• Home
  • About Us
  • ಕರ್ನಾಟಕ
Thursday, October 23, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

MB Patil: ಬೆಂಗಳೂರು ಸುತ್ತಮುತ್ತ ಅರ್ಬನ್ ಫಾರೆಸ್ಟ್ ಗೆ ಅವಕಾಶ..!!

ಪ್ರತಿಧ್ವನಿ by ಪ್ರತಿಧ್ವನಿ
October 17, 2025
in Top Story, ಅಂಕಣ, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಾಣಿಜ್ಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಬ್ರಿಗೇಡ್ ಸಮೂಹದಿಂದ 1 ಲಕ್ಷ ಗಿಡ ನೆಡುವ ಕಾರ್ಯಕ್ರಮಕ್ಕೆ ಚಾಲನೆ.

ADVERTISEMENT

ನಗರೀಕರಣ, ಕೈಗಾರಿಕೀಕರಣಗಳಿಂದಾಗಿ ಬೆಂಗಳೂರಿಗೆ ಇದ್ದ ಉದ್ಯಾನ ನಗರಿ ಎಂಬ ಹೆಗ್ಗಳಿಕೆ ಮಸುಕಾಗಿದೆ. ಆದರೆ, ಇಲ್ಲಿ ಮತ್ತು ಸುತ್ತಮುತ್ತಲಿನ ಪಟ್ಟಣಗಳಲ್ಲಿ ನಗರ ಅರಣ್ಯ (ಅರ್ಬನ್‌ ಫಾರೆಸ್ಟ್)‌ ಬೆಳೆಸಲು ಯಥೇಚ್ಛ ಅವಕಾಶಗಳಿವೆ. ಮುಂದಿನ ದಿನಗಳಲ್ಲಿ ʻನಮ್ಮ ಬೆಂಗಳೂರು, ಹಸಿರು ಬೆಂಗಳೂರುʼ ಆಗಬೇಕು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಆಶಿಸಿದ್ದಾರೆ.

ಬ್ರಿಗೇಡ್‌ ಫೌಂಡೇಷನ್‌ ಶುಕ್ರವಾರ ದೇವನಹಳ್ಳಿ ಸಮೀಪದ ಹರಳೂರಿನಲ್ಲಿ ಇರುವ ಕೆಐಎಡಿಬಿ ಏರೋಸ್ಪೇಸ್‌ ಪಾರ್ಕ್-‌2ರಲ್ಲಿ ಏರ್ಪಡಿಸಿದ್ದ, ಒಂದು ಲಕ್ಷ ಗಿಡ ನೆಡುವ ಕಾರ್ಯಕ್ರಮ ʻಫ್ರಮ್‌ ಸ್ಯಾಪ್ಲಿಂಗ್ಸ್‌ ಟು ಎ ಸ್ಯಾಂಕ್ಚುರಿʼ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ನಾವು ಕೃಷಿ, ಕೈಗಾರಿಕೆ ಮತ್ತು ಆಹಾರ ಈ ಮೂರೂ ವಲಯಗಳ ನಡುವೆ ಸಮತೋಲನ ಸಾಧಿಸಿಕೊಂಡು ಹೋಗಬೇಕಾಗಿದೆ. ಇವು ನಮ್ಮ ಅಸ್ತಿತ್ವ ಮತ್ತು ಅಭಿವೃದ್ಧಿಗೆ ಮೂಲಭೂತ ಅಗತ್ಯಗಳಾಗಿವೆ. ಇವುಗಳಲ್ಲಿ ಯಾವುದನ್ನೂ ನಾವು ನಿಷೇಧಿಸುವುದು ಸಾಧ್ಯವಿಲ್ಲ. ಆದ್ದರಿಂದ ಮಿಯಾವಾಕಿ ಅರಣ್ಯದ ಮಾದರಿಯನ್ನು ನಾವು ಅಳವಡಿಸಿಕೊಂಡು, ಪರಿಸರವನ್ನು ಬೆಳೆಸುವ ಕೆಲಸವನ್ನೂ ಮಾಡಬೇಕಾದ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.

ತಮ್ಮ ತವರು ವಿಜಯಪುರ ಜಿಲ್ಲೆ ಹಿಂದೆ ಮರಗಳಿಲ್ಲದೆ ಭಣಗುಡುತ್ತಿತ್ತು. ಹತ್ತು ವರ್ಷಗಳ ಹಿಂದೆ ಅಲ್ಲಿ ಕೇವಲ ಶೇಕಡ 0.17ರಷ್ಟು ಮಾತ್ರ ಅರಣ್ಯವಿತ್ತು. ಈಗ ಅಲ್ಲಿ ಸ್ವಪ್ರಯತ್ನದಿಂದ ಒಂದೂವರೆ ಕೋಟಿ ಗಿಡಗಳನ್ನು ನೆಡಲಾಗಿದೆ. ಅರಣ್ಯ ಪ್ರಮಾಣ ಈಗ ಶೇ.2ರಷ್ಟಾಗಿದೆ. ವಿಜಯಪುರ ಜಿಲ್ಲಾ ಕೇಂದ್ರಕ್ಕೆ ಸಮೀಪದಲ್ಲಿರುವ ಮಮದಾಪುರದಲ್ಲಿ ಸೌರವಿದ್ಯುತ್‌ ಮತ್ತು ಹನಿ ನೀರಾವರಿ ಮೂಲಕ ಅರಣ್ಯವನ್ನು ಸೃಷ್ಟಿಸಲಾಗಿದೆ. ಇದರಿಂದಾಗಿ ಗಿಡಮರಗಳಿಂದ ತುಂಬಿರುವ ಎರಡು ಗುಡ್ಡಗಳೇ ಅಲ್ಲಿ ನಿರ್ಮಾಣವಾಗಿವೆ. ಈ ಮಾದರಿಯನ್ನು ಸ್ವತಃ ಅರಣ್ಯ ಇಲಾಖೆ ಅಳವಡಿಸಿಕೊಂಡಿದ್ದು, ವರ್ಷಕ್ಕೆ ಐದು ಕೋಟಿ ಗಿಡ ನೆಡುವ ಗುರಿ ಹಾಕಿಕೊಂಡಿದೆ. ಇದನ್ನು ನೋಡಲು ಬೇರೆಬೇರೆ ರಾಜ್ಯಗಳು ಮತ್ತು ವಿದೇಶಗಳಿಂದಲೂ ಆಸಕ್ತರು ಬರುತ್ತಿದ್ದಾರೆ. ನ್ಯೂಯಾರ್ಕ್‌ ಟೈಮ್ಸ್‌ ಪತ್ರಿಕೆ ಕೂಡ ಇದರ ಬಗ್ಗೆ ಸವಿವರವಾಗಿ ವರದಿ ಪ್ರಕಟಿಸಿದೆ ಎಂದು ಅವರು ವಿವರಿಸಿದ್ದಾರೆ.

ನಮಗೆ ಕೃಷಿಯೂ ಬೇಕು, ಕೈಗಾರಿಕೆಯೂ ಬೇಕು. ಇತ್ತೀಚೆಗೆ ಲಂಡನ್‌ನಲ್ಲಿ ಕ್ಯೂ ಗಾರ್ಡನ್‌ಗೆ ಭೇಟಿ ಕೊಟ್ಟಿದ್ದಾಗ ಅಲ್ಲಿಯ ಮಾದರಿಗಳನ್ನು ವೀಕ್ಷಿಸಿದೆ. ಅದು ನಮ್ಮ ಲಾಲ್‌ಬಾಗ್‌ನಷ್ಟೇ ಇದ್ದರೂ, ಅತ್ಯುತ್ತಮ ವಿಧಾನಗಳು ಅಲ್ಲಿವೆ. ಇದನ್ನೆಲ್ಲ ನಾನು ಸರಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರಿಗೆ ವಿವರಿಸಿದ್ದೇನೆ. ಕ್ಯೂ ಗಾರ್ಡನ್‌ನಲ್ಲಿರುವ ಮಾದರಿಗಳನ್ನು ನಮ್ಮಲ್ಲೂ ಅಳವಡಿಸಿಕೊಳ್ಳಬಹುದು. ಬೇರೆ ಯಾರೋ ಬಂದು ನಮ್ಮ ಪರಿಸರವನ್ನು ಸಂರಕ್ಷಿಸುತ್ತಾರೆ ಎಂದುಕೊಳ್ಳುವುದೇ ನಿಜವಾದ ಸಮಸ್ಯೆ ಎಂಬ ಪರಿಸರ ಚಿಂತ ರಾಬರ್ಟ್‌ ಸ್ವಾನ್‌ನ ಮಾತು ನಮಗೆ ಎಚ್ಚರಿಕೆಯ ಗಂಟೆಯಾಗಬೇಕು ಎಂದು ಅವರು ನುಡಿದಿದ್ದಾರೆ.

ಬ್ರಿಗೇಡ್‌ ಸಮೂಹದವರು ವೈಟ್‌ಫೀಲ್ಡ್‌ನಲ್ಲಿ ಮಿಯಾವಾಕಿ ಅರಣ್ಯವನ್ನು ಅಭಿವೃದ್ಧಿ ಪಡಿಸಿರುವುದು ಶ್ಲಾಘನೀಯ ಸಂಗತಿಯಾಗಿದೆ. ನಾನು ಒಂದು ದಿನ ಪರಿಸರಾಸಕ್ತನಾಗಿ ಭೇಟಿ ಕೊಡಲಿದ್ದೇನೆ. ಪರಿಸರ ಸಂರಕ್ಷಣೆಯ ವಿಚಾರದಲ್ಲಿ ನಾನು ಕೈಗಾರಿಕಾ ಸಚಿವನಾಗಿ ಯೋಚಿಸುವುದಿಲ್ಲ. ವಿಜಯಪುರ ಜಿಲ್ಲೆಯೊಂದರಲ್ಲೇ ಒಂದೂವರೆ ಕೋಟಿ ಗಿಡಗಳನ್ನು ನೆಟ್ಟಿರುವಾಗ ರಾಜ್ಯದಲ್ಲಿ ಎಷ್ಟು ಕೋಟಿ ಗಿಡಗಳನ್ನು ನೆಡಬಹುದು ಎನ್ನುವುದು ತಿಳಿಯುತ್ತದೆ. ನಮ್ಮ ಜಿಲ್ಲೆಯಲ್ಲಿ ರೈತರಿಗೆ ಅವರು ಬಯಸುವಂತಹ ಗಿಡಗಳನ್ನೇ ಕೊಡಲಾಗುತ್ತಿದೆ. ಇದರ ಅಂಗವಾಗಿ ಪ್ರತೀವರ್ಷವೂ ವೃಕ್ಷಥಾನ್‌ ನಡೆಸುತ್ತಿದ್ದು, ಅದರಲ್ಲಿ ಹದಿನೈದು ಸಾವಿರ ಮಂದಿ ಉತ್ಸಾಹದಿಂದ ಭಾಗವಹಿಸುತ್ತಾರೆ ಎಂದು ಪಾಟೀಲ ತಮ್ಮ ಅನುಭವ ಹಂಚಿಕೊಂಡರು.

ಪಾಟೀಲರ ಬಗ್ಗೆ ಮುನಿಯಪ್ಪ ಮೆಚ್ಚುಗೆ

ಸಚಿವ ಕೆ ಎಚ್‌ ಮುನಿಯಪ್ಪ ಮಾತನಾಡಿ, ʻಮನಸ್ಸು ಮಾಡಿದರೆ ಎಂತಹ ಅದ್ಭುತವನ್ನು ಸಾಧಿಸಬಹುದು ಎನ್ನುವುದನ್ನು ಸಚಿವ ಎಂ ಬಿ ಪಾಟೀಲರು ವಿಜಯಪುರದಲ್ಲಿ ಮಾಡಿ ತೋರಿಸುತ್ತಿದ್ದಾರೆ. ಇವರಿಂದಾಗಿ, ವಿಜಯಪುರ ಈಗ ಹಸುರೀಕರಣ ಮತ್ತು ಜಲ ಸಂರಕ್ಷಣೆಯ ನಾಡಾಗಿದೆ. ಈ ಮೂಲಕ ಅವರು ತಮ್ಮನ್ನು ಚುನಾಯಿಸಿದ ಕ್ಷೇತ್ರದ ಋಣವನ್ನು ಶಾಶ್ವತವಾಗಿ ತೀರಿಸಿದ್ದಾರೆ. ಈಗ ಕೂಡ ಎಂ ಬಿ ಪಾಟೀಲರು ಕೈಗಾರಿಕಾ ಸಚಿವರಾಗಿ ದೂರದೃಷ್ಟಿಯಿಂದ ಕೆಲಸ ಮಾಡುತ್ತಿದ್ದು, ಕೆಲದಿನಗಳ ಹಿಂದಷ್ಟೇ ಮೂರು ಲಕ್ಷ ಕೋಟಿ ರೂ. ಬಂಡವಾಳ ತಂದಿದ್ದಾರೆ. ಇಂತಹ ಕೆಲಸ ಇಡೀ ಭಾರತದಲ್ಲೇ ಎಲ್ಲೂ ಆಗುತ್ತಿಲ್ಲ. ಅವರಿಗೆ ನಿಜಕ್ಕೂ ಉಜ್ವಲ ಭವಿಷ್ಯವಿದೆ. ಪರಿಸರ ಸಂರಕ್ಷಣೆಯ ಬಗ್ಗೆಯೂ ಅವರಿಗೆ ಸ್ಪಷ್ಟವಾದ ಚಿಂತನೆ ಇದೆʼ ಎಂದು ಕೊಂಡಾಡಿದರು.

ಕಾರ್ಯಕ್ರಮದಲ್ಲಿ ಬ್ರಿಗೇಡ್‌ ಸಮೂಹದ ಟ್ರಸ್ಟಿ ಎಂ ಆರ್‌ ಜಯಶಂಕರ್‌, ಬ್ರಿಗೇಡ್‌ ಫೌಂಡೇಷನ್‌ ಸಿಇಒ ಶಿವಯೋಗಿ ಕಳಸದ, ವಿಮಾನ ನಿಲ್ದಾಣ ಪ್ರದೇಶ ಪ್ರಾಧಿಕಾರದ ಅಧ್ಯಕ್ಷ ವಿ.ಶಾಂತಕುಮಾರ್‌, ನಿವೃತ್ತ ಪೊಲೀಸ್‌ ಅಧಿಕಾರಿ ಮೇಘರಿಕ್‌, ಹರಳೂರು ಗ್ರಾಪಂ ಅಧ್ಯಕ್ಷ ದೇವರಾಜು ಮುಂತಾದವರು ಉಪಸ್ಥಿತರಿದ್ದರು.

Tags: bm patild k shivakumar reacts on m b patil statementdks vs mb patilM B PatilMB Patilmb patil angrymb patil bijapurmb patil birthdaymb patil latest mewsmb patil latest newsmb patil meetingmb patil ministermb patil newsmb patil news todaymb patil oathmb patil oath ceremonymb patil speechmb patil statedmb patil statementmb patil supportersmb patil today newsmb patil todays newsmb patil todays speechmb patil videoMinister MB Patil
Previous Post

CM Siddaramaiah: ಕನಕದಾಸರ ಆದರ್ಶಗಳನ್ನು ಕೇಳಿ ಮರೆಯಬಾರದು: ಜೀವನದಲ್ಲಿ ಅಳವಡಿಸಿಕೊಳ್ಳಿ..!!

Next Post

Sathish jarakiholi :ಸಿಎಂ ರೇಸ್ ಮಿಂದ ಹಿಂದಕ್ಕೆ ಸರಿದ್ರಾ ಜಾರಕಿಹೊಳಿ..?

Related Posts

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
0

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೋ ಕೇಸ್ ರದ್ಧತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಕಾಯ್ದಿರಿಸಿದೆ....

Read moreDetails
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

October 23, 2025
ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

ದೀಪಾವಳಿ ಹಬ್ಬದ ಪಟಾಕಿ ಎಫೆಕ್ಟ್: ಎಷ್ಟು ಜನರಿಗೆ ಕರಾಳ..?

October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

October 23, 2025
Next Post
Sathish jarakiholi :ಸಿಎಂ ರೇಸ್ ಮಿಂದ ಹಿಂದಕ್ಕೆ ಸರಿದ್ರಾ ಜಾರಕಿಹೊಳಿ..?

Sathish jarakiholi :ಸಿಎಂ ರೇಸ್ ಮಿಂದ ಹಿಂದಕ್ಕೆ ಸರಿದ್ರಾ ಜಾರಕಿಹೊಳಿ..?

Recent News

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್
Top Story

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

by ಪ್ರತಿಧ್ವನಿ
October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ
Top Story

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

by ಪ್ರತಿಧ್ವನಿ
October 23, 2025
ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ
Top Story

ಒಕ್ಕೂಟ ಸರ್ಕಾರದ ಅನುದಾನ ತಾರತಮ್ಯ ಚರ್ಚೆ- ಸಿದ್ದರಾಮಯ್ಯ ವಿರುದ್ಧ ಜೋಷಿ ಕಿಡಿ

by ಪ್ರತಿಧ್ವನಿ
October 23, 2025
ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ
Top Story

ಡಿಕೆಶಿಯನ್ನ ಗಂಗಾನದಿಯಲ್ಲಿ ಮುಳುಗಿಸಿದಂತಾಗಿದೆ

by ಪ್ರತಿಧ್ವನಿ
October 23, 2025
Home Minister G. Parameshwar: ಸತೀಶ್ ಜಾರಕಿಹೊಳಿ ನಾಯಕತ್ವ ಮಾತು : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ
Top Story

Home Minister G. Parameshwar: ಸತೀಶ್ ಜಾರಕಿಹೊಳಿ ನಾಯಕತ್ವ ಮಾತು : ಗೃಹ ಸಚಿವ ಜಿ.ಪರಮೇಶ್ವರ್ ಸ್ಪಷ್ಟನೆ

by ಪ್ರತಿಧ್ವನಿ
October 23, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

BSY ವಿರುದ್ಧ ಪೊಕ್ಸೋ ಕೇಸ್- ಆದೇಶ ಕಾಯ್ದಿರಿಸಿದ ಹೈಕೋರ್ಟ್

October 23, 2025
ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

ಯತೀಂದ್ರ ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಬೆಂಬಲಿಕ ಶಾಸಕ ಕಿಡಿ

October 23, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!