ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕೆ ಬಡಿದಾಟ ನಡೆದಿರುವ ಘಟನೆ ಮಡಿವಾಳ ಮಾರ್ಕೆಟ್ ನಲ್ಲಿ (Madiwal market) ನಡೆದಿದೆ. ಎರಡುಗುಂಪುಗಳು ದೊಣ್ಣೆ ಹಾಗೂ ಮಾರಕಾಸ್ತ್ರ ಹಿಡಿದು ಹೊಡೆದಾಟ ನಡೆಸಿದ್ದಾರೆ. ಜನರು ಓಡಾಡುವ ರಸ್ತೆ ಮಧ್ಯದಲ್ಲೇ ಈ ರೀತಿ ಮಾರಕಾಸ್ತ್ರಗಳನ್ನು ಹಿಡಿದು ಬಡಿದಾಡಿಕೊಂಡಿದ್ದಾರೆ.
ಇಲ್ಲಿನ ಮಡಿವಾಳ ಮಾರ್ಕೆಟ್ ನಲ್ಲಿ ಅಂಗಡಿ ಇಡುವ ವಿಚಾರಕ್ಕೆ ಗಲಾಟೆ ನಡೆದಿದ್ದು, ರಾಘವೇಂದ್ರ ಹಾಗೂ ಚಂದ್ರು ಎಂಬ ಈ ಇಬ್ಬರ ಗುಂಪಿನ ನಡುವೆ ಗಲಾಟೆ ನಡೆದಿದ್ದು,ಈ ಘಟನೆ ಸಂಬಂಧ ದೂರು ಪ್ರತಿ ದೂರು ದಾಖಲಾಗಿದೆ.
ಶನಿವಾರ ಮಡಿವಾಳ ಮಾರ್ಕೆಟ್ ನಲ್ಲಿ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಎರಡು ಗಂಪುಗಳ ನಡುವಿನ ಹೊಡೆದಾಟದ ದೃಶ್ಯ ಸಿಸಿಟಿವಿಯಲ್ಲಿ (CCTV) ಸೆರೆಯಾಗಿದ್ದು, ಸದ್ಯ ಮಡಿವಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.