
ಕಲಬುರಗಿ,: ಒಂದೂವರೆ ವರ್ಷದ ಹಸುಗೂಸಿನ ಮೇಲೆ ಅತ್ಯಾಚಾರನಡೆಸಿರುವ ಘಟನೆ ಕಲಬುರಗಿ(Kalaburagi) ಜಿಲ್ಲೆಯ ಆಳಂದ ತಾಲ್ಲೂಕಿನ ಗ್ರಾಮವೊಂದರಲ್ಲಿ ನಡೆದಿದೆ. ಮಗುವಿನ ಮೇಲೆ ವಿಕೃತಿ ಮೇರೆದ ಕುರುಹುಗಳು ಪತ್ತೆಯಾಗಿದ್ದು, ಅತ್ಯಾಚಾರದ ಶಂಕೆ ವ್ಯಕ್ತವಾಗಿದೆ. ಕೂಡಲೇ ಮಗುವನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಿಸದೆ ಕೊನೆಯುಸಿರೆಳೆದಿದೆ. ಈ ಕುರಿತು ನರೋಣಾ ಪೊಲೀಸ್ ಠಾಣೆಯಲ್ಲಿ ಪೋಕ್ಸೊ ಮತ್ತು ಕೊಲೆ ಪ್ರಕರಣ ದಾಖಲಾಗಿದೆ.




