ದೇಶದಲ್ಲಿ ಕರೋನಾ ಸೋಂಕಿನ ಹೊಸ ರೂಪಾಂತರಿ ಒಮಿಕ್ರಾನ್ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಕರ್ನಾಟಕದಲ್ಲಿ ಮತ್ತೊಂದು ಒಮಿಕ್ರಾನ್ ಸೋಂಕು ದೃಢಪಟ್ಟಿದೆ ಎಂದು ಸಚಿವ ಸುಧಾಕರ್ ಅವರು ಟ್ವೀಟ್ ಮೂಲಕ ತಿಳಿಸಿದ್ದಾರೆ.
ಕರ್ನಾಟಕದಲ್ಲಿ ಮತ್ತೊಂದು ಒಮಿಕ್ರಾನ್ ಪ್ರಕರಣ ಪತ್ತೆಯಾಗಿದ್ದು, ಈ ಮೂಲಕ ಕರ್ನಾಟಕದಲ್ಲಿ ಮೂರನೇ ಒಮಿಕ್ರಾನ್ ಪ್ರಕರಣ ಪತ್ತೆಯಾಗಿದೆ. ದಕ್ಷಿಣ ಆಫ್ರಿಕಾದಿಂದ ರಾಜ್ಯಕ್ಕೆ ಬಂದಿದ್ದ 34 ವರ್ಷದ ವ್ಯಕ್ತಿಗೆ ಒಮಿಕ್ರಾನ್ ಸೋಂಕು ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಒಮಿಕ್ರಾನ್ ಸೋಂಕಿತರ ಸಂಖ್ಯೆ 3 ಕ್ಕೆ ಏರಿಕೆಯಾಗಿದೆ.
ಈ ಕುರಿತು ರಾಜ್ಯದ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಟ್ವೀಟ್ ಮಾಡಿದ್ದು, ಕರ್ನಾಟಕದಲ್ಲಿ ಕರೋನಾ ರೂಪಾಂತರಿ ಒಮಿಕ್ರಾನ್ ಮೂರನೇ ಪ್ರಕರಣ ಪತ್ತೆಯಾಗಿವೆ. ದಕ್ಷಿಣ ಆಫ್ರಿಕಾದಿಂದ ಬಂದ 34 ವರ್ಷದ ವ್ಯಕ್ತಿಗೆ ಸೋಂಕು ದೃಢಪಟ್ಟಿದೆ. ಸೋಂಕಿತ ವ್ಯಕ್ತಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. 5 ಪ್ರಾಥಮಿಕ ಮತ್ತು 15 ದ್ವಿತೀಯ ಸಂಪರ್ಕಗಳನ್ನು ಪತ್ತೆ ಹಚ್ಚಲಾಗಿದೆ ಮತ್ತು ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಈ ತಿಂಗಳ ಮೊದಲನೇ ವಾರದಲ್ಲಿ ಆಫ್ರಿಕಾದಿಂದ ಬಂದ ಇಬ್ಬರು ವ್ಯಕ್ತಿಗಳಲ್ಲಿ ಒಮಿಕ್ರಾನ್ ಇರುವುದು ದೃಢಪಟ್ಟಿತ್ತು. ಇದಾದ ನಂತರ ಇದು ಮೂರನೇ ವ್ಯಕ್ತಿಗೆ ರೂಪಾಂತರ ಒಮಿಕ್ರಾನ್ ವೈರಸ್ ತಗುಲಿದೆ.