದಿದ್ದು, ಕರ್ನಾಟಕದಲ್ಲಿ ಪ್ರತಿದಿನ ರಸ್ತೆ ಅಪಘಾತಕ್ಕೆ 31 ಜೀವಗಳು ಬಲಿಯಾಗುತ್ತಿದೆ ಎಂದು ವರದಿಯಾಗಿದೆ.

ADVERTISEMENT
Former MLA Suresh Gowda Injured in Car Accident..! ಮಾಜಿ ಶಾಸಕ ಸುರೇಶ್ ಗೌಡ ಕಾರು ಅಪಘಾತ #pratidhvani

ಹೌದು ಕರ್ನಾಟಕದಲ್ಲಿ ರಸ್ತೆ ಅಪಘಾತಗಳ ಸಂಖ್ಯೆ ಆತಂಕಕಾರಿಯಾಗಿ ಹೆಚ್ಚುತ್ತಿದೆ. ಪ್ರತಿದಿನ ಸರಾಸರಿ 31 ಮಂದಿ ಸಾವನ್ನಪ್ಪುತ್ತಿದ್ದು, 86 ಮಂದಿ ಗಾಯಗೊಳ್ಳುತ್ತಿದ್ದಾರೆ ಎಂದು ಇತ್ತೀಚಿನ ಅಧ್ಯಯನ ವರದಿಯೊಂದು ತಿಳಿಸಿದೆ.

ಚಿಕ್ಕಬಳ್ಳಾಪುರದಲ್ಲಿ ಮನ್​ರೇಗಾ ಬಚಾವ್ ಆಂದೋಲನ ಸಮಾವೇಶ ವೇದಿಕೆಗೆ ಗ್ರ್ಯಾಂಡ್ ಎಂಟ್ರಿಕೊಟ್ಟ Siddaramaiah

2025ರಲ್ಲಿ ಸಂಭವಿಸಿದ ಅಪಘಾತಗಳಲ್ಲಿ ಶೇ 62.68 ಪ್ರಕರಣಗಳು ರಾಷ್ಟ್ರೀಯ ಮತ್ತು ರಾಜ್ಯ ಹೆದ್ದಾರಿಗಳಲ್ಲೇ ನಡೆದಿವೆ. 2026ರ ಜನವರಿಯಲ್ಲೇ 1,009 ಮಂದಿ ಮೃತಪಟ್ಟಿದ್ದಾರೆ ಎಂದು ವರದಿ ತಿಳಿಸಿದೆ. 2025ರಲ್ಲಿ ಒಟ್ಟು 11,408 ಮಂದಿ ರಸ್ತೆ ಅಪಘಾತಗಳಲ್ಲಿ ಸಾವನ್ನಪ್ಪಿದ್ದು, 800ಕ್ಕೂ ಹೆಚ್ಚು ಜನರು ಬೆಂಗಳೂರು ನಗರದಲ್ಲಿ ನಡೆದ ಅಪಘಾತದಲ್ಲಿ ಮೃತಪಟ್ಟಿದ್ದಾರೆ. ಹಾಗೂ 31,751 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಬೆಳಗಾವಿ ಮತ್ತು ತುಮಕೂರು ಜಿಲ್ಲೆಗಳಲ್ಲೂ ಹೆಚ್ಚಿನ ಸಾವುಗಳು ದಾಖಲಾಗಿವೆ.

ರಸ್ತೆ ಅಪಘಾತಕ್ಕೆ ಹತ್ತಾರು ಕಾರಣಗಳಿದ್ದು, ವೇಗದ ಚಾಲನೆ, ನಿರ್ಲಕ್ಷ್ಯ ಮತ್ತು ಮೂಲಸೌಕರ್ಯ ಕೊರತೆ ಪ್ರಮುಖ ಕಾರಣಗಳಾಗಿವೆ. ಅತಿವೇಗ ಮತ್ತು ನಿರ್ಲಕ್ಷ್ಯ ಚಾಲನೆ, ಮದ್ಯಪಾನ ಮಾಡಿ ವಾಹನ ಚಾಲನೆ, ಹೆಲ್ಮೆಟ್ ಮತ್ತು ಸೀಟ್‌ಬೆಲ್ಟ್ ಬಳಕೆ ಇಲ್ಲದಿರುವುದು, ಅಪೂರ್ಣ ಹೆದ್ದಾರಿಗಳ ಕಾಮಗಾರಿಗಳು, ಸಮರ್ಪಕ ಬೆಳಕು ಹಾಗೂ ಪ್ರತಿಫಲಕ ಗುರುತುಗಳ ಕೊರತೆ, ಅವೈಜ್ಙಾನಿಕ ರಸ್ತೆ ನಿರ್ಮಾಣವೇ ಪ್ರತಿನಿತ್ಯ ಅಪಘಾತಗಳಿಗೆ ಕಾರಣವಾಗಿದೆ.

Parameshwar on Power : ಸಿದ್ದು - ಹೆಚ್‌ಡಿಕೆ ಟಾಕ್‌ ವಾರ್..ಪರಮೇಶ್ವರ್‌ ಶಾಕಿಂಗ್‌ ರಿಯಾಕ್ಷನ್.. #pratidhvani

ಅಪಘಾತಗಳನ್ನು ತಡೆಯಲು ಸಂಚಾರಿ ಪೊಲೀಸರು ವಿವಿಧ ಕ್ರಮಗಳನ್ನು ಕೈಗೊಂಡರೂ ಕೂಡ ಅಪಘಾತಗಳ ಸಂಖ್ಯೆ ಕಡಿಮೆಯಾಗುತ್ತಿಲ್ಲ. ಹೀಗಾಗಿ ಸಂಚಾರಿ ಪೊಲೀಸರು ಹೆದ್ದಾರಿಗಳಲ್ಲಿ ನಿಯಮಿತ ಪೆಟ್ರೋಲಿಂಗ್ ಹೆಚ್ಚಿಸಬೇಕಾಗಿದ್ದು, ಅತಿವೇಗ ಚಾಲಕರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕಾಗಿದೆ. ಹಾಗೂ ರಸ್ತೆ ಸುರಕ್ಷತೆ ಕುರಿತು ಸಾಮಾಜಿಕ ಜಾಲತಾಣಗಳ ಮೂಲಕ ಜಾಗೃತಿ ಅಭಿಯಾನ ಹೆಚ್ಚಿಸಬೇಕಾಗಿದೆ.

Tags: accidentBelagavibike accidentbus accidentCar AccidentDeathKarnatakaThumakuruTraffic PoliceTRAFFIC RULES
Previous Post

Mobile Ban: ಶಾಲಾ-ಕಾಲೇಜುಗಳಲ್ಲಿ ಮೊಬೈಲ್‌ ಬ್ಯಾನ್‌: ಮಹತ್ವದ ಅಪ್ಡೇಟ್‌ ಕೊಟ್ಟ ಡಿ.ಕೆ ಶಿವಕುಮಾರ್‌

Next Post

ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ : ಹೈಕಮಾಂಡ್‌ಗೆ “ಕೈ” ಶಾಸಕರು ಪತ್ರ ಬರೆದಿದ್ದೇಕೆ..?

Related Posts

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು
ಕರ್ನಾಟಕ

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

by ಪ್ರತಿಧ್ವನಿ
April 28, 2026
0

ಕಲಬುರಗಿ: ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಕುರಿತ ಚರ್ಚೆಗಳು ರಾಜಕೀಯ ವಲಯದಲ್ಲಿ ಗರಿಗೆದರಿರುವ ನಡುವೆಯೇ, ಗೃಹ ಸಚಿವ ಜಿ. ಪರಮೇಶ್ವರ್ ಸ್ಪಷ್ಟನೆ ನೀಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿದ ಅವರು,...

Read moreDetails
ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

ಕಬ್ಬನ್ ಪಾರ್ಕ್ ನಿಗೂಢ ಸಾವು ಪ್ರಕರಣದ ಸತ್ಯ ಬಯಲು

April 28, 2026
ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

ಮಂಗಳೂರು ಕುಕ್ಕರ್ ಬಾಂಬ್ ಸ್ಫೋಟ: ಶಾರಿಕ್ ಪ್ರಕರಣದ ಸಂಪೂರ್ಣ ಚಿತ್ರಣ ಇಲ್ಲಿದೆ

April 27, 2026
ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

ರಾಜಸ್ಥಾನ ಕೃಷಿ ಕ್ರಾಂತಿಗೆ ಕೈಜೋಡಿಸಿ: ಕರ್ನಾಟಕಕ್ಕೆ ರಾಜಸ್ಥಾನ ಮುಖ್ಯಮಂತ್ರಿ ಆಹ್ವಾನ

April 27, 2026
AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

AI ಚಾಟ್‌ಬಾಟ್ ‘Grok’ ಆಯ್ಕೆ ಮಾಡಿದ ಪ್ರಧಾನಿ ಯಾರು?

April 27, 2026
Next Post
ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ : ಹೈಕಮಾಂಡ್‌ಗೆ “ಕೈ” ಶಾಸಕರು ಪತ್ರ ಬರೆದಿದ್ದೇಕೆ..?

ಕಾಂಗ್ರೆಸ್‌ನಲ್ಲಿ ಅಸಮಾಧಾನ ಸ್ಫೋಟ : ಹೈಕಮಾಂಡ್‌ಗೆ "ಕೈ" ಶಾಸಕರು ಪತ್ರ ಬರೆದಿದ್ದೇಕೆ..?

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada