
ಚಿಕ್ಕಪೇಟೆ, ಕೆ.ಆರ್ ಮಾರುಕಟ್ಟೆ ಭಾಗದಲ್ಲಿ ಬಿಬಿಎಂಪಿ ಕಾಮಾಗಾರಿ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಕೆ.ಆರ್ ಮಾರ್ಕೆಟ್ ಸುತ್ತ ಒಂದು ತಿಂಗಳು ಕಾಲ ವಾಹನ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ. ರಸ್ತೆ ರಿಪೇರಿ ಹಾಗೂ ಹೊಸ ರಸ್ತೆ ನಿರ್ಮಾಣ ಕಾಮಾಗಾರಿ ಹಿನ್ನೆಲೆಯಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಲಾಗಿದೆ.

30 ದಿನ ಸಂಚಾರಕ್ಕೆ ಪರ್ಯಾಯ ಮಾರ್ಗ ಬಳಸಲು ಸಂಚಾರಿ ಪೊಲೀಸರು ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಕಬ್ಬನ್ ಪೇಟೆ ಮುಖ್ಯ ರಸ್ತೆಯಲ್ಲಿ ಅವೆನ್ಯೂ ರಸ್ತೆಯಿಂದ ಸಿದ್ದಣ್ಣ ಗಲ್ಲಿ, ಬನ್ನಪ್ಪ ಪಾರ್ಕ್ ರಸ್ತೆಯ ಅವೆನ್ಯೂ ರಸ್ತೆಯಿಂದ 15ನೇ ಕ್ರಾಸ್, ವಿಲ್ ರಸ್ತೆಯಲ್ಲಿ ಡಾ.ಟಿಸಿಎಂ ರಾಯನ್ ರಸ್ತೆ ಜಂಕ್ಷನ್‌ನಿಂದ ಅಕ್ಕಿಪೇಟೆ ಮುಖ್ಯರಸ್ತೆ, ಆರ್.ಟಿ.ಸ್ಪೀಟ್ ರಸ್ತೆ, ಬಿವಿಕೆ ಐಯ್ಯಂಗಾರ್ ರಸ್ತೆಯಿಂದ ಅವೆನ್ಯೂ ರಸ್ತೆ, ಬಿವಿಕೆ ಐಯ್ಯಂಗಾರ್ ರಸ್ತೆಯಿಂದ ಬಳೆಪೇಟೆ ಮುಖ್ಯರಸ್ತೆ, ಸಿಟಿ ಸ್ಪೀಟ್‌ನಲ್ಲಿ ದೇವರದಾ ಸಿಮಯ್ಯ ರಸ್ತೆಯಿಂದ ನಗರ್ತ ಪೇಟೆ ಮುಖ್ಯ ರಸ್ತೆ ವರೆಗೆ ತಾತ್ಕಾಲಿಕವಾಗಿ ಸಂಚಾರ ನಿರ್ಬಂಧಿಸಲಾಗಿದೆ.
