ಈ ಸರ್ಕಾರ ಬಂದಮೇಲೆ ಯಾವುದೇ ರೀತಿಯಾಗಿ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ ಕಾದು ನೋಡಿ ಆಪರೇಷನ್ ಹಸ್ತ ಆಗಲ್ಲ ಆಪರೇಷನ್ ಕಮಲ ಆಗುತ್ತೆ ಎಂದು ಮಾಜಿ ಸಚಿವ ಮುರುಗೇಶ್ ನಿರಾಣಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಬಾದಾಮಿ ತಾಲೂಕಿನ ಕೆರಕಲಮಟ್ಟಿ ಗ್ರಾಮದಲ್ಲಿ ಮಾತನಾಡಿದ ಬಿಜೆಪಿಯ ಮಾಜಿ ಸಚಿವ ಮುರುಗೇಶ್ ನಿರಾಣಿ, ಶಾಲಾ ಮಕ್ಕಳು ಕೆಲಸಕ್ಕೆ ಹೋಗುವವರಿಗೆ ಬಸ್ನಲ್ಲಿ ಕುಳಿತುಕೊಳ್ಳಲು ಸೀಟ್ ಸಿಗುತ್ತಿಲ್ಲ. ಮನೆ ಸಣ್ಣ ಕೈಗಾರಿಕೆಗಳಿಗೆ ಕನಿಷ್ಠ 60% ಗಿಂತಲೂ ಹೆಚ್ಚುವರಿ ಬಿಲ್ ಬರುತ್ತಿದೆ. ಬಿಟ್ಟಿ ಭಾಗ್ಯದಿಂದ ಈ ವರ್ಷ 25,000 ಕೋಟಿ ಖರ್ಚು ಮಾಡುವುದಿಲ್ಲ. ಇದರಿಂದ ಕಾಂಗ್ರೆಸ್ ಸರ್ಕಾರದ ಬಗ್ಗೆ ಜನರು ಬಹಳವಾಗಿ ಬೇಸರಗೊಂಡಿದ್ದಾರೆ ಎಂದು ತಿಳಿಸಿದರು.