FDA ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಎಂಬ ಕಾರಣಕ್ಕೆ ಪರೀಕ್ಷೆಯನ್ನು ಕೆಪಿಎಸ್‌ಸಿ ಮುಂದೂಡಿತ್ತು. ಆ ನಂತರ ಪ್ರಶ್ನೆ ಪತ್ರಿಕೆ ಸೋರಿಕೆಗೆ ಕಾರಣರಾಗಿದ್ದವರನ್ನು ಬಂಧಿಸಲಾಗಿತ್ತು ಕೂಡಾ. ಈಗ ಇದೇ ಪರೀಕ್ಷೆಗೆ ಸಂಬಂಧಿಸಿದಂತೆ ಮತ್ತೊಂದು ವಿವಾದ ಉಂಟಾಗಿದೆ.
ವಿಜಯಪುರದ ಜೆ ಎಸ್‌ಎಸ್ ಕಾಲೇಜಿನಲ್ಲಿ ಪರೀಕ್ಷೆ ನಡೆಯುತ್ತಿದ್ದ ಸಂದರ್ಭದಲ್ಲಿ ನಕಲು ಮಾಡಲು ಸಹಕರಿಸಲಾಗಿದೆ ಎಂಬ ಆರೋಪದ ಮೇಲೆ ಒಬ್ಬ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬ್ಲಾಕ್ ನಂಬರ್ 16ರಲ್ಲಿ ಸಾಮಾನ್ಯ ಜ್ಞಾನ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗೆ 96 ಅಂಕಗಳ ಉತ್ತರ ಕೀಲಿ (Key Answer) ಅನ್ನು ನೀಡಲಾಗಿತ್ತು ಎಂದು ಆರೋಪಿಸಲಾಗಿದೆ.
ಈ ಕುರಿತಾಗಿ ಚೀಟಿಯ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ವಿಷಯ ತಿಳಿಯುತಿದ್ದಂತೆಯೇ FDA ಪರೀಕ್ಷೆ ಬರೆದ ಅಭ್ಯರ್ಥಿಗಳು ಸ್ಥಳದಲ್ಲಿಯೇ ಪ್ರತಿಭಟನೆ ನಡೆಸಿದ್ದಾರೆ.