ಬೆಂಗಳೂರು;ಯುವಕನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಮಂಗಳವಾರ ರಾತ್ರಿ ಸಂಪಿಗೆ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಹೆಗಡೆನಗರ ನಿವಾಸಿ ಸಲ್ಮಾನ್ ಕೊಲೆಯಾದ ಯುವಕ. ಸಲ್ಮಾನ್ ಫರ್ನಿಚರ್ ಅಂಗಡಿಯಲ್ಲಿ ಕೆಲಸ ಮಾಡಿಕೊಂಡಿದ್ದು.
ನಿನ್ನೆ ರಾತ್ರಿ 11 ಗಂಟೆಯ ವೇಳೆ ಮನೆಯಲ್ಲಿ ಕೆಲಸ ಮುಗಿಸಿ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ದುಷ್ಕರ್ಮಿಗಳು ಚೂರಿಯಿಂದ ಇರಿದು ಕೊಲೆ ಮಾಡಿದ್ದಾರೆ.
ಈ ಕುರಿತು ಸಂಪಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಸ್ಥಳಕ್ಕೆ ಪೊಲೀಸರು ತೆರಳಿ ಪರಿಶೀಲನೆ ನಡೆಸಿದ್ದಾರೆ.ಯಾವ ಕಾರಣಕ್ಕಾಗಿ ಕೊಲೆ ನಡೆದಿದೆ ಎಂಬುವುದು ತಿಳಿದು ಬಂದಿಲ್ಲ.ಈ ಕುರಿತು ಪೊಲೀಸರು ಸಿಸಿಟಿವಿ ದೃಶ್ಯ ಪರಿಶೀಲನೆ ನಡಸಿ ತನಿಖೆ ಕೈಗೊಂಡಿದ್ದಾರೆ.