ಕೇಂದ್ರದ ಬಿಜೆಪಿ ನೇತೃತ್ವ ಎನ್ಡಿಎ ಸರ್ಕಾರ ಜಾರಿ ಮಾಡಲು ಹೊರಟಿರುವ ಒಂದು ರಾಷ್ಟ್ರ, ಒಂದು ಚುನಾವಣೆ ಯೋಜನೆ ಪ್ರಾಯೋಗಿಕವಲ್ಲ ಎಂದು ಕಾಂಗ್ರೆಸ್ ನಾಯಕ ಶಶಿ ತರೂರ್ ಹೇಳಿದ್ದಾರೆ.
ಬಿಜೆಪಿ ನೇತೃತ್ವದ ಕೇಂದ್ರದ ʼಒಂದು ರಾಷ್ಟ್ರ, ಒಂದು ಚುನಾವಣೆʼ ಪ್ರಸ್ತಾಪವನ್ನು ಶುಕ್ರವಾರ (ಸೆಪ್ಟೆಂಬರ್ 2) ಟೀಕಿಸಿದ ಕಾಂಗ್ರೆಸ್ ನಾಯಕ ಶಶಿ ತರೂರ್, ಅಂತಹ ವ್ಯವಸ್ಥೆಯನ್ನು ಜಾರಿಗೆ ತರಲು ಯಾವುದೇ ಪ್ರಾಯೋಗಿಕ ಮಾರ್ಗವಿಲ್ಲ ಎಂದು ಹೇಳಿದ್ದಾರೆ.
ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸದಸ್ಯರಾದ ನಂತರ ತಮ್ಮ ಲೋಕಸಭಾ ಕ್ಷೇತ್ರಕ್ಕೆ ತಮ್ಮ ಮೊದಲ ಭೇಟಿಯಲ್ಲಿ ತಿರುವನಂತಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ತರೂರ್, ಸರ್ಕಾರದ ‘ಒಂದು ರಾಷ್ಟ್ರ, ಒಂದು ಚುನಾವಣೆ’ ಉಪಕ್ರಮವು ಸಂಸದೀಯ ಆಧಾರದ ಮೇಲೆ ಅಸ್ತಿತ್ವದಲ್ಲಿರುವ ವ್ಯವಸ್ಥೆಗೆ ವಿರುದ್ಧವಾಗಿರುತ್ತದೆ ಎಂದು ಹೇಳಿದರು.
ಪ್ರಜಾಪ್ರಭುತ್ವದಲ್ಲಿ ಪಕ್ಷಗಳು ಬಹುಮತವನ್ನು ಕಳೆದುಕೊಂಡರೆ ಅಧಿಕಾರದಲ್ಲಿ ಮುಂದುವರಿಯಲು ಸಾಧ್ಯವಿಲ್ಲ. ನೀವು ಅಂತಹ ವ್ಯವಸ್ಥೆಯನ್ನು ಕಾರ್ಯಗತಗೊಳಿಸಲು ಯಾವುದೇ ಪ್ರಾಯೋಗಿಕ ಮಾರ್ಗವಿಲ್ಲ ಎಂದು ಕಿಡಿಕಾರಿದ್ದಾರೆ.
ನಿನ್ನೆಯಷ್ಚೇ ಕೇಂದ್ರ ಸರ್ಕಾರ ಒಂದು ರಾಷ್ಟ್ರ, ಒಂದು ಚುನಾವಣೆ ಸಾಧಕ-ಭಾದಕಗಳನ್ನು ಅರಿಯಲು ಮಾಜಿ ರಾಷ್ಚ್ರಪತಿ ರಾಮನಾಥ್ ಕೋವಿಂದ್ ಅವರ ನೇತೃತ್ವದ ಸಮಿತಿ ರಚನೆ ಮಾಡಿದೆ.