• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, April 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಉಚಿತ ಕರೋನಾ ಲಸಿಕೆ: ಸರ್ಕಾರ ಸುಳ್ಳು ಮಾಹಿತಿ ನೀಡಿ ಜನರಿಗೆ ದ್ರೋಹವೆಸಗಿದೆ -ಸಿದ್ದರಾಮಯ್ಯ

Any Mind by Any Mind
May 12, 2021
in ಕರ್ನಾಟಕ
0
ಉಚಿತ ಕರೋನಾ ಲಸಿಕೆ:  ಸರ್ಕಾರ ಸುಳ್ಳು ಮಾಹಿತಿ ನೀಡಿ ಜನರಿಗೆ ದ್ರೋಹವೆಸಗಿದೆ -ಸಿದ್ದರಾಮಯ್ಯ
Share on WhatsAppShare on FacebookShare on Telegram

ADVERTISEMENT

ಕರೋನಾ ಸೋಂಕು ನಿಯಂತ್ರಿಸುವಲ್ಲಿ ಮತ್ತು ಸೋಂಕಿತರ ಪ್ರಾಣ ರಕ್ಷಣೆ ವಿಚಾರದಲ್ಲಿ ನಿರ್ಲಕ್ಸ್ಯ ವಹಿಸಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರದ ಧೋರಣೆ ಖಂಡಿಸಿ ವಿಕಾಸಸೌಧ ಆವರಣದ ಗಾಂಧಿ ಪ್ರತಿಮೆ ಮುಂಭಾಗ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರು ಇಂದು ಸಾಂಕೇತಿವಾಗಿ ಪ್ರತಿಭಟನೆ ನಡೆಸಿದರು.

ಕರೋನಾ ಲಸಿಕೆ ವಿಚಾರದಲ್ಲಿ ಸುಳ್ಳು ಮಾಹಿತಿ ನೀಡುವ ಮೂಲಕ ಕೇಂದ್ರ ಮತ್ತು ರಾಜ್ಯ ಸರ್ಕಾರ ಜನರಿಗೆ ದ್ರೋಹವೆಸಗಿದೆ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಲಸಿಕೆ ಲಭ್ಯ ಇಲ್ಲ ಎಂದರೆ ಎಲ್ಲರಿಗೂ ಉಚಿತ ಲಸಿಕೆ ನೀಡುವುದಾಗಿ ಏಕೆ ಹೇಳಬೇಕಿತ್ತು. ರಾಜ್ಯದಲ್ಲಿ ಅಭಿಯಾನಕ್ಕೆ ಚಾಲನೆ ನೀಡುವ ಅಗತ್ಯವಾದರೂ ಏನಿತ್ತು ಎಂದು ಅವರು ಪ್ರಶ್ನಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, 18 ವರ್ಷ ಮೀರಿದ ಎಲ್ಲರಿಗೂ ಲಸಿಕೆ ಹಾಕುವುದಾಗಿ ಪ್ರಧಾನಿಯವರು ಘೋಷಣೆ ಮಾಡಿದರು. ಆದರೆ, 45, 60 ವರ್ಷ ಮೀರಿದವರಿಗೇ ಇನ್ನೂ ಸಿಗುತ್ತಿಲ್ಲ. ಮೊದಲ ಡೋಸ್ ಪಡೆದವರೇ ಎರಡನೇ ಡೋಸ್‍ಗೆ ಪರದಾಡುತ್ತಿದ್ದಾರೆ. ಮೋದಿಯವರಿಗೆ ಮುಖ್ಯಮಂತ್ರಿಯಾಗಿ 13 ವರ್ಷ, ಪ್ರಧಾನಿಯಾಗಿ ಏಳು ವರ್ಷಗಳ ಅನುಭವವಿದೆ. ಆದರೂ ಜನರಿಗೆ ಸುಳ್ಳು ಮಾಹಿತಿ ನೀಡಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೂ ಮೇ ಒಂದರಂದು ಲಸಿಕೆ ಅಭಿಯಾನ ಉದ್ಘಾಟಿಸಿದರು. ಆಗ ವ್ಯಾಕ್ಸಿನ್ ಎಲ್ಲಿತ್ತು ? ಮುಖ್ಯ ಕಾರ್ಯದರ್ಶಿಗಳು ಮೇ ಮೂರು ಅಥವಾ ನಾಲ್ಕನೇ ವಾರದಲ್ಲಿ ಲಸಿಕೆ ಬರುತ್ತದೆ ಎಂದಿದ್ದಾರೆ. ಆರೋಗ್ಯ ಸಚಿವರು 15 ದಿನ ಲಸಿಕೆ ಹಾಕಲು ಸಾಧ್ಯವಿಲ್ಲ ಎನ್ನುತ್ತಾರೆ. ಇದನ್ನು ಜವಾಬ್ದಾರಿಯುತ ಸರ್ಕಾರ ಎಂದು ಕರೆಯಲು ಆಗುವುದೇ ? ಜನರು ಲಸಿಕೆಗಾಗಿ ಸರತಿ ಸಾಲಿನಲ್ಲಿ ದಿನಗಟ್ಟಲೇ ಕಾಯುತ್ತಿದ್ದಾರೆ ಇದರ ಹೊಣೆಗಾರರು ಯಾರು ಎಂದು ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಲಸಿಕೆ ನೀಡಿ - ಪ್ರಾಣ ಉಳಿಸಿ; ಕಾಂಗ್ರೆಸ್ ಪ್ರತಿಭಟನೆ | #siddaramiah #dkshivakumar #coronavaccine #covid19

ಮತ್ತೊಂದೆಡೆ ಆಕ್ಸಿಜನ್ ಸಿಗದೆ ಸೋಂಕಿತರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ನಮ್ಮ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಸೋಂಕು ವ್ಯಾಪಕವಾಗಿದ್ದು, ಎರಡನೇ ಅಲೆ ತೀವ್ರವಾಗಿ ಬಾಧಿಸುತ್ತಿದೆ. ಈ ಕುರಿತು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಮಾಹಿತಿ ಇತ್ತು. ತಜ್ಞರೂ ಸಹ ವರದಿ ನೀಡಿದ್ದರು. ಆದರೆ ತಜ್ಞರ ವರದಿಯನ್ನು ಉಭಯ ಸರ್ಕಾರಗಳು ಉದಾಸೀನ ಮಾಡಿ, ಸಲಹೆಗಳನ್ನು ನಿರ್ಲಕ್ಷಿಸಿದವು. ಅದರ ಪರಿಣಾಮವಾಗಿ ಕೆಟ್ಟ ಪರಿಸ್ಥಿತಿ ಎದುರಿಸುವಂತಾಗಿದೆ.

ದೇಶ ಮತ್ತು ರಾಜ್ಯ ಇಂತಹ ಸ್ಥಿತಿಗೆ ಬರಲು ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವವರೇ ನೇರ ಹೊಣೆಗಾರರು, ಮೊದಲೇ ಸಿದ್ಧತೆ ಮಾಡಿಕೊಂಡಿದ್ದರೆ, ಅಗತ್ಯ ವವಸ್ಥೆಗೆ ಕ್ರಮ ಕೈಗೊಂಡಿದ್ದರೆ ಪರಿಸ್ಥಿತಿ ಕೈ ಮೀರುತ್ತಿರಲಿಲ್ಲ. ಬೆಡ್, ಆಕ್ಸಿಜನ್, ರೆಮಿಡಿಸಿವಿರ್, ವೆಂಟಿಲೇಟರ್ ಸಿದ್ಧತೆ ಮಾಡಿಕೊಳ್ಳಲಿಲ್ಲ. ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಎನ್ನುವಂತೆ ಈಗ ಮಾಡುತ್ತಿದ್ದಾರೆ. ಸರ್ಕಾರ ತಜ್ಞರ ವರದಿ, ಸಲಹೆ ಕೇಳುವುದಿಲ್ಲ. ತಜ್ಞರೂ ಸರ್ಕಾರದ ನಿರ್ಲಕ್ಷ್ಯ ಧೋರಣೆ ನೋಡಿ ಮೌನಕ್ಕೆ ಶರಣಾಗಿದ್ದಾರೆಂದು ತರಾಟೆಗೆಳೆದಿದ್ದಾರೆ.

ಕೊರೋನಾ ಸೋಂಕಿತರ ಪ್ರಾಣ ರಕ್ಷಣೆಯಲ್ಲಿ ವಿಫಲವಾಗಿರುವ, ಬೆಡ್, ಆಕ್ಸಿಜನ್, ವೆಂಟಿಲೇಟರ್ ಒದಗಿಸುವಲ್ಲಿ ನಿರ್ಲಕ್ಷ ವಹಿಸಿರುವ, ಬಡವರಿಗಾಗಿ ವಿಶೇಷ್ ಪ್ಯಾಕೇಜ್ ಘೋಷಿಸದ ಕೇಂದ್ರ, ರಾಜ್ಯ @BJP4India ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ ಜೊತೆಗೂಡಿ ವಿಕಾಸಸೌಧ ಆವರಣದ ಗಾಂಧಿ ಪ್ರತಿಮೆ ಬಳಿ ಧರಣಿ ನಡೆಸಿದೆ. 1/2 pic.twitter.com/FOvqfTWZfw

— Siddaramaiah (@siddaramaiah) May 12, 2021

ರಾಜ್ಯದಲ್ಲಿ ಲಾಕ್‍ಡೌನ್ ಘೋಷಣೆಯಾಗಿದೆ. ಆದರೆ, ಕಟ್ಟುನಿಟ್ಟಾಗಿ ಮಾಡಿಲ್ಲ. ವಲಸೆ ಹೋಗಿರುವ ಕಾರ್ಮಿಕರಿಗೆ ಯಾವುದೇ ಪರಿಹಾರ ಘೋಷಣೆ ಮಾಡಿಲ್ಲ. ಅವರು ಬದುಕುವುದಾದರೂ ಹೇಗೆ ? ಜೀವ ಉಳಿಸಿಕೊಳ್ಳಲು ಬಡವರಿಗೆ ಪ್ಯಾಕೇಜ್ ಘೋಷಣೆ ಮಾಡಿ ಎಂದು ಒತ್ತಾಯ ಮಾಡಿದರೂ ಸರ್ಕಾರ ಕಿವಿಗೊಡಲಿಲ್ಲ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಹೀಗಾದರೆ ಸರ್ಕಾರದ ಜವಾಬ್ದಾರಿ ಏನು ? ಮುಖ್ಯಮಂತ್ರಿಯಾಗಿ ಯಡಿಯೂರಪ್ಪ ಅವರು ಏಕಿರಬೇಕು ? ಬೆಡ್ ಗೆ ಒಬ್ಬರು, ಲಸಿಕೆಗೆ ಇನ್ನೊಬ್ಬರು ಹೀಗೆ ಸಚಿವರನ್ನು ನೇಮಕ ಮಾಡಲಾಗಿದೆ. ಆದರೂ ಸೋಂಕಿತರ ಪರದಾಟ ನಿಂತಿಲ್ಲ. ಸಿದ್ಧತೆ ಮಾಡಿಕೊಳ್ಳದೆ ರಾಜ್ಯವನ್ನು ಇಂಥ ಸ್ಥಿತಿಗೆ ತಳ್ಳಿದ್ದಾರೆಂದು ಸಿದ್ದರಾಮಯ್ಯ ಅಸಮಧಾನ ವ್ಯಕ್ತಪಡಿಸಿದ್ದಾರೆ.

ಆಕ್ಸಿಜನ್ ನೀಡದೆ ಸೋಂಕಿತರನ್ನು ಸಾಯಿಸುತ್ತಿರುವುದು ಕೇಂದ್ರ ಮತ್ತು ರಾಜ್ಯ ಸರ್ಕಾರ ಮಾಡುತ್ತಿರುವ ಕೊಲೆಗಳು. ಸರ್ಕಾರಗಳು ಸತ್ತಿರುವುದರಿಂದಲೇ ನ್ಯಾಯಾಲಯಗಳು ಮಧ್ಯೆ ಪ್ರವೇಶ ಮಾಡಿವೆ. ಈಗಲಾದರೂ ಕೇಂದ್ರ ಸರ್ಕಾರ ಎಚ್ಚೆತ್ತು ಲಸಿಕೆ ಸಂಗ್ರಹಕ್ಕೆ ಮುಂದಾಗಲಿ.

18ವರ್ಷ ಮೀರಿದವರು ರಾಜ್ಯದಲ್ಲಿ 3.26 ಕೋಟಿ ಇದ್ದಾರೆ. ಅವರಿಗೆ ಆರೂವರೆ ಕೋಟಿ ಡೋಸ್ ಲಸಿಕೆ ಬೇಕು. ಎರಡು, ಮೂರು ತಿಂಗಳಲ್ಲಿ ಎಲ್ಲರಿಗೂ ವ್ಯಾಕ್ಸಿನ್ ನೀಡಿದಾಗ ಮಾತ್ರ ಈ ರೋಗ ತಡೆಯಲು ಸಾಧ್ಯ ಎಂದು ಸಿದ್ದರಾಮಯ್ಯ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಕೆಪಿಸಿಸಿ ಅಧ್ಯಕ್ಷರಾದ @DKShivakumar,
ಮಾಜಿ ಡಿಸಿಎಂ @DrParameshwara, ಕೆಪಿಸಿಸಿ ಕಾರ್ಯಾಧ್ಯಕ್ಷರಾದ @RLR_BTM, ಸಲೀಂ ಅಹಮದ್, ಮಾಜಿ ಸಚಿವರಾದ @thekjgeorge, ರಮೇಶ್ ಕುಮಾರ್, @krishnabgowda, ಮಾಜಿ ಸಂಸದ ಉಗ್ರಪ್ಪ, ಬಿ.ಕೆ. ಹರಿಪ್ರಸಾದ್ ಮತ್ತಿತರರು ಈ ಧರಣಿಯಲ್ಲಿ ಪಾಲ್ಗೊಂಡಿದ್ದರು. 2/2 pic.twitter.com/fxLEkARw3A

— Siddaramaiah (@siddaramaiah) May 12, 2021

ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ. ಶಿವಕುಮಾರ್, ಕಾಯಾಧ್ಯಕ್ಷರಾದ ರಾಮಲಿಂಗಾರೆಡ್ಡಿ, ಸಲೀಂ ಅಹಮದ್, ಮಾಜಿ ಉಪ ಮುಖ್ಯಮಂತ್ರಿಗಳಾದ ಡಾ. ಜಿ. ಪರಮೇಶ್ವರ, ವಿಧಾನಸಭೆ ಮಾಜಿ ಅದ್ಯಕ್ಷ ರಮೇಶ್ ಕುಮಾರ್, ಮಾಜಿ ಸಚಿವರಾದ ಕೆ.ಜೆ. ಜಾರ್ಜ್, ವಿ.ಮುನಿಯಪ್ಪ, ಸೀತಾರಾಂ, ಕೃಷ್ಣ ಬೈರೇಗೌಡ, ನಸೀರ್ ಅಹಮದ್, ದಿನೇಶ್ ಗುಂಡೂರಾವ್, ಎಚ್.ಎಂ. ರೇವಣ್ಣ, ಸಂಸದ ಜಿ.ಸಿ. ಚಂದ್ರಶೇಖರ್, ಮಾಜಿ ಸಂಸದ ವಿ.ಎಸ್. ಉಗ್ರಪ್ಪ, ಶಾಸಕರಾದ ಬೈರತಿ ಸುರೇಸ್, ಸೌಮ್ಯ ರೆಡ್ಡಿ, ರಿಜ್ವಾನ್ ಅರ್ಷದ್, ಹ್ಯಾರೀಸ್, ಯುವ ಕಾಂಗ್ರೆಸ್ ಅಧ್ಯಕ್ಷ ರಕ್ಷಾ ರಾಮಯ್ಯ ಈ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Previous Post

ರಾಜ್ಯದಲ್ಲಿ ಲಸಿಕೆ ಹಾಹಾಕಾರ: ಹಸೀಸುಳ್ಳಿಗೆ ಅಂಟಿಕೊಂಡ ಸರ್ಕಾರ..!

Next Post

ಕೋವಿಡ್ ಲಸಿಕೆ ಪಡೆಯಲು 80-90 ಕಿಮೀ ಪ್ರಯಾಣಿಸುತ್ತಿರುವ ಬೆಂಗಳೂರಿಗರು

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

April 9, 2026
Next Post
ಕೋವಿಡ್ ಲಸಿಕೆ ಪಡೆಯಲು 80-90 ಕಿಮೀ ಪ್ರಯಾಣಿಸುತ್ತಿರುವ ಬೆಂಗಳೂರಿಗರು

ಕೋವಿಡ್ ಲಸಿಕೆ ಪಡೆಯಲು 80-90 ಕಿಮೀ ಪ್ರಯಾಣಿಸುತ್ತಿರುವ ಬೆಂಗಳೂರಿಗರು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada