• Home
  • About Us
  • ಕರ್ನಾಟಕ
Saturday, July 12, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

16ನೇ ಹಣಕಾಸು ಆಯೋಗಕ್ಕೆ ಸಲ್ಲಿಸಿದ ರಾಜ್ಯದ ಶಿಫಾರಸ್ಸುಗಳ ಕುರಿತು ಮುಖ್ಯಮಂತ್ರಿಗಳು ನಡೆಸಿದ ಪತ್ರಿಕಾಗೋಷ್ಠಿಯ ಮುಖ್ಯಾಂಶಗಳು

ಪ್ರತಿಧ್ವನಿ by ಪ್ರತಿಧ್ವನಿ
June 13, 2025
in Top Story, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ, ಸರ್ಕಾರಿ ಗೆಜೆಟ್
0
Share on WhatsAppShare on FacebookShare on Telegram

ಮಾನ್ಯ ಮುಖ್ಯಮಂತ್ರಿಯವರು 2025ರ ಜೂನ್ 13ರಂದು ಮಧ್ಯಾಹ್ನ 3:00 ಗಂಟೆಗೆ 16ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಡಾ. ಅರ್ವಿಂದ್ ಪನಗಾರಿಯ ಮತ್ತು ಆಯೋಗದ ಗೌರವಾನ್ವಿತ ಸದಸ್ಯರೊಂದಿಗೆ ಭೇಟಿ ಮಾಡಿ, ಕೇಂದ್ರದಿಂದ ರಾಜ್ಯಗಳಿಗೆ ತೆರಿಗೆ ಹಂಚಿಕೆ ಮತ್ತು ಹಣಕಾಸು ವರ್ಗಾವಣೆಗಳ ಕುರಿತು ರಾಜ್ಯದ ಆಶಯಗಳು, ನಿರೀಕ್ಷೆಗಳು ಮತ್ತು ಪ್ರಸ್ತಾವನೆಗಳನ್ನು ಮಂಡಿಸಿದರು. ಈ ಸಭೆಯಲ್ಲಿ ಶ್ರೀ ಬಸವರಾಜ ರಾಯರೆಡ್ಡಿ, ಮುಖ್ಯಮಂತ್ರಿ ಆರ್ಥಿಕ ಸಲಹೆಗಾರರು, ಮುಖ್ಯ ಕಾರ್ಯದರ್ಶಿರವರು, ಮುಖ್ಯಮಂತ್ರಿ ಕಚೇರಿ ಮತ್ತು ಹಣಕಾಸು ಇಲಾಖೆಯ ಹಿರಿಯ ಅಧಿಕಾರಿಗಳು ಹಾಜರಿದ್ದರು.

ADVERTISEMENT

ಮಾನ್ಯ ಮುಖ್ಯಮಂತ್ರಿಗಳು ಹೆಚ್ಚುವರಿ ಜ್ಞಾಪಕ ಪತ್ರವನ್ನು ಆಯೋಗಕ್ಕೆ ಸಲ್ಲಿಸುವುದರೊಂದಿಗೆ, ಈ ಜ್ಞಾಪಕ ಪತ್ರದಲ್ಲಿ ನ್ಯಾಯಯುತ, ಪಾರದರ್ಶಕ ಮತ್ತು ಬೆಳವಣಿಗೆಯನ್ನು ಪ್ರೋತ್ಸಾಹಿಸುವ ಮತ್ತು ಒಕ್ಕೂಟ ವ್ಯವಸ್ಥೆಯನ್ನು ಬಲಪಡಿಸುವ ರಾಜ್ಯದ ದೃಷ್ಟಿಕೋನವನ್ನು ಸ್ಪಷ್ಟಪಡಿಸಿದರು.

1.      ಆಯೋಗವನ್ನುದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿಗಳು, ಭಾರತದ ಆರ್ಥಿಕ ಬೆಳವಣಿಗೆಯಲ್ಲಿ ಕರ್ನಾಟಕದ ಪ್ರಮುಖ ಪಾತ್ರವನ್ನು ಒತ್ತಿ ಹೇಳಿದರು – ರಾಜ್ಯವು ದೇಶದ ಒಟ್ಟು ಜಿಡಿಪಿಗೆ ಸುಮಾರು ಶೇ.8.7ರಷ್ಟು ಕೊಡುಗೆ ನೀಡುತ್ತಿದ್ದು, ಜಿ.ಎಸ್.ಟಿ ಸಂಗ್ರಹಣೆಯಲ್ಲಿ 2ನೇ ಸ್ಥಾನದಲ್ಲಿದೆ.

2.     ಈ ಕೊಡುಗೆಯ ಹೊರತಾಗಿಯೂ, ಸಂಪನ್ಮೂಲ ಹಂಚಿಕೆಯಲ್ಲಿ ಉಂಟಾಗಿರುವ ತೀವ್ರ ಅಸಮತೋಲನವನ್ನು ಮುಖ್ಯಮಂತ್ರಿಗಳು ಪ್ರಸ್ತುತ ಪಡಿಸಿದರು. ರಾಜ್ಯದಿಂದ ಕೇಂದ್ರಕ್ಕೆ ಸ್ವೀಕೃತವಾಗುವ ತೆರಿಗೆಯ ಪ್ರತಿ ರೂಪಾಯಿಗೆ ಪ್ರತಿಯಾಗಿ ರಾಜ್ಯವು ಕೇವಲ 15 ಪೈಸೆ ಮಾತ್ರ ಪಡೆಯುತ್ತದೆ. 15 ನೇ ಹಣಕಾಸು ಆಯೋಗವು ಕರ್ನಾಟಕದ ತೆರಿಗೆ ಪಾಲನ್ನು 4.713% ರಿಂದ 3.647% ಕ್ಕೆ ಇಳಿಕೆ ಮಾಡಿದ್ದರಿಂದ 15 ನೇ ಹಣಕಾಸು ಆಯೋಗದ ಅವಧಿಯಲ್ಲಿ ₹ 80,000 ಕೋಟಿಗಳಷ್ಟು ನಷ್ಟವಾಗಿದೆ ಎಂದು ಅವರು ತಿಳಿಸಿದರು.

3.     ಸಂಪನ್ಮೂಲ ಹಂಚಿಕೆಯಲ್ಲಿ ಉಂಟಾಗಿರುವ ಈ ಅಸಮತೋಲನವನ್ನು ಸರಿಪಡಿಸಲು ರಾಜ್ಯವು 16ನೇ ಹಣಕಾಸು ಆಯೋಗಕ್ಕೆ ಈಗಾಗಲೇ ಜ್ಞಾಪನಾ ಪತ್ರವನ್ನು ಸಲ್ಲಿಸಿದ್ದು, ರಾಜ್ಯದ ಮುಖ್ಯ ಪ್ರಸ್ತಾವನೆಗಳು ಕೆಳಕಂಡಂತಿದೆ:

·        ಕೇಂದ್ರ ಹಾಗು ರಾಜ್ಯಗಳ ನಡುವಿನ ಹಂಚಿಕೆಯು ಕನಿಷ್ಠ 50% ಕ್ಕೆ ಹೆಚ್ಚಿಸಬೇಕು ಮತ್ತು ಸೆಸ್‌ಗಳು ಮತ್ತು ಸರ್‌ಚಾರ್ಜ್‌ಗಳನ್ನು 5% ಕ್ಕೆ ಮಿತಿಗೊಳಿಸಬೇಕೆಂದು ಪ್ರಸ್ತಾಪಿಸಿದೆ. ಕೇಂದ್ರದ ತೆರಿಗೆಯೇತರ ಆದಾಯವನ್ನು ರಾಜ್ಯಗಳಿಗೆ ಹಂಚಿಕೆಯಾಗುವ ಪಾಲಿನಲ್ಲಿ (divisible pool) ಸೇರಿಸಲು ಸಹ ಶಿಫಾರಸು ಮಾಡಿದೆ.

·        ರಾಜ್ಯಗಳ ನಡುವಿನ ಹಂಚಿಕೆಗೆ ಸಂಬಂಧಿಸಿದಂತೆ ಪ್ರತಿ ರಾಜ್ಯವು ತಾನು ನೀಡುವ ಕೊಡುಗೆಯಲ್ಲಿ ಸುಮಾರು 60% ಅನ್ನು ಉಳಿಸಿಕೊಳ್ಳಲು ಮತ್ತು 40% ಅನ್ನು ಉಳಿದ ರಾಜ್ಯಗಳಿಗೆ ಹಂಚಿಕೆಯಾಗಬೇಕೆಂದು ಸೂಚಿಸಿದೆ ಇದು ಬೆಳವಣಿಗೆ ಮತ್ತು ಸಮಾನತೆ ಎರಡನ್ನೂ ಖಚಿತಪಡಿಸುತ್ತದೆ.

·        ಸೂತ್ರವನ್ನು ನ್ಯಾಯಯುತವಾಗಿಸಲು, ಕರ್ನಾಟಕವು ಆದಾಯ-ದೂರ (income-distance) ಮಾನದಂಡದ ಪಾಲನ್ನು ಕಡಿಮೆ ಮಾಡಲು ಮತ್ತು ರಾಜ್ಯದ ಆರ್ಥಿಕ ಕೊಡುಗೆಗೆ ಹೆಚ್ಚಿನ ಪಾಲನ್ನು ನೀಡಲು ಪ್ರಸ್ತಾಪಿಸಿದೆ.

4.    ಕರ್ನಾಟಕವು ತನ್ನ ಹೆಚ್ಚುವರಿ ಜ್ಞಾಪಕ ಪತ್ರದಲ್ಲಿ, ಸಂಪನ್ಮೂಲ ಹಂಚಿಕೆಯು ಹೆಚ್ಚು ಬೆಳವಣಿಗೆ-ಆಧಾರಿತ ಮತ್ತು ನ್ಯಾಯಯುತವಾಗಿಸಲು ನಿರ್ಣಾಯಕ ಸುಧಾರಣೆಗಳಿಗೆ ಕರೆ ನೀಡಿದೆ. ಹೆಚ್ಚುವರಿ ಜ್ಞಾಪಕ ಪತ್ರದ ಪ್ರಮುಖ ಪ್ರಸ್ತಾವನೆಗಳು ಕೆಳಕಂಡಂತಿದೆ.

5.     ತಲಾವಾರು ತೆರಿಗೆ ಹಂಚಿಕೆಯಲ್ಲಿ ಹೆಚ್ಚುತ್ತಿರುವ ಅಸಮಾನತೆಗಳು, ಆದಾಯ ಕೊರತೆ ಅನುದಾನಗಳ ಅವೈಜ್ಞಾನಿಕ ವಿನ್ಯಾಸ ಮತ್ತು ರಾಜ್ಯ-ನಿರ್ದಿಷ್ಟ ಅನುದಾನಗಳ ಅನಿರೀಕ್ಷಿತತೆಯ ಕುರಿತು ಹೆಚ್ಚುವರಿ ಜ್ಞಾಪಕ ಪತ್ರದಲ್ಲಿ ಪ್ರಸ್ತಾಪಿಸಲಾಗಿದೆ. ದೇಶದ  GDP ಗೆ ರಾಜ್ಯದ ಕೊಡುಗೆಯು ಹೆಚ್ಚಾಗಿರುವ ಹೊರತಾಗಿಯೂ, ತಲಾವಾರು ತೆರಿಗೆ ಹಂಚಿಕೆಯು ಗಮನಾರ್ಹವಾಗಿ ಕುಸಿದಿದೆ – 14 ನೇ ಮತ್ತು 15 ನೇ ಹಣಕಾಸು ಆಯೋಗಗಳ ನಡುವಿನ ರಾಷ್ಟ್ರೀಯ ಸರಾಸರಿಯ 95% ರಿಂದ 73% ಕ್ಕೆ ಕುಸಿದಿದೆ.

6.     ಸಂಪನ್ಮೂಲ ಹಂಚಿಕೆಯಲ್ಲಿ ಸಮಾನತೆ ಮುಖ್ಯವಾಗಿದ್ದರೂ, ಇದು ಸ್ಥಿರವಾದ ಆರ್ಥಿಕ ಕಾರ್ಯಕ್ಷಮತೆ ಮತ್ತು ಆರ್ಥಿಕ ಶಿಸ್ತನ್ನು ಪಾಲಿಸುವ ರಾಜ್ಯಗಳಿಗೆ ದಂಡ ವಿಧಿಸುವಂತಾಗಬಾರದು. ಸಂಪನ್ಮೂಲ ಹಂಚಿಕೆಯಲ್ಲಿ ಸಮಾನತೆಯನ್ನು ಫಲಿತಾಂಶ ಆಧಾರಿತ ರೀತಿಯಲ್ಲಿ ಕಾರ್ಯಗತಗೊಳಿಸಬೇಕು ಎಂದು ರಾಜ್ಯವು ಒತ್ತಿಹೇಳಿತು. ಆದ್ದರಿಂದ, ಆದಾಯ-ದೂರ ಮಾನದಂಡದ ಪಾಲನ್ನು 20% ರಷ್ಟು ಕಡಿಮೆ ಮಾಡಿ ದೇಶದGDP ಯಲ್ಲಿ ರಾಜ್ಯಗಳ ಕೊಡುಗೆಯನ್ನು ಅಳತೆಗೊಲಾಗಿ ಪರಿಗಣಿಸಿ ಇದಕ್ಕೆ 20% ಅಂಕವನ್ನು ನೀಡಬೇಕೆಂದು ಪ್ರಸ್ತಾಪಿಸಿದೆ.

7.     ಹಣಕಾಸು ಆಯೋಗವು ನೀಡುವ ರಾಜಸ್ವ ಕೊರತೆ ಅನುದಾನಗಳ ಪರಿಣಾಮಕಾರಿತ್ವವನ್ನು ಮುಖ್ಯಮಂತ್ರಿಯವರು ಪ್ರಶ್ನಿಸಿದರು. ಪ್ರಸ್ತುತ ರೂಪದಲ್ಲಿ ರಾಜಸ್ವ ಕೊರತೆ ಅನುದಾನವನ್ನು ಪಡೆಯುತ್ತಿರುವ ಫಲಾನುಭವಿ ರಾಜ್ಯಗಳು, ಈ ಅನುದಾನದ ಹೊರತಾಗಿಯೂ ರಾಜಸ್ವ ಕೊರತೆಯನ್ನು ಶೂನ್ಯವಾಗಿಸುವಲ್ಲಿ ವಿಫಲವಾಗಿರುವುದನ್ನು ಉಲ್ಲೇಖಿಸಿ ರಾಜಸ್ವ ಕೊರತೆ ಅನುದಾನವನ್ನು ತೆರಿಗೆ ಹಂಚಿಕೆಯ ಸೂತ್ರದಲ್ಲೇ ರಾಜ್ಯಗಳಿಗೆ ನೀಡಬೇಕೆಂದು ಪ್ರಸ್ತಾಪಿಸಿದರು.

8.     ಇದಲ್ಲದೆ, ರಾಜಸ್ವ ಕೊರತೆ ಅನುದಾನಗಳನ್ನು ಅಂದಾಜಿಸಲು ಆಯೋಗವು ಪರಿಕಲ್ಪಿಸುವ ವೆಚ್ಚದ ಆದ್ಯತೆಗಳು ವ್ಯಕ್ತಿನಿಷ್ಠ ಮೌಲ್ಯಮಾಪನಗಳನ್ನು ಪ್ರತಿಬಿಂಬಿಸುತ್ತವೆ. ದುರದೃಷ್ಟವಶಾತ್, ಈ ಮೌಲ್ಯಮಾಪನಗಳು ಸಂಬಳ, ಪಿಂಚಣಿ ಮತ್ತು ಆಡಳಿತಾತ್ಮಕ ವೆಚ್ಚಗಳಿಗೆ ಹೋಲಿಸಿದರೆ ಕಲ್ಯಾಣ ಕಾರ್ಯಕ್ರಮಗಳಿಗೆ ಸರ್ಕಾರ ಭರಿಸುವ ವೆಚ್ಚವನ್ನು ಕಡಿಮೆ ಪ್ರಮಾಣದಲ್ಲಿ ಇರಿಸುತ್ತವೆ. ನಮ್ಮ ಸರ್ಕಾರವು ಎಲ್ಲರ ಕಲ್ಯಾಣವನ್ನು ಒತ್ತಿಹೇಳುವ ಗಾಂಧೀಜಿಯವರ ಸರ್ವೋದಯ ತತ್ವದಿಂದ ಮಾರ್ಗದರ್ಶಿಸಲ್ಪಟ್ಟಿದೆ. ಕಡಿಮೆ ಆದಾಯದ ಕುಟುಂಬಗಳನ್ನು ಸಬಲೀಕರಣಗೊಳಿಸುವ ಮೂಲಕ, ಸ್ಥಳೀಯ ಬೇಡಿಕೆಯನ್ನು ಉತ್ತೇಜಿಸುವ ಮತ್ತು ಸಮಗ್ರ ಬೆಳವಣಿಗೆಯನ್ನು ಹೆಚ್ಚಿಸುವಲ್ಲಿ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ರೂಪಿತವಾಗಿದೆ. ಆದ್ದರಿಂದ, ಹಣಕಾಸಿನ ಹಂಚಿಕೆಯಲ್ಲಿ ಮೌಲ್ಯಮಾಪನ ಮಾಡುವಾಗ ಈ ಕಲ್ಯಾಣ ಕಾರ್ಯಕ್ರಮಗಳ ಮೇಲಿನ ವೆಚ್ಚಗಳಿಗೆ ಹೆಚ್ಚಿನ ಆದ್ಯತೆ ನೀಡದೆ ಹೋದರೆ ಕನಿಷ್ಠ ಸಂಬಳ, ಪಿಂಚಣಿ ಮತ್ತು ಬಡ್ಡಿ ಪಾವತಿಗಳಂತಹ ಬದ್ಧ ವೆಚ್ಚಗಳಿಗೆ ಸಮಾನವಾಗಿ ಪರಿಗಣಿಸಬೇಕು.

9.     ಕೇಂದ್ರ ಸರ್ಕರದ ವಿವೇಚನಾಧಾರಿತ ಅನುದಾನವಾಗಿರುವ ರಾಜ್ಯ ಕೇಂದ್ರಿತ ಅನುದಾನದ ಬದಲಾಗಿ ಒಟ್ಟು ಕೇಂದ್ರ ಸ್ವೀಕೃತಿಗಳ 0.3% ರಷ್ಟು ಅನುದಾನವನ್ನು ಸೂತ್ರ ಆಧಾರಿತ ಹಂಚಿಕೆಯ ಮೂಲಕ ರಾಜ್ಯಗಳಿಗೆ ನೀಡಬೇಕೆಂದು ಕರ್ನಾಟಕವು ಶಿಫಾರಸು ಮಾಡಿದೆ. ಆದಾಗ್ಯೂ, ಆಯೋಗವು ಅಂತಹ ನಿಬಂಧನೆಗಳನ್ನು ಮುಂದುವರಿಸಿದರೆ ಬೆಂಗಳೂರು ಮತ್ತು ಇತರ ನಿರ್ಣಾಯಕ ಯೋಜನೆಗಳಿಗೆ ಅನುದಾನಕ್ಕಾಗಿ ಮೂಲ ಜ್ಞಾಪಕ ಪತ್ರದಲ್ಲಿ ಸಲ್ಲಿಸಿರುವ ತನ್ನ ಪ್ರಸ್ತಾವನೆಯನ್ನು ಪುನರುಚ್ಚರಿಸಿದೆ.

10.   ಇದಲ್ಲದೆ, ಕರ್ನಾಟಕದ ಆರ್ಥಿಕತೆಯಲ್ಲಿ ಬೆಂಗಳೂರಿನ ಪ್ರಮುಖ ಪಾತ್ರವನ್ನು ಪರಿಗಣಿಸಿ, ಬೆಂಗಳೂರಿನ ಮೂಲಸೌಕರ್ಯವನ್ನು ಬಲಪಡಿಸಲು ₹1.15 ಲಕ್ಷ ಕೋಟಿ ಹೂಡಿಕೆಗೆ ಬೆಂಬಲವನ್ನು ಮುಖ್ಯಮಂತ್ರಿ ಕೋರಿದರು. ಅಲ್ಲದೆ, ಕಡಿಮೆ ಆದಾಯ ಮತ್ತು ಕುಂಠಿತ ಮೂಲಸೌಕರ್ಯ ಅಭಿವೃದ್ಧಿ ಸಮಸ್ಯೆಯನ್ನು ಎದುರಿಸುತ್ತಿರುವ ಕಲ್ಯಾಣ ಕರ್ನಾಟಕ ಮತ್ತು ಮಲೆನಾಡಿನಲ್ಲಿ ಪ್ರಾದೇಶಿಕ ಅಂತರವನ್ನು ಕಡಿಮೆ ಮಾಡುವ ಅಗತ್ಯವನ್ನು ಅವರು ಒತ್ತಿ ಹೇಳಿದರು.

11.    ಬೆಳವಣಿಗೆ ಮತ್ತು ಸಮಾನತೆ ಜೊತೆ ಜೊತೆಯಾಗಿ ಮುಂದುವರಿಯಬೇಕು. ಆದ್ದರಿಂದ ಸಧೃಡ ಭಾರತದ ನಿರ್ಮಾಣಕ್ಕೆ ನ್ಯಾಯಯುತ ಸಂಪನ್ಮೂಲ ಹಂಚಿಕೆಯಿಂದ ಬೆಂಬಲಿತವಾದ ಬಲವಾದ ಕರ್ನಾಟಕ ಅತ್ಯಗತ್ಯ ಎಂದು ಮುಖ್ಯಮಂತ್ರಿಯವರು ಒತ್ತಿ ಹೇಳಿದರು.

“ಕರ್ನಾಟಕದ ಆರ್ಥಿಕ ಬಲವು ರಾಷ್ಟ್ರೀಯ ಬೆಳವಣಿಗೆಗೆ ಇಂಧನವಾಗಿದೆ. ಬೆಳವಣಿಗೆಗೆ ದಂಡ ವಿಧಿಸಬಾರದು, ಬದಲಾಗಿ ಪ್ರೋತ್ಸಾಹ ದೊರೆಯುವಂತೆ ನೋಡಿಕೊಳ್ಳುವ ಸಮಯ ಇದು. ಸಮತೋಲಿತ, ಸಂಪನ್ಮೂಲ ಹಂಚಿಕೆಯ ದೃಷ್ಟಿಕೋನವನ್ನು ಅಳವಡಿಸಿಕೊಳ್ಳುವಂತೆ ನಾವು ಆಯೋಗವನ್ನು ಒತ್ತಾಯಿಸುತ್ತೇವೆ.”

Tags: 16th Finance Commissionchief ministerCM SiddaramaiahCongress GovtDCM DK ShivakumarDK ShivakumarINC KarnatakaShalini Rajaneeshsiddaramaiah
Previous Post

ಮಳೆ ಹಾನಿ ಪ್ರದೇಶಗಳಿಗೆ ಸಚಿವ ಸಂತೋಷ್‌ ಲಾಡ್‌ ಭೇಟಿ..

Next Post

M B Patil: ಎರಡು ವರ್ಷಗಳಲ್ಲಿ 6 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ

Related Posts

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ
Top Story

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

by ನಾ ದಿವಾಕರ
July 12, 2025
0

ಬಹುಭಾಷಿಕ ದೇಶದಲ್ಲಿ ಭಾಷಾ ಸ್ವಾಯತ್ತತೆಯೊಂದೇ ಸಮನ್ವಯ ಸಾಧಿಸಬಲ್ಲದು ಭಾಗ 2   ಶಾಲಾ ಕಲಿಕೆಯಲ್ಲಿ ಭಾಷಾ ಅಸ್ಮಿತೆ  ಶಾಲಾ ‍ಪಠ್ಯಕ್ರಮದಲ್ಲಿ ಭಾಷಾ ಅಳವಡಿಕೆಯ ಹಿನ್ನೆಲೆಯಲ್ಲಿ ಉತ್ತರ ಪ್ರದೇಶದ...

Read moreDetails

DK Shivakumar: ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ..!!

July 11, 2025

DK Shivakumar: ಖುರ್ಚಿ ಸಿಗುವುದೇ ಕಷ್ಟ. ಸಿಕ್ಕಾಗ ತೆಪ್ಪಗೆ ಕುಳಿತುಕೊಳ್ಳಬೇಕು..

July 11, 2025

HD Kumarswamy: ಉತ್ತೇಜನ ಯೋಜನೆ ಘೋಷಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

July 11, 2025
ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ

ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ

July 11, 2025
Next Post

M B Patil: ಎರಡು ವರ್ಷಗಳಲ್ಲಿ 6 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ

Recent News

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ
Top Story

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

by ನಾ ದಿವಾಕರ
July 12, 2025
Top Story

DK Shivakumar: ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ..!!

by ಪ್ರತಿಧ್ವನಿ
July 11, 2025
Top Story

HD Kumarswamy: ಉತ್ತೇಜನ ಯೋಜನೆ ಘೋಷಿಸಿದ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ

by ಪ್ರತಿಧ್ವನಿ
July 11, 2025
ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ
Top Story

ದ್ವೇಷ ಭಾಷಣ ಮಾಡುವಂತಿಲ್ಲ, ಅಪರಾಧ ಪುನರಾವರ್ತಿಸುವಂತಿಲ್ಲ

by ಪ್ರತಿಧ್ವನಿ
July 11, 2025
ಮೈಸೂರಿನಲ್ಲಿ ಮಹಿಳೆಯರು ಹಾಗೂ ಪುರುಷನ ಮೇಲೆ ಲಾಂಗ್ ನಿಂದ ದಾಳಿ.
Top Story

ಮೈಸೂರಿನಲ್ಲಿ ಮಹಿಳೆಯರು ಹಾಗೂ ಪುರುಷನ ಮೇಲೆ ಲಾಂಗ್ ನಿಂದ ದಾಳಿ.

by ಪ್ರತಿಧ್ವನಿ
July 11, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

ಭಾಷೆ ಅಸ್ಮಿತೆ ಸಂಸ್ಕೃತಿ ಮತ್ತು ಸಾಮಾಜಿಕ ನ್ಯಾಯ

July 12, 2025

DK Shivakumar: ನೀರಾವರಿ ವಿಚಾರದಲ್ಲಿ ದೆಹಲಿ ಪ್ರವಾಸ ಫಲಪ್ರದ..!!

July 11, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada