ಉತ್ತರಪ್ರದೇಶದ ಅಯೋಧ್ಯೆಯಲ್ಲಿ (Ayodhya) ಬಲ ರಾಮನ (Ram lalla) ಪ್ರಾಣ ಪ್ರತಿಷ್ಠಾಪನೆಯಾಗಿ ಇಂದಿಗೆ ಒಂದು ವರ್ಷ ಪೂರ್ಣವಾಗಿದೆ. ಕಳೆದ ವರ್ಷದ ಜನವರಿ 22 ರಂದು ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ ನೆರವೇರಿಸಲಾಗಿತ್ತು.

ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ (Pm Narendra modi) ಅವರ ಸಮ್ಮುಖ ಪ್ರಾಣ ಪ್ರತಿಷ್ಠಾಪನೆ ಮಾಡಲಾಗಿತ್ತು. ಆದರೆ ಹಿಂದೂ ಕ್ಯಾಲೆಂಡರ್ ಪ್ರಕಾರ ಜನವರಿ 11 ರಂದೇ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ವರ್ಷಾಚರಣೆ ಎನ್ನಲಾಗಿದೆ. ಹೀಗಾಗಿ ೧೦ ದಿನಗಳ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆಯ ವರ್ಷಾಚರಣೆಯನ್ನು ಅಯೋಧ್ಯೆಯ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್ ನೆರವೇರಿಸಿದೆ.
ಜನವರಿ 11 ರಿಂದ 3 ದಿನ ಕಾಲ ಹೋಮ, ಹವನ, ಯಾಗ, ಸಂಗೀತ, ರಾಮಕಥಾ ವಾಚನ ನಡೆಸುವ ಮೂಲಕ ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ವರ್ಷಾಚರಣೆಯನ್ನು ಸಂಭ್ರಮಿಸಿದೆ.ಹೀಗಾಗಿ ಇಂದು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನಿಂದ ವಿಶೇಷ ಕಾರ್ಯಕ್ರಮಗಳಿಲ್ಲ ಎನ್ನಲಾಗಿದೆ.