ನವದೆಹಲಿ:ಕೇಂದ್ರ ಸಂಪುಟ ಸಭೆಯಲ್ಲಿ (central cabinet meeting)ಒಂದು ದೇಶ ಒಂದು ಚುನಾವಣೆ(One country one election) ವರದಿಗೆ ಅನುಮೋದನೆ ನೀಡಲಾಗಿದೆ (Approval is given simultaneously) ಏಕಕಾಲದಲ್ಲಿ ಚುನಾವಣೆ ನಡೆಸುವ ಕುರಿತು ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ (Former President Ram Nath Kovind(ನೇತೃತ್ವದ ಉನ್ನತ ಮಟ್ಟದ ಸಮಿತಿಯು ತನ್ನ ಸಮಗ್ರ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿತ್ತು.
8,626 ಪುಟಗಳ ಈ ವರದಿಯನ್ನು ಸಲ್ಲಿಕೆ ಮಾಡಲಾಗಿದ್ದು, ಸಮಿತಿಯ ವರದಿಯನ್ನು ಇಂದು ಅಂಗೀಕರಿಸಲಾಗಿದೆ.ಈ ವರದಿಯು ಲೋಕಸಭೆ ಹಾಗೂ ವಿಧಾನಸಭೆ ಚುನಾವಣೆಗಳನ್ನು ಏಕಕಾಲದಲ್ಲಿ ನಡೆಸುವ ಉದ್ದೇಶ ಹೊಂದಿದ್ದು, ಸಮಿತಿಯು ಸುಮಾರು ಏಳು ತಿಂಗಳ ಕಠಿಣ ಸಮಾಲೋಚನೆ ಮತ್ತು ಸಂಶೋಧನೆ ನಡೆಸಿದೆ.
ರಾಮ್ ನಾಥ್ ಕೋವಿಂದ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾಗಿದ್ದ ಸಮಿತಿಯ ಸದಸ್ಯರಲ್ಲಿ ಗೃಹ ಸಚಿವ ಅಮಿತ್ ಶಾ, ಕಾಂಗ್ರೆಸ್ ನಾಯಕ ಅಧೀರ್ ರಂಜನ್ ಚೌಧರಿ, ಮಾಜಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್, 15ನೇ ಹಣಕಾಸು ಆಯೋಗದ ಅಧ್ಯಕ್ಷ ಎನ್‌ಕೆ ಸಿಂಗ್, ಲೋಕಸಭೆಯ ಮಾಜಿ ಪ್ರಧಾನ ಕಾರ್ಯದರ್ಶಿ ಡಾ ಸುಭಾಷ್ ಸಿ ಕಶ್ಯಪ್, ಹಿರಿಯ ವಕೀಲ ಹರೀಶ್ ಸಾಳ್ವೆ, ಮಾಜಿ ಮುಖ್ಯ ವಿಜಿಲೆನ್ಸ್ ಕಮಿಷನರ್ ಸಂಜಯ್ ಕೊಠಾರಿ ಇದ್ದರು